ಶಿಕ್ಷಣದಲ್ಲಿ ಮಕ್ಕಳಿಗೆ 3-ಹೆಚ್ ಸೂತ್ರ ಅಳವಡಿಸಿ: ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಿಎಂ ಸಿದ್ದರಾಮಯ್ಯ ಕರೆ

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದೀಪ ಬೆಳಗಿಸುವುದರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.

Mandya Sahitya Sammelana inauguration

ಮಂಡ್ಯ ಸಾಹಿತ್ಯ ಸಮ್ಮೇಳನ ಉದ್ಘಾಟನೆ

ಮಂಡ್ಯ: ಇಂದು ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅನೇಕ ಜನ ಶಿಕ್ಷಕರು ಇಲ್ಲಿ ಸೇರಿದ್ದೀರಿ. ಸಂಕಷ್ಟದಲ್ಲಿರುವ ಭಾಷೆಗಳಲ್ಲಿ ಕನ್ನಡವೂ ಒಂದೆಂದು ವಿದ್ವಾಂಸರು ಹೇಳುತ್ತಾರೆ. ಇದಕ್ಕೆ ಕಾರಣಗಳೇನು ಎಂಬುದನ್ನು ಕಂಡುಕೊಳ್ಳಬೇಕಾಗಿದೆ. ನನಗೆ ತಿಳಿದ ಮಟ್ಟಿಗೆ ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಕೆಲವು ಸಮಸ್ಯೆಗಳಿವೆ. ಶಿಕ್ಷಣ ವ್ಯವಸ್ಥೆಯಲ್ಲಿ ನಾವು ಮಕ್ಕಳಿಗೆ 3-ಎಚ್ ಸೂತ್ರವನ್ನು ಅಳವಡಿಸಿಕೊಳ್ಳಬೇಕಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಕ್ಕರೆ ನಾಡು ಮಂಡ್ಯದಲ್ಲಿ ಇಂದು ಶುಕ್ರವಾರ ಮೂರು ದಿನಗಳ 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ ಸಿಕ್ಕಿದೆ. 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದೀಪ ಬೆಳಗಿಸುವುದರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಉದ್ಘಾಟನಾ ಕಾರ್ಯಕ್ರಮದಲ್ಲಿ ನಿರ್ಮಲಾನಂದನಾಥ ಶ್ರೀ, ಗೋ.ರು.ಚನ್ನಬಸಪ್ಪ, ಸಚಿವರಾದ ಚಲುವರಾಯಸ್ವಾಮಿ, ಮಹದೇವಪ್ಪ, ಶಿವರಾಜ್ ತಂಗಡಗಿ, ಸಭಾಧ್ಯಕ್ಷ ಯು.ಟಿ.ಖಾದರ್, ಸಾಹಿತಿ ಚಂದ್ರಶೇಖರ ಕಂಬಾರ, ಶಾಸಕರು ಸೇರಿದಂತೆ ಹಲವರು ಭಾಗಿಯಾಗಿದ್ದರು.

Mandya Sahitya Sammelana inauguration

ಸಮ್ಮೇಳನದಲ್ಲಿ ಪ್ರಮುಖವಾಗಿ ಶಿಕ್ಷಣ ಕ್ಷೇತ್ರದಲ್ಲಿನ ಸಮಸ್ಯೆಗಳ ಬಗ್ಗೆ ಮಾತನಾಡಿದ ಅವರು, ಹೆಡ್, ಹಾರ್ಟ್ ಮತ್ತು ಹ್ಯಾಂಡ್ ಎಂದು ಕರೆಯಲಾಗುವ 3-ಹೆಚ್ ಸೂತ್ರಗಳು ಮೆದುಳು, ಕರುಣೆ ಮತ್ತು ಕೌಶಲ್ಯವು ಸೇರಿ ರೂಪುಗೊಂಡ ಶಿಕ್ಷಣ ವ್ಯವಸ್ಥೆ ನಮ್ಮದಾಗಬೇಕಾಗಿದೆ. ಬುದ್ಧ ಇದನ್ನು ಯಶಸ್ವಿಯಾಗಿ ಪ್ರಯೋಗಿಸಿದ್ದ. ಗಾಂಧೀಜಿಯವರೂ ಇದನ್ನೆ ಹೇಳಿದ್ದರು. ಈಗಿನ ಶಿಕ್ಷಣ ವ್ಯವಸ್ಥೆಯು ಹಳೆಯ ವೈದಿಕ ಶಿಕ್ಷಣ ವ್ಯವಸ್ಥೆಯಂತೆಯೆ ಬಾಯಿಪಾಠ ಮಾಡುವ ಉಪಯೋಗವಿಲ್ಲದ ವ್ಯವಸ್ಥೆಯಾಗಿದೆ. ಕನ್ನಡ ಉಳಿಯಬೇಕಾದರೆ ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಆಮೂಲಾಗ್ರ ಬದಲಾಯಿಸಿ ಮಕ್ಕಳನ್ನು ಕನ್ನಡ ಶಾಲೆಗಳಿಗೆ ಸೆಳೆಯಬೇಕಾಗಿದೆ. ಹೀಗಾದಾಗ ಮಾತ್ರ ಕನ್ನಡದಲ್ಲಿ ಯೋಚಿಸುವ, ಸಂಶೋಧನೆ ಮಾಡುವ, ಉತ್ಪಾದನೆ ಮತ್ತು ಮಾರುಕಟ್ಟೆ ಮಾಡುವ ಭಾಷೆಯಾಗಿ ಕನ್ನಡವು ಬೆಳೆಯುತ್ತದೆ ಎಂದು ಭಾವಿಸುತ್ತಿರುವುದಾಗಿ ಹೇಳಿದರು.

Mandya Sahitya Sammelana inauguration

ಸಿದ್ದರಾಮಯ್ಯನವರ ಭಾಷಣದ ಮುಖ್ಯಾಂಶಗಳು

ಮಂಡ್ಯ ಜಿಲ್ಲೆಯು ಅಪ್ಪಟ ಕನ್ನಡಿಗರು ವಾಸಿಸುವ ಜಿಲ್ಲೆ. ಕನ್ನಡ ಭಾಷೆ ಮತ್ತು ಸಂಸ್ಕೃತಿ ವಿಕಾಸಕ್ಕೆ ಈ ಜಿಲ್ಲೆಯ ಕೊಡುಗೆ ಅಪಾರ. ಕ್ರಿ.ಶ 10ನೇ ಶತಮಾನದ ಆತಕೂರಿನ ಶಾಸನ ನಾಡಿನ ಹಳೆಯ ಶಾಸನಗಳಲ್ಲೊಂದು. ನಾಯಿಯೊಂದರ ವೀರ ಮರಣವೂ ಇತಿಹಾಸದಲ್ಲಿ ನೆಲೆ ನಿಲ್ಲುವಂತೆ ಮಾಡಿದ ಶಾಸನ ಮತ್ತು ಅಲ್ಲಿ ಬಳಕೆಯಾದ ಕನ್ನಡವನ್ನು ನಾವು ಮರೆಯಬಾರದು.

ನಮ್ಮ ಭಾಷೆ, ನಮ್ಮ ಸಂಸ್ಕೃತಿ, ಪರಂಪರೆಗಳನ್ನು ಪ್ರತಿನಿಧಿಸುತ್ತದೆ. ವಿಶ್ವವೇ ಜಾಗತಿಕ ಹಳ್ಳಿಯಾಗಿ ಪರಿವರ್ತಿತವಾಗಿರುವ ಈ ಸಂದರ್ಭದಲ್ಲಿ ನಾವು ನಮ್ಮತನವನ್ನು ಉಳಿಸಿಕೊಳ್ಳುವ ಅಗತ್ಯತೆ ಹಿಂದೆಂದಿಗಿಂತಲೂ ಈಗ ಹೆಚ್ಚಿದೆ. “ನುಡಿ ಬಿಟ್ಟರೆ ನಾಡು ಬಿಟ್ಟಂತೆ ಭಾಷೆಗೇಡಿ ದೇಶಗೇಡಿಯೂ ಆಗುತ್ತಾನೆ ಎಂದು ಕುವೆಂಪು ಹೇಳಿದ್ದರು”

ಓದು-ಬರಹ ಭಾಷೆ ಬರವಣಿಗೆ ಎಲ್ಲವೂ ಪರಕೀಯವಾದರೆ ನಮ್ಮ ಮಾತೃಭಾಷೆಗೆ ಅಪಾಯ ತಪ್ಪಿದ್ದಲ್ಲ. ಯಾವುದೇ ಭಾಷೆಯ ಅಳಿವು ಆ ಭಾಷೆ ಸಮುದಾಯದ ಅಳಿವೂ ಆಗಿರುತ್ತದೆ. ಭಾಷೆ ಬೆಳೆಯುವುದು ಉಳಿಯುವುದು ಅದನ್ನು ಬಳಸಿದಾಗ ಮಾತ್ರ. ಬಳಸದೇ ಹೋದರೆ ಭಾಷೆಯ ಅಸ್ತಿತ್ವ ಹಾಗೂ ಬೆಳವಣಿಗೆ ಎರಡಕ್ಕೂ ಅಪಾಯ ತಪ್ಪಿದ್ದಲ್ಲ.

