

Shivamogga: ಚಲಿಸುತ್ತಿದ್ದ ಬಸ್ ಬೆಂಕಿಗಾಹುತಿ, ಅದೃಷ್ಟವಶಾತ್ ಪ್ರಯಾಣಿಕರು ಪಾರು,
ಶಿವಮೊಗ್ಗದ ಸಾಗರ ಪಟ್ಟಣದ ಜೋಗ ರಸ್ತೆಯ ಕೆಎಸ್‌ಆರ್‌ಟಿಸಿ ಡಿಪೋ ಸಮೀಪ ಈ ಘಟನೆ ಸಂಭವಿಸಿದ್ದು, ಇಡೀ ಬಸ್ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ.

ಚಲಿಸುತ್ತಿದ್ದ ಬಸ್ ಬೆಂಕಿಗಾಹುತಿ
ಶಿವಮೊಗ್ಗ: ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ (KSRTC Bus) ನಲ್ಲಿ ಬೆಂಕಿ ಕಾಣಿಸಿಕೊಂಡು ಇಡೀ ಬಸ್ ಅಗ್ನಿಗಾಹುತಿಯಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗದ ಸಾಗರ ಪಟ್ಟಣದ ಜೋಗ ರಸ್ತೆಯ ಕೆಎಸ್‌ಆರ್‌ಟಿಸಿ ಡಿಪೋ ಸಮೀಪ ಈ ಘಟನೆ ಸಂಭವಿಸಿದ್ದು, ಇಡೀ ಬಸ್ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ.

ಮೂಲಗಳ ಪ್ರಕಾರ ಭಟ್ಕಳದಿಂದ ಸಾಗರ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ವಾಯುವ್ಯ ಕರ್ನಾಟಕ ಸಾರಿಗೆ ಬಸ್ಸಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಅಪಾಯ ಅರಿತ ಚಾಲಕ ಕೂಡಲೆ ಬಸ್ಸನ್ನು ನಿಲ್ಲಿಸಿದ್ದಾನೆ. ಬಳಿಕ ಬಸ್ ನಲ್ಲಿದ್ದ ಎಲ್ಲಾ 12 ಪ್ರಯಾಣಿಕರು ಬಸ್ಸಿನಿಂದ ಕೆಳಗೆಳಿದಿದ್ದಾರೆ. ಈ ವೇಳೆಗಾಗಲೇ ಬೆಂಕಿ ಇಡೀ ಬಸ್ ಗೆ ವ್ಯಾಪಿಸಿದೆ.
ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅಗ್ನಿ ದುರಂತಕ್ಕೆ ಕಾರಣ ತಿಳಿದುಬಂದಿಲ್ಲವಾದರೂ ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣವಾಗಿರಬಹದು ಎಂದು ಶಂಕಿಸಲಾಗಿದೆ.
