ವಿಭಜಕ ಪ್ರವೃತ್ತಿಗಳನ್ನು ತಿರಸ್ಕರಿಸಬೇಕು: ದೇಶ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ

78ನೇ ಸ್ವಾತಂತ್ರ್ಯ ದಿನದ ಮುನ್ನಾದಿನದಂದು ದೇಶವನ್ನುದ್ದೇಶಿಸಿ ಭಾಷಣ ಮಾಡಿದ ರಾಷ್ಟ್ರಪತಿಗಳು, ಭಾರತದಲ್ಲಿ ರಾಜಕೀಯ ಪ್ರಜಾಪ್ರಭುತ್ವದ ಸ್ಥಿರ ಪ್ರಗತಿಯನ್ನು ಎತ್ತಿ ತೋರಿಸಿದರು.

President Droupadi Murmu

ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಸಾಮಾಜಿಕ ಶ್ರೇಣಿಗಳ ಆಧಾರದ ಅಪಶ್ರುತಿಯನ್ನು ಹುಟ್ಟುಹಾಕುವ ಮತ್ತು ಸಾಮಾಜಿಕ ಶ್ರೇಣಿಗಳಲ್ಲಿ ಬೇರೂರಿರುವ ವಿಭಜಕ ಪ್ರವೃತ್ತಿಗಳನ್ನು ತಿರಸ್ಕರಿಸಬೇಕು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬುಧವಾರ ಒತ್ತಿ ಹೇಳಿದ್ದಾರೆ.

78ನೇ ಸ್ವಾತಂತ್ರ್ಯ ದಿನದ ಮುನ್ನಾದಿನದಂದು ದೇಶವನ್ನುದ್ದೇಶಿಸಿ ಭಾಷಣ ಮಾಡಿದ ರಾಷ್ಟ್ರಪತಿಗಳು, ಭಾರತದಲ್ಲಿ ರಾಜಕೀಯ ಪ್ರಜಾಪ್ರಭುತ್ವದ ಸ್ಥಿರ ಪ್ರಗತಿಯನ್ನು ಎತ್ತಿ ತೋರಿಸಿದರು. ಇದು ಸಾಮಾಜಿಕ ಪ್ರಜಾಪ್ರಭುತ್ವದತ್ತ ಪ್ರಗತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರತಿಪಾದಿಸಿದರು.

ದೇಶವು ಅದರ ವೈವಿಧ್ಯತೆ ಮತ್ತು ಬಹುತ್ವದ ಮೇಲೆ ಅಭಿವೃದ್ಧಿ ಹೊಂದುತ್ತದೆ. ಒಂದು ಸುಸಂಘಟಿತ ಘಟಕವಾಗಿ ಮುಂದುವರಿಯುತ್ತದೆ, “ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳ ಕಲ್ಯಾಣಕ್ಕಾಗಿ ಅಭೂತಪೂರ್ವ ಕ್ರಮಗಳನ್ನು ಆರಂಭಿಸಿದ ನರೇಂದ್ರ ಮೋದಿ ಸರ್ಕಾರಕ್ಕೆ ಸಾಮಾಜಿಕ ನ್ಯಾಯವು ಪ್ರಮುಖ ಆದ್ಯತೆಯಾಗಿದೆ” ಎಂದು ಹೇಳಿದರು.

ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಮಾತನ್ನು ಉಲ್ಲೇಖಿಸಿದ ರಾಷ್ಟ್ರಪತಿಗಳು, “ರಾಜಕೀಯ ಪ್ರಜಾಪ್ರಭುತ್ವವು ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯಲ್ಲಿ ಇರದ ಹೊರತು ಅದು ಉಳಿಯುವುದಿಲ್ಲ”. ರಾಜಕೀಯ ಪ್ರಜಾಪ್ರಭುತ್ವದ ಸ್ಥಿರವಾದ ಪ್ರಗತಿಯು ಸಾಮಾಜಿಕ ಪ್ರಜಾಪ್ರಭುತ್ವದ ಬಲವರ್ಧನೆಯತ್ತ ಸಾಧಿಸಿದ ಪ್ರಗತಿಗೆ ಸಾಕ್ಷಿಯಾಗಿದೆ ಎಂದು ಹೇಳಿದರು.

ಇಂದು, ಆಗಸ್ಟ್ 14, ನಮ್ಮ ದೇಶವು ವಿಭಜನೆಯ ಭಯಾನಕ ಸ್ಮರಣೆಯ ದಿನವನ್ನು ಆಚರಿಸುತ್ತಿದೆ. ವಿಭಜನೆಯ ಭೀಕರತೆಯನ್ನು ನೆನಪಿಸಿಕೊಳ್ಳುವ ದಿನವಿದು. ನಮ್ಮ ಮಹಾನ್ ರಾಷ್ಟ್ರವು ವಿಭಜನೆಯಾದಾಗ, ಲಕ್ಷಾಂತರ ಜನರು ಪಲಾಯನ ಮಾಡಲು ಒತ್ತಾಯಿಸಲ್ಪಟ್ಟರು ಮತ್ತು ಲೆಕ್ಕವಿಲ್ಲದಷ್ಟು ಜನರು ಜೀವಗಳನ್ನು ಕಳೆದುಕೊಂಡರು. ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು, ನಾವು ಈ ಅಭೂತಪೂರ್ವ ಮಾನವೀಯ ದುರಂತವನ್ನು ನೆನಪಿಸಿಕೊಳ್ಳುತ್ತೇವೆ ಮತ್ತು ಛಿದ್ರಗೊಂಡ ಕುಟುಂಬಗಳೊಂದಿಗೆ ಬೆಂಬಲವಾಗಿ ನಿಂತಿದ್ದೇವೆ. ಸಾಮಾಜಿಕ ಶ್ರೇಣಿಗಳ ಆಧಾರದ ಮೇಲೆ ಅಪಶ್ರುತಿಯನ್ನು ಹುಟ್ಟುಹಾಕುವ ಪ್ರವೃತ್ತಿಗಳನ್ನು ತಿರಸ್ಕರಿಸಬೇಕು ಎಂದು ನಾನು ದೃಢವಾಗಿ ನಂಬುತ್ತೇನೆ ಎಂದು ರಾಷ್ಟ್ರಪತಿಗಳು ಹೇಳಿದ್ದಾರೆ.

President Droupadi Murmu

ಭಾರತವು 2021 ಮತ್ತು 2024 ರ ನಡುವೆ ಸರಾಸರಿ ಶೇ. 8 ರಷ್ಟು ವಾರ್ಷಿಕ ಬೆಳವಣಿಗೆಯೊಂದಿಗೆ ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗಳಲ್ಲಿ ಒಂದಾಗಿದೆ. ಇದು ಜನರ ಕೈಗೆ ಹೆಚ್ಚಿನ ಹಣವನ್ನು ನೀಡಿದ್ದು ಮಾತ್ರವಲ್ಲ, ಬಡತನ ರೇಖೆಗಿಂತ ಕೆಳಗಿರುವ ಜನರ ಸಂಖ್ಯೆಯಲ್ಲಿಯೂ ಭಾರಿ ಇಳಿಕೆಯಾಗಿದೆ ಎಂದರು.

ಇದೇ ವೇಳೆ ಮೂರು ಹೊಸ ಕ್ರಿಮಿನಲ್ ಕಾನೂನುಗಳನ್ನು ಶ್ಲಾಘಿಸಿದ್ದ ಮುರ್ಮ, ಹೊಸ ಕ್ರಿಮಿನಲ್ ಕಾನೂನುಗಳು ಸ್ವಾತಂತ್ರ್ಯ ಹೋರಾಟಗಾರರಿಗೆ ಸಂದ ಗೌರವ ಎಂದು ಕರೆದಿದ್ದಾರೆ. (kp.c)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮನುಷ್ಯನ ಒಳಿತನ್ನೇ ಧ್ಯಾನಿಸುತ್ತಾ……‌

ಒಂದು ಅಪರೂಪದ ಡೊಳ್ಳಿನ ಸ್ಫರ್ಧೆ ನೋಡಿದೆ. ನಮ್ಮದೇ ತಾಲೂಕಿನ ಅರೆಹಳ್ಳದ ತಂಡ ಎಷ್ಟು ಸೊಗಸಾಗಿ ಡೊಳ್ಳು ನೃತ್ಯ ಕುಣಿಯಿತು! ಕೊಡಗಿಬೈಲ್‌ ಎಂಬ ಹಳ್ಳಿಯ ಒಕ್ಕಲಿಗ...

ಶಿಕಾರಿಪುರ ಪ್ರಥಮ, ಸಿದ್ಧಾಪುರ ದ್ವಿತೀಯ, ಸಾಗರ ತೃತೀಯ

ಸಿದ್ದಾಪುರದಲ್ಲಿ ನಡೆದ ರಾಜ್ಯ ಮಟ್ಟದ ಹೊನಲು ಬೆಳಕಿನ ಮುಕ್ತ ರಾಜ್ಯ ಮಟ್ಟದ ಡೊಳ್ಳು ಕುಣಿತ ಸ್ಪರ್ಧೆಯಲ್ಲಿ ಬೀರಲಿಂಗೇಶ್ವರ ಡೊಳ್ಳಿನ ಸಂಘ ಅಂಬಾರಗೊಪ್ಪ ಶಿಕಾರಿಪುರ ಪ್ರಥಮ,ಸಿದ್ದಿವಿನಾಯಕ...

ಮಕ್ಕಳಿಗೆ ಆಸ್ತಿಮಾಡುವ ಬದಲು ಮಕ್ಕಳನ್ನೇ ಆಸ್ತಿಯನ್ನಾಗಿಸಿ

ಮಕ್ಕಳಿಗೆ ಆಸ್ತಿ,ಆಭರಣ ಮಾಡುವ ಬದಲು ಮಕ್ಕಳನ್ನೇ ಆಸ್ತಿಯನ್ನಾ ಗಿಸಿ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದ್ದಾರೆ. ಸಿದ್ಧಾಪುರ ಹಾಳದಕಟ್ಟಾ ಮತ್ತು ಕೊಳಗಿ ಪ್ರಾಥಮಿಕ ಶಾಲೆಗಳಲ್ಲಿ...

ಮಾಧ್ಯಮ ಪ್ರತಿನಿಧಿಗಳ ಸಂಘದ ಪದಾಧಿಕಾರಿಗಳ ಅಯ್ಕೆ

ಸಿದ್ದಾಪುರ: ತಾಲೂಕಿನಲ್ಲಿ ನೂತನವಾಗಿ ಅಸ್ಥಿತ್ವಕ್ಕೆ ಬಂದ ಮಾಧ್ಯಮ ಪ್ರತಿನಿಧಿಗಳ ಸಂಘ (ರಿ) ಸಿದ್ದಾಪುರ ದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಸಂಘದ ಅಧ್ಯಕ್ಷರಾಗಿ ಸಮಾಜಮುಖಿ...

ಮೂತ್ರ ವಿಸರ್ಜನೆಗೆ ತೆರಳಿದ್ದಾಗ ವಿದ್ಯುತ್ ಸ್ಪರ್ಶ; ಶಾಲಾ ಆವರಣದಲ್ಲೇ ಬಾಲಕಿ ಸಾವು

ಉತ್ತರ ಕನ್ನಡ: ಮೂತ್ರ ವಿಸರ್ಜನೆಗೆ ತೆರಳಿದ್ದಾಗ ವಿದ್ಯುತ್ ಸ್ಪರ್ಶ; ಶಾಲಾ ಆವರಣದಲ್ಲೇ ಬಾಲಕಿ ಸಾವು ಶಾಲೆಯ ಶೌಚಾಲಯದ ಬಳಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *