

ಪಕ್ಷದ ನಿಲುವಿನ ವಿರುದ್ಧ ಯತ್ನಾಳ್ ಮಾತನಾಡುವುದನ್ನು ಸಹಿಸುವುದಿಲ್ಲ. ತಾಳ್ಮೆಗೂ ಮಿತಿಯಿದೆ. ಅದನ್ನು ಯಾರಾದರೂ ಮೀರಿದರೆ ಶಿಸ್ತು ಕ್ರಮ ಅನಿವಾರ್ಯ.


ಬಸನಗೌಡಪಾಟೀಲ್ ಯತ್ನಾಳ್- ಬಿಜೆಪಿ ಹೈಕಮಾಂಡ್ ನಾಯಕರು

ಹುಬ್ಬಳ್ಳಿ: ಪಕ್ಷ ವಿರೋಧಿ ನಿಲುವು ಮತ್ತು ಟೀಕೆ ಹಿನ್ನೆಲೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಹೈಕಮಾಂಡ್ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಿದೆ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಬುಧವಾರ ಹೇಳಿದರು.
ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ನಿಲುವಿನ ವಿರುದ್ಧ ಯತ್ನಾಳ್ ಮಾತನಾಡುವುದನ್ನು ಸಹಿಸುವುದಿಲ್ಲ. ತಾಳ್ಮೆಗೂ ಮಿತಿಯಿದೆ. ಅದನ್ನು ಯಾರಾದರೂ ಮೀರಿದರೆ ಶಿಸ್ತು ಕ್ರಮ ಅನಿವಾರ್ಯ ಎಂದು ಹೇಳಿದರು.
ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಖಂಡಿಸಿ ಬಿಜೆಪಿಯ ಬಂಡಾಯ ನಾಯಕರು ಬಳ್ಳಾರಿಗೆ ಪಾದಯಾತ್ರೆ ನಡೆಸಲು ಯೋಜನೆ ರೂಪಿಸಿರುವುದರ ಕುರಿತು ಮಾತನಾಡಿ, ಬೆಂಗಳೂರಿನಿಂದ ಮೈಸೂರಿಗೆ ನಡೆದ ಪಾದಯಾತ್ರೆಯಲ್ಲಿ ಈ ವಿಷಯ ಈಗಾಗಲೇ ಗಮನ ಸೆಳೆದಿದೆ. ಹೀಗಾಗಿ ಮತ್ತೆ ಪಾದಯಾತ್ರೆ ನಡೆಸುವ ಯಾವುದೇ ಪ್ರಸ್ತಾಪ ಪಕ್ಷದ ಮುಂದಿಲ್ಲ. ಆದರೂ, ರಮೇಶ ಜಾರಕಿಹೊಳಿ, ಯತ್ನಾಳ್ ಹಾಗೂ ಇತರ ಮುಖಂಡರು ಪಾದಯಾತ್ರೆ ಕೈಗೊಂಡರೆ ನಮ್ಮ ಅಭ್ಯಂತರವಿಲ್ಲ. ಆದರೆ. ಹೈಕಮಾಂಡ್ ಒಪ್ಪಗೆ ಪಡೆದು ಮಾಡಲಿ ಎಂದು ತಿಳಿಸಿದರು.

ಒಂದು ವೇಳೆ ಪಕ್ಷವು ಮತ್ತೊಂದು ಯಾತ್ರೆಗೆ ನಿರ್ಧರಿಸಿದರೆ, ರಾಜ್ಯ ಘಟಕದ ಅಧ್ಯಕ್ಷರು ಸೇರಿದಂತೆ ಪ್ರತಿಯೊಬ್ಬ ನಾಯಕರೂ ಅದರಲ್ಲಿ ಭಾಗವಹಿಸುತ್ತಾರೆಂದು ಹೇಳಿದರು.
ಸಿದ್ದರಾಮಯ್ಯ ಪ್ರಕರಣದಲ್ಲಿ ತೋರಿದ ಆತುರತೆಯನ್ನು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ರಾಜ್ಯಪಾಲರು ಕೈಗೊಳ್ಳದಿರುವ ಕುರಿತ ಪ್ರಶ್ನೆಗೆ ಉತ್ತರಿಸಿ, ಈ ಪ್ರಕರಣದ ಬಗ್ಗೆ ನನಗೆ ತಿಳಿದಿಲ್ಲ ಎಂದರು.
ಆದರೆ, ಪಕ್ಷದ ನಿಲುವು ಸ್ಪಷ್ಟವಾಗಿದೆ, ಸ್ಪಷ್ಟ ಮಾಹಿತಿಗಳಿದ್ದರೆ ರಾಜ್ಯಪಾಲರು ಪ್ರಾಸಿಕ್ಯೂಷನ್’ಗೆ ಅನುಮತಿ ನೀಡುತ್ತಾರೆ ಎಂದರು.
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷವು ಕಾನೂನು ಸುವ್ಯವಸ್ಥೆಗೆ ಆತಂಕ ಸೃಷ್ಟಿಸಿದೆ. ಇದರ ವಿರುದ್ಧ ರಾಷ್ಟ್ರಪತಿಗಳಿಗೆ ಬಿಜೆಪಿ ಮನವಿ ಮಾಡಲಿದೆ ಎಂದು ಇದೇ ವೇಳೆ ಛಲವಾದಿ ನಾರಾಯಣಸ್ವಾಮಿಯವರು ತಿಳಿಸಿದರು (kp.c)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
