ಮಕ್ಕಳಿಗೆ ಆಸ್ತಿ,ಆಭರಣ ಮಾಡುವ ಬದಲು ಮಕ್ಕಳನ್ನೇ ಆಸ್ತಿಯನ್ನಾ ಗಿಸಿ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದ್ದಾರೆ. ಸಿದ್ಧಾಪುರ ಹಾಳದಕಟ್ಟಾ ಮತ್ತು ಕೊಳಗಿ ಪ್ರಾಥಮಿಕ ಶಾಲೆಗಳಲ್ಲಿ ಮಾತನಾಡಿದ ಅವರು ಇಂದು ಮಕ್ಕಳಿಗೆ ಶಿಕ್ಷಣ, ಆರೋಗ್ಯ ನೀಡುವ ಮೂಲಕ ಅವರನ್ನೇ ಆಸ್ತಿ ಯನ್ನಾಗಿಸಿದರೆ ಅವರು ಕುಟುಂಬ ದೇಶದ ಆಸ್ತಿಯಾಗುತ್ತಾರೆ ಎಂದು ವಿವರಿಸಿದರು.
ಹಾಳದಕಟ್ಟಾದಲ್ಲಿ ಎಲ್.ಕೆ.ಜಿ. ಮತ್ತು ಕೊಳಗಿಯಲ್ಲಿ ನೂತನ ಕಟ್ಟಡ ಉದ್ಘಾಡಿಸಿದ ಅವರನ್ನು ಶಾಲೆಗಳ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು. ಕೊಳಗಿಯಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೇಶವ ಹೆಗಡೆ ಕೊಳಗಿಯವರನ್ನು ಸನ್ಮಾನಿಸಿ, ಅಭಿನಂದಿಸಿದರು.