


ಇಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಒಪ್ಪಿಗೆ ನೀಡಲಾಗಿದೆ.


ಒಂದು ದೇಶ, ಒಂದು ಚುನಾವಣೆ
ನವದೆಹಲಿ: ‘ಒಂದು ದೇಶ, ಒಂದು ಚುನಾವಣೆ’ ಮಸೂದೆಗೆ ಕೇಂದ್ರ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ.


ಇಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಒಪ್ಪಿಗೆ ನೀಡಿದೆ.
ಪ್ರಸ್ತುತ ನಡೆಯುತ್ತಿರುವ ಸಂಸತ್ ಚಳಿಗಾಲದ ಅಧಿವೇಶನದಲ್ಲೇ ಕೇಂದ್ರ ಸರ್ಕಾರ ಒಂದು ದೇಶ, ಒಂದು ಚುನಾವಣೆ ಮಸೂದೆಯನ್ನು ಮಂಡಿಸುವ ಸಾಧ್ಯತೆಯಿದೆ.

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದು ಇದರ ಉದ್ದೇಶವಾಗಿದೆ. ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತು ವರದಿ ಸಲ್ಲಿಸಲು ಕೇಂದ್ರ ಸರ್ಕಾರ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಿತ್ತು.
ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯ ಶಿಫಾರಸುಗಳನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಂಗೀಕರಿಸಿದ ವಾರಗಳ ನಂತರ ಈ ಬೆಳವಣಿಗೆ ನಡೆದಿದೆ.
ಲೋಕಸಭೆ, ರಾಜ್ಯ ವಿಧಾನಸಭೆಗಳು ಮತ್ತು ಸ್ಥಳೀಯ ಸಂಸ್ಥೆಗಳಿಗೆ ಹಂತಹಂತವಾಗಿ ಏಕಕಾಲಕ್ಕೆ ಚುನಾವಣೆ ನಡೆಸುವಂತೆ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿ ಶಿಫಾರಸು ಮಾಡಿದೆ. (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






