ಸಿ.ಪಿ. ಯೋಗೇಶ್ವರ…ಕಾಂಗ್ರೆಸ್‌ ಅಥವಾ ಸ್ವತಂತ್ರ ಅಭ್ಯರ್ಥಿ?

ಚನ್ನಪಟ್ಟಣ ಉಪ ಚುನಾವಣೆ​: BJP MLC ಸ್ಥಾನಕ್ಕೆ ಯೋಗೇಶ್ವರ್ ರಾಜೀನಾಮೆ, ಪಕ್ಷೇತರರಾಗಿ ಸ್ಪರ್ಧೆ

ಹುಬ್ಬಳ್ಳಿಗೆ ತೆರಳಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ, ನನ್ನ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಒಂದು ಲೈನ್ ನ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.

ಸಿಪಿ ಯೋಗೇಶ್ವರ್

ಸಿಪಿ ಯೋಗೇಶ್ವರ್

ಹುಬ್ಬಳ್ಳಿ: ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ತೀವ್ರ ರಂಗೇರುತ್ತಿದ್ದು, ಬಿಜೆಪಿ ವಿಧಾನ ಪರಿಷತ್ ಸದಸ್ಯ ಹಾಗೂ ಚನ್ನಪಟ್ಟಣ ಟಿಕೆಟ್ ಆಕಾಂಕ್ಷಿಯಾಗಿದ್ದ ಸಿಪಿ ಯೋಗೇಶ್ವರ್ ಅವರು ಸೋಮವಾರ ತಮ್ಮ MLC ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಇಂದು ಸಂಜೆ ಹುಬ್ಬಳ್ಳಿಗೆ ತೆರಳಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ, ನನ್ನ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಒಂದು ಲೈನ್ ನ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.

ರಾಜೀನಾಮೆ ಬಳಿಕ ಹೊರಟ್ಟ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಪಿ ಯೋಗೇಶ್ವರ್ ಅವರು, ನಾನು ಯಾವುದೇ ಪಕ್ಷ ಸೇರವುದಿಲ್ಲ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಹೇಳಿದರು.

ಸಿಪಿ ಯೋಗೇಶ್ವರ್

ಸದ್ಯ ಚನ್ನಪಟ್ಟಣ ಕ್ಷೇತ್ರದಲ್ಲಿ ಬಿಗಿ ಹಿಡಿತ ಹೊಂದಿರುವ ಮಾಜಿ ಸಚಿವ ಸಿಪಿ ಯೋಗೇಶ್ವರ್ ಅವರು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಬಯಸಿದ್ದರು. ಆದರೆ. ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಸಿಪಿ ಯೋಗೇಶ್ವರ್ ಅವರಿಗೆ ಟಿಕೆಟ್ ಬಿಟ್ಟುಕೊಡಲು ಒಪ್ಪುತ್ತಿಲ್ಲ. ಹೀಗಾಗಿ ಸಿಪಿವೈ ಕಾಂಗ್ರೆಸ್‌ನತ್ತ (Congress) ಮುಖ ಮಾಡಿದ್ದಾರೆ ಎಂದು ಹೇಳಲಾಗುತ್ತಿದ್ದು, ಕೊನೆ ಗಳಿಗೆಯಲ್ಲಿ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.

ಚನ್ನಪಟ್ಟಣ ಕ್ಷೇತ್ರವನ್ನು ಹೇಗಾದರೂ ಮಾಡಿ ಗೆಲ್ಲಲೇಬೇಕೆಂದು ನಿರ್ಧರಿಸಿರುವ ಕಾಂಗ್ರೆಸ್ ಯಾರಿಗೆ ಟಿಕೆಟ್ ನೀಡಬೇಕು ಎಂಬ ಗೊಂದಲದಲ್ಲಿದೆ. ಈ ನಡುವೆ ಸಿಪಿ ಯೋಗೇಶ್ವರ್ ಅವರು ಇಂದು ಹುಬ್ಬಳ್ಳಿಗೆ ತೆರಳಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೆ ಅವರನ್ನು ಕಾಂಗ್ರೆಸ್‌ಗೆ ಕರೆತರಲು ತೆರೆಮರೆಯಲ್ಲಿ ಕಸರತ್ತು ನಡಿದಿವೆ ಎಂದು ಹೇಳಲಾಗುತ್ತಿದೆ. (kp.c)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *