

ಹಿಂದೂ ಧರ್ಮವೆಂದರೆ ಅನೈತಿಕ-ಅನಾಚಾರ; ಲಿಂಗಾಯತರು ಹಿಂದೂಗಳಲ್ಲ: ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ
ಹಿಂದೂ ಎನ್ನುವುದು ಅನೈತಿಕ, ಅನಾಚಾರಗಳಿಂದ ಒಳಗೊಂಡಿದೆ. ಇಂಥ ಧರ್ಮವನ್ನು ಶರಣರು ನಿರಾಕರಿಸಿ ಜಾತ್ಯತೀತ ತತ್ವಗಳನ್ನು ಒಳಗೊಂಡ ಲಿಂಗಾಯತ ಧರ್ಮವನ್ನು ಒಪ್ಪಿಕೊಂಡಿದ್ದಾರೆ.


ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ
ಚಿತ್ರದುರ್ಗ: ಲಿಂಗಾಯತ ಧರ್ಮ ಸ್ವತಂತ್ರ ಧರ್ಮ, ಅದು ಹಿಂದೂ ಧರ್ಮದ ಭಾಗವಲ್ಲ ಎಂದು ಸಾಣೇಹಳ್ಳಿ ತರಳಬಾಳು ಶಾಖಾಮಠದ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ.
ಹೊಳಲ್ಕೆರೆಯಲ್ಲಿ ನಡೆದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ 30ನೇ ಸ್ಮರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂದೂ ಧರ್ಮದಲ್ಲಿರುವ ವೇದ, ಪುರಾಣಗಳು, ಶಾಸ್ತ್ರಗಳು, ಲಿಂಗಾಯತ ಧರ್ಮದ ಮೂಲಗಳಲ್ಲ. ಹಾಗಾಗಿ ಹಿಂದೂ ಧರ್ಮದ ಭಾಗ ಲಿಂಗಾಯತ ಧರ್ಮ ಎನ್ನುವುದು ಸರಿಯಲ್ಲ ಎಂದರು. ಹಿಂದೂ ಎನ್ನುವುದು ಅನೈತಿಕ, ಅನಾಚಾರಗಳಿಂದ ಒಳಗೊಂಡಿದೆ. ಇಂಥ ಧರ್ಮವನ್ನು ಶರಣರು ನಿರಾಕರಿಸಿ ಜಾತ್ಯತೀತ ತತ್ವಗಳನ್ನು ಒಳಗೊಂಡ ಲಿಂಗಾಯತ ಧರ್ಮವನ್ನು ಒಪ್ಪಿಕೊಂಡಿದ್ದಾರೆ. ವಚನಗಳಲ್ಲಿ ಲಿಂಗಾಯತ ಧರ್ಮದ ಸಾರವನ್ನು ನಾಡಿಗೆ ಬಿತ್ತರಿಸಿ ಸಾಕ್ಷಾತ್ಕರಿಸಿದ್ದಾರೆ. ಹಾಗಾಗಿ ಯಾವತ್ತೂ ಲಿಂಗಾಯತ ಧರ್ಮ ಸ್ವತಂತ್ರ ಧರ್ಮವೇ ಹೊರತು ಹಿಂದೂ ಧರ್ಮಕ್ಕೆ ಸಂಬಂಧಿಸಿಲ್ಲ’ ಎಂದು ಹೇಳಿದರು.
ಹಿಂದೂ ಅಂದ್ರೆ ಒಂದರ್ಥದಲ್ಲಿ ಧರ್ಮವೇ ಅಲ್ಲ ಎಂಬ ಪಂಡಿತಾರಾಧ್ಯ ಶ್ರೀಗಳ ಹೇಳಿಕೆಗೆ ವಚನಾನಂದ ಶ್ರೀಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವೇದಿಕೆ ಮೇಲಿದ್ದ ವಚನಾನಂದ ಶ್ರೀ, ಪಂಡಿತಾರಾಧ್ಯ ಶ್ರೀಗಳ ಹೇಳಿಕೆಗೆ ಲಿಂಗಾಯತರು ಹಿಂದೂಗಳೇ. ಹಿಂದೂ ಎಂದರೆ ಸರ್ವ ಸಿದ್ಧಾಂತಗಳ ಸಮ್ಮಿಲನ. ಲಿಂಗಾಯತ ಹಾಗೂ ವೀರಶೈವ ತತ್ವಗಳು ಹಿಂದೂ ಧರ್ಮದ ಭಾಗ. ಯಾರು ಏನೇ ಅಂದುಕೊಂಡರೂ ತೊಂದರೆ ಇಲ್ಲ ನಾವು ಹಿಂದೂಗಳೇ ಎಂದು ಹೇಳಿದರು. ಹಿಂದೂ ಧರ್ಮ ಎಲ್ಲ ಧರ್ಮಗಳ ಮೂಲ ಪರಂಪರೆ. ವೀರಶೈವ, ಲಿಂಗಾಯತ, ಜೈನ, ಬುದ್ಧ ಧರ್ಮದ ಮೂಲ ಬೇರು ಹಿಂದೂ ಧರ್ಮವೇ. ಹಾಗಾಗಿ ನಾವೆಲ್ಲರೂ ಹಿಂದೂ ಧರ್ಮದ ಮೂಲವನ್ನು ಒಪ್ಪಿಕೊಳ್ಳಬೇಕಾಗುತ್ತದೆ. ವೀರಶೈವ ಹಾಗೂ ಲಿಂಗಾಯತ ತತ್ವ ಸಿದ್ಧಾಂತಗಳಲ್ಲಿ ನಾವೆಲ್ಲ ಒಂದಾಗಬೇಕಾಗಿದೆ’ ಎಂದು ಅಭಿಪ್ರಾಯಪಟ್ಟರು. (kp.c)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