ಕನ್ನಡದ ಕಲೆ, ಜಾನಪದ, ಭಾಷೆ, ಉದ್ಯೋಗದ ಜೊತೆಗೆ ಕನ್ನಡದ ಅಸ್ಮಿತೆಗೆ ಉಂಟಾಗಿರುವ ಸಮಸ್ಯೆಗಳನ್ನು ಗುರುತಿಸಿ ಹಾಗೂ ಅವುಗಳಿಗೆ ಪರಿಹಾರ ಕಂಡುಕೊಳ್ಳಲು ಸಾಹಿತ್ಯ ಸಮ್ಮೇಳನಗಳು ಮಹತ್ವದ ಕೊಡುಗೆ ನೀಡುತ್ತಾ ಬಂದಿವೆ. ಈ ಸಮ್ಮೇಳನವೂ ಆ ದಿಕ್ಕಿನಲ್ಲಿ ಕೆಲಸ ಮಾಡಲಿ.

ಕನ್ನಡ ನೆಲದಲ್ಲಿ ಕನ್ನಡ ಭಾಷೆಯೇ ಸಾರ್ವಭೌಮ ಎಂಬುದನ್ನು ನೆನಪಿಟ್ಟುಕೊಳ್ಳಿ. ಅನ್ಯ ಭಾಷಿಕರೊಂದಿಗೆ ಅವರದೇ ಭಾಷೆಯಲ್ಲಿ ಮಾತನಾಡುವುದನ್ನು ಬಿಡಿ. ಅವರಿಗೆ ಕನ್ನಡ ಕಲಿಸಿ. ಕನ್ನಡ ಉಳಿಸಿ ಬೆಳೆಸಬೇಕಾಗಿದೆ.

ಇದು ನಿನ್ನ ಭಾಷೆ, ಇದು ದೇಶಭಾಷೆ, ಇದು ಸಾವಿರಾರು ವರ್ಷಗಳ ಸುಪುಷ್ಟ ಸಾಹಿತ್ಯ ಭಾಷೆ, ಇದು ಮಹಾಕವಿಗಳನ್ನೂ ಶಿಲ್ಪಿಗಳನ್ನೂ ರಾಜಾಧಿರಾಜರನ್ನೂ ವೀರಾಧಿವೀರರನ್ನೂ ರಸಋಷಿ ದಾರ್ಶನಿಕರನ್ನು ಹಡೆದಿರುವ ಭಾಷೆ ಎಂದು ಕುವೆಂಪು ಹೇಳಿದರು.

ಕಾವೇರಿ ಕಣಿವೆಯಲ್ಲಿರುವ ಮಂಡ್ಯ ಜಿಲ್ಲೆಯಲ್ಲಿ ಕಾವೇರಿ, ಹೇಮಾವತಿ, ಶಿಂಷಾ, ಲೋಕಪಾವನಿ ಮುಂತಾದ ಜೀವನದಿಗಳು ಹರಿಯುತ್ತಿವೆ. ಕನ್ನಡ ಸಾಹಿತ್ಯ ಪರಂಪರೆಯನ್ನು ಸದಾಕಾಲಕ್ಕೂ ಮೆರೆಸಿರುವ ಮಂಡ್ಯ ಜಿಲ್ಲೆ, ಅಪ್ಪಟ ಕನ್ನಡದ ನೆಲ. ಭತ್ತದ ಕಣಜ, ಸಕ್ಕರೆ ನಾಡು ಎಂದೇ ಜನಜನಿತ. ಜಗತ್ತಿನ ಯಾವ ಮೂಲೆಯ ಭಾಷಿಕರೆ ಬಂದರೂ ಅವರಿಗೆ ಒಂದೇ ತಿಂಗಳಲ್ಲಿ ಕನ್ನಡವನ್ನು ಕಲಿಸುತ್ತೇವೆ ಎಂಬ ಭಾಷಾಭಿಮಾನ ಮತ್ತು ದಿಟ್ಟತನ ಮಂಡ್ಯದ ಜನರದ್ದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. (kp.c)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಕದಂಬಜಿಲ್ಲೆಗಾಗಿ ಸಹಿಸಂಗ್ರಹಣೆ, ಕಾನಳ್ಳಿಯಲ್ಲಿ ಹಸ್ಲರ್‌ ಸಂಘಕ್ಕೆ ಚಾಲನೆ,ಸೋಮುವಾರ ಮಹಿಳಾ ಸಂವೇದನೆ ಕವಿಗೋಷ್ಠಿ‌

ನಿರಂತರ ಹೋರಾಟದಲ್ಲಿರುವ ಶಿರಸಿ ಕೇಂದ್ರಿತ ಪ್ರತ್ಯೇಕ ಕದಂಬ ಜಿಲ್ಲೆ ಹೋರಾಟ ಸಮೀತಿ ಈ ತಿಂಗಳಿಂದ ಸಿದ್ಧಾಪುರದ ಗ್ರಾಮೀಣ ಪ್ರದೇಶಗಳಲ್ಲಿ ಪ್ರತ್ಯೇಕ ಜಿಲ್ಲೆಗಾಗಿ ಸಹಿ ಸಂಗ್ರಹಣೆ...

ಧಾರ್ಮಿಕ, ಆರ್ಥಿಕ, ಶೈಕ್ಷಣಿಕ ಕೆಲಸಗಳಿಂದ ಸುಸ್ಥಿರ ಅಭಿವೃದ್ಧಿ… ಅರಶಿನಗೋಡು ಅಷ್ಟಬಂಧ ಹಾಗೂ ಬ್ರಹ್ಮಕಲಶೋತ್ಸವ ಸಂಪನ್ನ

ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶಿಕ್ಷಣ ಮತ್ತು ಉದ್ಯೋಗ ಗಳಿಗೆ ಹೆಚ್ಚಿನ ಮಹತ್ವ ನೀಡಿದರೆ ಹೊಸ ಪೀಳಿಗೆ ಮಹತ್ವದ್ದನ್ನು ಸಾಧಿಸಲು ಸಾಧ್ಯ ಎಂದಿರುವ ಶಾಸಕ ಭೀಮಣ್ಣ ನಾಯ್ಕ...

ಬಿ.ಜೆ.ಪಿ. & ಕಾಂಗ್ರೆಸ್‌ ಗಳಿಂದ ತುಷ್ಟೀಕರಣದ ಸ್ಫರ್ಧೆ… ಕಾಂಗ್ರೆಸ್‌ ಬಸ್ಮಾಸುರ,ಬಿ.ಜೆ.ಪಿ. ಬಕಾಸುರ….

ಮುಸ್ಲಿಂ ಅಲ್ಪಸಂಖ್ಯಾತರನ್ನು ಒಲೈಸುವಲ್ಲಿ ಬಿ.ಜೆ.ಪಿ. ಮತ್ತು ಕಾಂಗ್ರೆಸ್‌ ಗಳು ಸ್ಫರ್ಧೆ ನಡೆಸಿದ್ದು ಅಪಾಯಕಾರಿ ನಡೆಗಳಲ್ಲಿ ಎರಡೂ ಪಕ್ಷಗಳೂ ಒಂದೇ ನಾಣ್ಯದ ಎರಡು ಮುಖಗಳಿಂತಿವೆ ಎಂದು...

ಬಹಿರಂಗ ಶುದ್ಧಿ ಜೊತೆಗೆ ಅಂತರಂಗ ಶುದ್ಧಿ ಮಹತ್ವ

ಸಿದ್ದಾಪುರದಲ್ಲಿ ಪವಿತ್ರ ರಂಜಾನ್ ಸಂಭ್ರಮಾಚರಣೆಸಿದ್ದಾಪುರ :31ಒಂದು ತಿಂಗಳ ಕಾಲ ಉಪವಾಸ ವ್ರತವನ್ನು ಆಚರಿಸಿದ ಮುಸ್ಲಿಮ್ ಬಾಂಧವರು ಪವಿತ್ರ ರಂಜಾನ್ (ಈದ್ ಉಲ್ ಫಿತ್ರ )ಹಬ್ಬವನ್ನು...

samajamukhi.net exclusive- ಇಂದು ಕರ್ನಾಟಕ….ಪತ್ರಕರ್ತ ವಿಶ್ವಾಮಿತ್ರ ಹೆಗಡೆ ವಿಧಿವಶ,ಶಿರಸಿಗೆ ಬಾರದ ಗೃಹಸಚಿವ,ಹಳದೋಟದಲ್ಲಿ ನಡೆಯಿತು ಸೇನಾವಿಧಿ!

ಶಿರಸಿಯ ಹಿರಿಯ ಪತ್ರಕರ್ತ ವಿಶ್ವಾಮಿತ್ರ ಹೆಗಡೆ ಭತ್ತಗುತ್ತಿಗೆ ಇಂದು ವಿಧಿವಶರಾಗಿದ್ದಾರೆ. ಪ್ರತಿಷ್ಠಿತ ಭತ್ತಗುತ್ತಿಗೆ ಕುಟುಂಬದ ವಿಶ್ವಾಮಿತ್ರ ಹೆಗಡೆ ಕನ್ನಡಪ್ರಭ,ವಿಶ್ವವಾಣಿ ಸೇರಿದಂತೆ ಕೆಲವು ಪತ್ರಿಕೆಗಳಲ್ಲಿ ಕೆಲಸಮಾಡಿದ್ದರು....

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *