ಬೇಡ್ಕಣಿ ಮೇಳದ ತಿರುಗಾಟ ಪ್ರಾರಂಭ…. ಶಾಲೆಗಳಲ್ಲಿ ಯಕ್ಷಗಾನ ಕಲಿಕೆಯಿಂದ ಉತ್ತಮ ಫಲಿತಾಂಶ

ನಿರಂತರ ಪರಿಶ್ರಮ ಬೇಡುವ ಯಕ್ಷಗಾನ ಕಲೆಗೆ ಇನ್ನಷ್ಟು ಪ್ರೋತ್ಸಾಹ, ಉತ್ತೇಜನ ಸಿಕ್ಕರೆ ಯಕ್ಷಗಾನ ನಮ್ಮತನವನ್ನು ಉಳಿಸಲು ನೆರವಾಗುತ್ತದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟ ವೇದಿಕೆ ಅಧ್ಯಕ್ಷ ಎ. ರವೀಂದ್ರ ನುಡಿದರು. ಅವರು ಸೋಮವಾರ ಬೇಡ್ಕಣಿಯಲ್ಲಿ ನಡೆದ ಬೇಡ್ಕಣಿ ಶ್ರೀ ಮಾರುತಿ ಪ್ರಸಾದಿತ ಯಕ್ಷಗಾನ ಮಂಡಳಿಯ ವಾರ್ಷಿಕ ತಿರುಗಾಟದ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು.

ಸಂಘಟಕರ ಪರವಾಗಿ ಸನ್ಮಾನ ಸ್ವೀಕರಿಸಿದ ರವೀಂದ್ರ ಮತ್ತು ಯಕ್ಷಗಾನ ಕಲಾವಿದ ಜಯಕುಮಾರ ನಾಯ್ಕ ಮಾತನಾಡಿ ಕಲಾವಿದರು, ಹೋರಾಟಗಾರರನ್ನು ಗೌರವಿಸುವುದರಿಂದ ತಮಗೆ ಮತ್ತಷ್ಟು ಪ್ರೇರಣೆ ದೊರೆಯುತ್ತದೆ ಎಂದರು.

(ಚಿತ್ರಕೃಪೆ- ನಂದನ್‌ ನಾಯ್ಕ ಹಾರ್ಸಿಕಟ್ಟಾ)

ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಪ್ರಾಂಶುಪಾಲ ಎಂ.ಕೆ.ನಾಯ್ಕ ಹೊಸಳ್ಳಿ ಮಾತನಾಡಿ ನಾಡಿನ ಅನನ್ಯ ಕಲೆ ಯಕ್ಷಗಾನ ಉಳಿದರೆ ಪ್ರತಿಭೆಗಳು ಬೆಳಗುತ್ತವೆ. ಹೋರಾಟಗಾರ ರವೀಂದ್ರ ನಾಯ್ಕ ಮತ್ತು ಕಲಾವಿದ ಜಯಕುಮಾರ ಈ ಮಣ್ಣಿನ ಸೊಗಡಿನ ಪ್ರತಿಭೆಗಳು ಎಂದು ಪ್ರಶಂಸಿಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕನ್ನೇಶ್‌ ಕೋಲಶಿರ್ಸಿ ಮಾತನಾಡಿ ಯಕ್ಷಗಾನ ಕಲಾವಿದರು, ಜಾನಪದ ಮತ್ತು ಜನಾಂಗೀಯ ಜಾನಪದ ಕಲಾವಿದರನ್ನು ಗುರುತಿಸುವ ಸರ್ಕಾರದ ಕ್ರಮ ಶ್ಲಾಘಿಸಿ ಖಾಸಗಿ ಸಂಘ ಸಂಸ್ಥೆಗಳು ಕೂಡಾ ಕಲಾವಿದರನ್ನು ಗುರುತಿಸಿ, ಉತ್ತೇಜಿಸಿದರೆ ಅದರಿಂದ ಉತ್ತಮ ಸಮಾಜ ನಿರ್ಮಾಣದ ಕನಸು ನನಸಾಗುತ್ತದೆ ಎಂದರು.

ಮಹಾಬಲೇಶ್ವರ ನಾಯ್ಕ ಉಪಸ್ಥಿತರಿದ್ದರು. ಹಿರಿಯ ಕಲಾವಿದ ಕೃಷ್ಣಾಜಿ ಮಾತನಾಡಿ ಶಾಲೆಗಳಲ್ಲಿ ಯಕ್ಷಗಾನ ಕಲಿಸುವಿಕೆಯಿಂದ ಹೊಸ ಕಲಾವಿದರ ಸೃಷ್ಟಿ ಸಾಧ್ಯವಾಗುತ್ತದೆ ಎಂದರು. ಮೇಳದ ಯಜಮಾನ ಲಕ್ಷ್ಮಣ ನಾಯ್ಕ ಸಹಕರಿಸಿದರು. ಚಂದ್ರಶೇಖರ್‌ ನಾಯ್ಕ ಕುಂಬ್ರಿಗದ್ದೆ ನಿರೂಪಿಸಿ ವಂದಿಸಿದರು. ಸಭಾ ಕಾರ್ಯಕ್ರಮದ ನಂತರ ನಡೆದ ಸೀತಾರಾಮಕಲ್ಯಾಣ ಯಕ್ಷಗಾನ ಪ್ರದರ್ಶನ ಪ್ರೇಕ್ಷಕರ ಮನ ಗೆದ್ದಿತು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *