ಟ್ರೋಲ್ಸ್ ಗೆ ಬಗ್ಗುವ ಮಧು ಬಂಗಾರಪ್ಪ ನಾನಲ್ಲ’: ಶಿಕ್ಷಣ ಸಚಿವ ಗರಂ

ನಾನು ಹೇಳಿರೋದು ಪ್ರಿನ್ಸಿಪಾಲ್, ಬಿಇಒ ವಿರುದ್ಧ ಕ್ರಮ ತಗೊಳ್ಳಿ ಅಂತ, ಟ್ರೋಲ್ಸ್ ಗೆ ಬಗ್ಗುವ ಮಧು ಬಂಗಾರಪ್ಪ ನಾನಲ್ಲ’: ಶಿಕ್ಷಣ ಸಚಿವ ಗರಂ

ನೀಟ್ ಕೋಚಿಂಗ್ ತರಬೇತಿ ಉದ್ಘಾಟನೆ ನಂತರ ಆನ್ಲೈನ್ ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಅಭಿಪ್ರಾಯ ಹಂಚಿಕೊಳ್ಳುವ ವೇಳೆ ವಿದ್ಯಾರ್ಥಿಯೋರ್ವ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ವಿದ್ಯಾಮಂತ್ರಿಗಳಿಗೆ ಕನ್ನಡ ಸರಿಯಾಗಿ ಬರಲ್ಲ ಎಂದು ಹೇಳಿದನು.

Madhu Bangarappa

ಮಧು ಬಂಗಾರಪ್ಪ

ಬೆಂಗಳೂರು: ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಉಚಿತ ನೀಟ್ ಕೋಚಿಂಗ್ ತರಬೇತಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ವಿದ್ಯಾರ್ಥಿಯೊಬ್ಬ ನೇರವಾಗಿ ವಿದ್ಯಾಮಂತ್ರಿಗಳಿಗೆ ಕನ್ನಡ ಭಾಷೆ ಮಾತನಾಡಲು ಬರಲ್ಲ ಎಂದು ಹೇಳಿದ್ದು ಸಾಕಷ್ಟು ಸುದ್ದಿಯಾಯಿತು.

ನೀಟ್ ಕೋಚಿಂಗ್ ತರಬೇತಿ ಉದ್ಘಾಟನೆ ನಂತರ ಆನ್ಲೈನ್ ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಅಭಿಪ್ರಾಯ ಹಂಚಿಕೊಳ್ಳುವ ವೇಳೆ ವಿದ್ಯಾರ್ಥಿಯೋರ್ವ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ವಿದ್ಯಾಮಂತ್ರಿಗಳಿಗೆ ಕನ್ನಡ ಸರಿಯಾಗಿ ಬರಲ್ಲ ಎಂದು ಹೇಳಿದನು. ಇದನ್ನು ಕೇಳಿಸಿಕೊಂಡ ಸಚಿವ ಮಧು ಬಂಗಾರಪ್ಪ ಗರಂ ಆಗಿ, ಯಾರೋ ಅದು ಹಾಗೆ ಹೇಳಿದ್ದು, ಈ ವಿಷಯಾನ ಗಂಭೀರವಾಗಿ ತಗೊಳ್ಬೇಕು, ಯಾರು ಅಂತ ಫೈಂಡ್ ಔಟ್ ಮಾಡಿ ಕ್ರಮ ತಗೊಳ್ಳಿ ಎಂದು ಪಕ್ಕದಲ್ಲಿ ಕುಳಿತಿದ್ದ ಅಧಿಕಾರಿಗಳಿಗೆ ಹೇಳಿದರು. ಈ ವಿಡಿಯೊ ಸಾಕಷ್ಟು ವೈರಲ್ ಆಗಿ ಶಿಕ್ಷಣ ಸಚಿವರ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

Madhu Bangarappa

ಈ ಬಗ್ಗೆ ಇಂದು ಮಾಧ್ಯಮ ಪ್ರತಿನಿಧಿಗಳು ಸಚಿವರನ್ನು ಪ್ರಶ್ನಿಸಿದಾಗ ಮತ್ತೆ ಗರಂ ಆಗಿಯೇ ಪ್ರತಿಕ್ರಿಯಿಸಿದರು. ನಾನು ಟ್ರೋಲ್ ಗಳನ್ನು ನೋಡಿದೆ, ಟ್ರೋಲ್ ಗಳಿಗೆ ಐ ಡೋಂಟ್ ಕೇರ್, ಟ್ರೋಲ್ ಮಾಡೋರಿಗೆ ಉದ್ಯೋಗ ಇಲ್ಲ, ಅದಕ್ಕೆಲ್ಲ ತಲೆ ಕೆಡಿಸಿಕೊಳ್ಳೋ ಮಧು ಬಂಗಾರಪ್ಪ ನಾನಲ್ಲ, ನಾನೊಬ್ಬ ಶಿಕ್ಷಣ ಸಚಿವ, ಅಲ್ಲಿ ವಿದ್ಯಾರ್ಥಿ ತಪ್ಪು ಮಾತನಾಡಲು ಶಾಲೆಯ ಉಪನ್ಯಾಸಕರು, ಪ್ರಾಂಶುಪಾಲರು ಬಿಡಬಾರದಿತ್ತು ಎಂದರು.

ಪ್ರಾಂಶುಪಾಲರು, ಬಿಇಒ ಮೇಲೆ ಕ್ರಮ ಕೈಗೊಳ್ಳಿ ಎಂದಿದ್ದೆ: ನಾನು ವಿದ್ಯಾರ್ಥಿ ಮೇಲೆ ಕ್ರಮ ಕೈಗೊಳ್ಳಿ ಎಂದು ಎಲ್ಲಿ ಹೇಳಿದ್ದೆ, ನಾನು ಹೇಳಿರೋದು ಹೆಡ್ ಮಾಸ್ಟರ್, ಬಿಇಒ ಮೇಲೆ, ಅವರು ಜವಾಬ್ದಾರಿ ತೆಗೆದುಕೊಳ್ಳಬೇಕು, ವಿದ್ಯಾರ್ಥಿ ಮೇಲೆ ಕ್ರಮ ತಗೊಳ್ಳೋಕೆ ನನಗೇನು ಅಧಿಕಾರ ಇದೆ, ಪ್ರಾಂಶುಪಾಲರು, ಉಪನ್ಯಾಸಕರು ಮಕ್ಕಳನ್ನು ಹತೋಟಿಯಲ್ಲಿಡಬೇಕು, ಅಂದು 640 ಶಾಲೆಗಳು ಲೈವ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವು. 50 ಸಾವಿರ ಮಕ್ಕಳು ಲೈವ್ ಲ್ಲಿ ನೋಡುತ್ತಿದ್ದರು. ಸರ್ಕಾರದಿಂದ ಮಕ್ಕಳ ಭವಿಷ್ಯಕ್ಕೆ ಮಾಡುತ್ತಿರುವ ಒಂದು ದೊಡ್ಡ ಯೋಜನೆಯದು. ಆ ಯೋಜನೆ ಬಗ್ಗೆ ದೊಡ್ಡ ಮಟ್ಟದಲ್ಲಿ ಪ್ರಚಾರ ನೀಡುವ ಬದಲು ಯಾರೋ ಒಬ್ಬ ವಿದ್ಯಾರ್ಥಿ ವಿದ್ಯಾ ಮಂತ್ರಿಗೆ ಕನ್ನಡ ಮಾತನಾಡಲು ಬರೋದಿಲ್ಲ ಎಂದು ಹೇಳಿದ್ದನ್ನೇ ಹೈಲೈಟ್ ಮಾಡ್ತೀರ, ನಿಮ್ಮ ಮಕ್ಕಳು ಈ ರೀತಿ ಮಾಡಿದ್ದರೆ ಮನೆಯಲ್ಲಿ ಬುದ್ದಿ ಹೇಳುತ್ತಿರಲಿಲ್ಲವೇ, ನಾನಾದ್ರೆ ನನ್ನ ಮಗನಿಗೆ ಬುದ್ದಿ ಹೇಳುತ್ತಿದ್ದೆ ಎಂದು ಗರಂ ಆದರು.

video

ಪದೇ ಪದೇ ಈ ರೀತಿ ನನಗೆ ಕನ್ನಡ ಬರೋದಿಲ್ಲ ಎಂದು ಹೇಳೋದನ್ನು ನಿಲ್ಲಿಸಬೇಕು, ನನಗೆ ಸರ್ಕಾರದಲ್ಲಿ ಜವಾಬ್ದಾರಿಯುತ ಶಿಕ್ಷಣ ಮಂತ್ರಿ ಸ್ಥಾನ ಕೊಟ್ಟಿದ್ದಾರೆ. ನೀವು ಪುಕ್ಸಟೆ ಟ್ರೋಲ್ ಮಾಡಿದ್ರೆ ನನಗೇನಾಗ್ಬೇಕಾಗಿದೆ, ಮಧು ಬಂಗಾರಪ್ಪ ಮಧು ಬಂಗಾರಪ್ಪನೇ ಆಗಿರ್ತಾನೆ, ವಿಪಕ್ಷದವರು ಯಾರು ಏನೇ ಟೀಕೆ ಮಾಡಿದ್ರೂ ಐ ಡೋಂಟ್ ಕೇರ್, ನಿನ್ನೆ ಬಸವರಾಜ ಹೊರಟ್ಟಿಯವರು ನನಗೆ ಫೋನ್ ಮಾಡಿ ಕರೆಕ್ಟ್ ಮಾಡಿದ್ದೀಯ ಮಧು ಎಂದರು. ನಾನು ನನ್ನ ಅಧಿಕಾರವನ್ನು ಇಲ್ಲಿ ಚಲಾಯಿಸಿದ್ದೇನೆ ಎಂದು ಹೇಳಿದರು.

ನಾನು ನನ್ನ ಮಗನನ್ನು ಎಷ್ಟು ಜವಾಬ್ದಾರಿ, ಪ್ರೀತಿಯಿಂದ ನೋಡಿಕೊಳ್ಳುತ್ತೇನೆಯೋ ಅಷ್ಟೇ ಪ್ರೀತಿ, ಕಾಳಜಿಯನ್ನು ಈ ರಾಜ್ಯದ ಮಕ್ಕಳ ಮೇಲೆ ಸಹ ತೋರಿಸುತ್ತೇನೆ. ಅವರನ್ನು ದೇವರ ಸ್ಥಾನದಲ್ಲಿ ನೋಡುತ್ತೇನೆ, ಟ್ರೋಲ್ ಮಾಡಿ ನನ್ನನ್ನು ಬಗ್ಗಿಸಲು ಯಾರಿಗೂ ಸಾಧ್ಯವಿಲ್ಲ ಎಂದರು. (kp.c)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *