ಮಳೆ ಹಾನಿ ಪ್ರದೇಶ ವೀಕ್ಷಿಸಿ ಆರ್ಥಿಕ ಸಹಾಯ ನೀಡಿದ ಶಾಸಕ ಭೀಮಣ್ಣ

ಸಿದ್ದಾಪುರ: ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಸೋಮವಾರ ಸಿದ್ದಾಪುರ ತಾಲೂಕಿನ ಹಲಗೇರಿ ಹಾಗೂ ವಾಜಗೋಡ ಗ್ರಾಮ‌ ಪಂಚಾಯ್ತಿ ವ್ಯಾಪ್ತಿಯಲ್ಲಿ ಪ್ರಕೃತಿ ವಿಕೋಪದಿಂದ ಹಾನಿಯಾದ ಸ್ಥಳಗಳನ್ನು ವೀಕ್ಷಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.


ಸಿದ್ದಾಪುರ ತಾಲೂಕಿನ ದೊಡ್ಡಗದ್ದೆಯ ಅಂಗನವಾಡಿ ಹಾಗೂ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಮಕ್ಕಳ ಹಾಜರಾತಿ ಹಾಗೂ ಶಾಲೆಯ ಸ್ಥಿತಿಗತಿಯ ಮಾಹಿತಿ ಪಡೆದುಕೊಂಡರು. ನಂತರ ಸುತ್ಲಮನೆಯ ಪರಿಶಿಷ್ಟ ಕೇರಿಗೆ ಭೇಟಿ ನೀಡಿ ಮಳೆಯಿಂದ ಹಾನಿಯಾದ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿ ವೈಯಕ್ತಿಕ ಸಹಾಯ ನೀಡಿದರು.


ವಾಜಗೋಡ ಗ್ರಾಮ ಪಂಚಾಯ್ತಿಯ ದಾನ್ಮಾವನ ಹಳೆಬರಗಾಲದಲ್ಲಿ ಪ್ರಕೃತಿ ವಿಕೋಪದಿಂದ ಹಾನಿಯಾದ ರಾಮಾ ನಾರಾಯಣ ನಾಯ್ಕ ರ ಮನೆಗೆ ವೀಕ್ಷಿಸಿ ವೈಯಕ್ತಿಕ ಧನಸಹಾಯ ನೀಡಿದರು. ಸುಂಗೊಳ್ಳಿಮನೆಯಲ್ಲಿ ಹಾನಿಯಾದ ದೇವಕಿ ರಾಮಚಂದ್ರ ಹೆಗಡೆ ಮನೆಗೆ ಭೇಟಿ ನೀಡಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಗ್ರಾಪಂ ಪಿಡಿಓಗೆ ಸೂಚನೆ ನೀಡಿದರು.

ವಾಜಗೋಡಿನ ಶ್ರೀಪಾದ ರಾಮಕೃಷ್ಣ ಹೆಗಡೆ ಮನೆ ಹಾನಿಯಾಗಿರುವುದನ್ನು ವೀಕ್ಷಿಸಿ ಸೂಕ್ತ ಕ್ರಮಕ್ಕೆ ಸೂಚಿಸಿದರು. ಗಾಳಮಾಂವದಲ್ಲಿ ಮಳೆಯಿಂದ ಹಾನಿಯಾದ ದ್ಯಾವಾ ಪುಟ್ಟಾ ನಾಯ್ಕ ಇವರ ಮನೆಗೆ ಭೇಟಿ ನೀಡಿ ಪರಿಶೀಲಿಸಿ ವೈಯಕ್ತಿಕ ಸಹಾಯ ಮಾಡಿದರು. ಸಂಪಖಂಡದ ರಾಮ ದ್ಯಾವಾ ನಾಯ್ಕ ಹಾಗೂ ನಾಗೇಶ ಬೀರಾ ನಾಯ್ಕ ಇವರ ಮನೆ ಹಾನಿಯಾಗಿರುವುದನ್ನು ವೀಕ್ಷಿಸಿ ಆರ್ಥಿಕ ನೆರವು ನೀಡಿದರು. ಜತೆಗೆ ತಾಲೂಕಿನ ಗೊದ್ಲಮನೆಗೆ ಹೋಗುವ ರಸ್ತೆ ಪಕ್ಕ ಧರೆ ಕುಸಿದ ಸ್ಥಳವನ್ನು ವೀಕ್ಷಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.


ಈ ಸಂದರ್ಭದಲ್ಲಿ ತಾಲೂಕಾ ಪಂಚಾಯ್ತಿ ಇಓ ದೇವರಾಜ ಹಿತ್ತಲಕೊಪ್ಪ, ಉಪ ತಹಶೀಲ್ದಾರ ಡಿ.ಎಂ.ನಾಯ್ಕ, ಗ್ಯಾರೆಂಟಿ ಅನುಷ್ಠಾನ ಸಮಿತಿ ತಾಲೂಕಾ ಅಧ್ಯಕ್ಷ ಕೆ.ಜಿ.ನಾಗರಾಜ, ಡಿಸಿಸಿ ಉಪಾಧ್ಯಕ್ಷ ವಿ.ಎನ್.ನಾಯ್ಕ, ಪ್ರಧಾನ ಕಾರ್ಯದರ್ಶಿ ಸಿ.ಆರ್.ನಾಯ್ಕ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಬಾಲಕೃಷ್ಣ ನಾಯ್ಕ, ರೈತ ಮುಖಂಡ ವೀರಭದ್ರ ನಾಯ್ಕ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಸಾಬ್, ಅಣ್ಣಪ್ಪ ನಾಯ್ಕ ಶಿರಳಗಿ ಮತ್ತಿತರರು ಉಪಸ್ಥಿತರಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಶಿರಸಿ – ಹಣಕಾಸಿನ ವಿಚಾರ ಒಂದು ಸಾವು, ಮಹಿಳೆಯ ಬಂಧನ!

ಶಿರಸಿ ಪೊಲೀಸ್ರಿಂದ ಕಾರ್ಯಚರಣೆ. ಎಟಿಎಂ ನಿಂದ ಹಣ ತೆಗೆಯಲು ಮುಗ್ದ ಹೆಣ್ಣು ಮಕ್ಕಳಿಗೆ ನೆರವಾಗುವ ನಾಟಕಮಾಡಿ ಅವರ ಎಟಿಎಂ ನಿಂದಲೇ ಹಣ ತೆಗೆದು ಪರಾರಿಯಾಗುತ್ತಿದ್ದ...

ನಾನು ಗ್ಯಾರಂಟಿ ವಿರೋಧಿಯಲ್ಲ…- ಆರ್.ವಿ. ದೇಶಪಾಂಡೆ

ಐದು ಗ್ಯಾರಂಟಿಗಳಿಗೆ ೫೮ ಸಾವಿರ ಕೋಟಿ ವ್ಯಯವಾಗುತಿದ್ದು ಇದು ಸರ್ಕಾರಕ್ಕೆ ಹೊರೆಯಾಗುತ್ತಿರುವುದರಿಂದ ಅಭಿವೃದ್ಧಿಗೂ ತೊಡಕಾಗುತ್ತಿದೆ. ಅರ್ಹರಿಗೆ ಮಾತ್ರ ಈ ಯೋಜನೆಗಳ ಲಾಭ ತಲುಪುವಂತೆ ಮಾಡಿ...

ಕಾನಗೋಡು ಬಳಿ ಅಪಘಾತ, ಒಂದು ಸಾವು

ಶಿರಸಿ ತಾಲೂಕಿನ ಕಾನಗೋಡು ಬಳಿ ಇಂದು ಮಧ್ಯಾಹ್ನ ನಡೆದ ಭೀಕರ ಅಪಘಾತದಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟು ಇನ್ನೊಬ್ಬರಿಗೆ ತೀವೃತರಹದ ಗಾಯಗಳಾದ ಬಗ್ಗೆ ವರದಿಯಾಗಿದೆ. ಕಾರು...

ತಾ.ಜಿ. ಕಾಂಗ್ರೆಸ್‌ ಅಧ್ಯಕ್ಷರ ಬದಲಾವಣೆ……

ಬ್ಲಾಕ್, ಜಿಲ್ಲಾಧ್ಯಕ್ಷರ ಬದಲಾವಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸುಳಿವು ಸಂಘಟನಾತ್ಮಕ ಬದಲಾವಣೆ ಹಾಗೂ ಸಮಾಜಕ್ಕೆ ತಲುಪುವ ಉದ್ದೇಶದಿಂದ ಜಿಲ್ಲಾ ಮಟ್ಟದ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗುತ್ತದೆ ಎಂದು...

ಹುಲಕುತ್ರಿಯ ಶಿಕ್ಷಕ ದರ್ಶನ ಹರಿಕಾಂತ್‌ ಅಭಿನಂದಿಸುತ್ತಾ……

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಶೈಕ್ಷಣಿಕ ಜಿಲ್ಲೆಯ ಕುಗ್ರಾಮ ಹುಲಕುತ್ರಿ. ಈ ಗ್ರಾಮದಲ್ಲಿ ಮುಖ್ಯ ಶಿಕ್ಷಕರಾಗಿ ಪ್ರಾಥಮಿಕ ಶಾಲೆಯನ್ನು ವಿಶ್ವಕ್ಕೆ ಪರಿಚಯಿಸಿದವರು ದರ್ಶನ ಹರಿಕಾಂತ....

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *