

ಶಿರಸಿ ಗ್ರಾಮೀಣ ಬಿಜೆಪಿ ಘಟಕದ ಅಧ್ಯಕ್ಷೆ ಹಾಗೂ ಉತ್ತರ ಕನ್ನಡ ಜಿಲ್ಲಾ ಬಿಜೆಪಿಯ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಉಷಾ ಹೆಗಡೆಯವರಿಗೆ ಭ್ರಷ್ಟಾಚಾರದ ಪ್ರಕರಣದಲ್ಲಿ ಕಾರವಾರದ ಲೋಕಾಯುಕ್ತ ನ್ಯಾಯಾಲಯ ಒಂದು ವರ್ಷಗಳ ಕಠಿಣ ಸಜೆ ಹಾಗೂ ಐದು ಸಾವಿರ ರೂಪಾಯಿ ದಂಡ ವಿಧಿಸಿದೆ.

ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವಿಜಯಕುಮಾರ್ ಈ ತೀರ್ಪು ನೀಡಿದ್ದಾರೆ.ಉಷಾ ಹೆಗಡೆಯವರು ಜಿಲ್ಲಾ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗುವ ಮೊದಲು ಶ್ರೀನಗರ ಪಂಚಾಯತ್ ವತಿಯಿಂದ ನಡೆದ ಸಭೆ ಸಮಾರಂಭಗಳಿಗೆ ಹಾಜರಾಗಿ ಎರಡೂ ಹುದ್ದೆಯಲ್ಲಿ ಅಧಿಕಾರದಲ್ಲಿದ್ದಾಗ ಜನವರಿ 2011 ರಿಂದ ನವಂಬರ್ 2012 ರವರೆಗೆ ಅಂಗನವಾಡಿ ಕಾರ್ಯಕರ್ತೆಯೆಂದು ಸರ್ಕಾರದಿಂದ ಗೌರವಧನ 88,630 ಸ್ವೀಕರಿಸಿ ಸರ್ಕಾರಕ್ಕೆ ಮೋಸ ಮಾಡಿದ್ದಾಗಿ ಆರೋಪಿಸಲಾಗಿತ್ತು.
ಉಷಾ ಹೆಗಡೆ ಏಕಕಾಲದಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಜಿಲ್ಲಾ ಪಂಚಾಯತ್ ಸದಸ್ಯೆ ಯಾಗಿ ಕಾರ್ಯನಿರ್ವಹಿಸಿ ಜಿಲ್ಲಾ ಪಂಚಾಯತ್ ಸದಸ್ಯತ್ವ ಹುದ್ದೆಯನ್ನು ಸರಿಯಾಗಿ ನಿಭಾಯಿಸದೆ ಹಾಗೂ ಅಂಗನವಾಡಿ ಕರ್ತವ್ಯದಲ್ಲಿಯೂ ಸರಿಯಾಗಿ ಹಾಜರಿರದೆ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಹಾಜರಾತಿ ಪುಸ್ತಕದಲ್ಲಿ ಹಾಜರಿರುವುದಾಗಿ ಸುಳ್ಳು ಸಹಿ ಮಾಡಿದ್ದಾಗಿಯೂ ಮತ್ತು ಈ ಮೂಲಕ ಭಾರತೀಯ ದಂಡ ಸಹಿತ ಕಲಂ 468ರ ಮೇರೆಗೆ ದಂಡನೀಯವಾದ ಅಪರಾಧವನ್ನು ಎಸಗಿದ್ದಾಗಿ ಅರೋಪಿಸಲಾಗಿತ್ತು.

_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
