


ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ ಶಾ ಅವರ ಅವಹೇಳನಕಾರಿ ಹೇಳಿಕೆ ಹಾಗು ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ವರ್ ಅವರ ಬಗ್ಗೆ ಅಶ್ಲೀಲ ಪದ ಬಳಕೆ ಮಾಡಿರುವದನ್ನು ರಾಜ್ಯ ಕಾಂಗ್ರೆಸ್ ಕಾನೂನು ವಿಭಾಗದ ಕಾರ್ಯದರ್ಶಿ ಮತ್ತು ಸಂಯೋಜಕರಾದ ಜ್ಯೋತಿ ಮುಕ್ತೇಶ ಗೌಡಾ ಪಾಟಿಲ್ ಖಂಡಿಸಿದ್ದಾರೆ.
ಬಿಜೆಪಿಯ ಹಿರಿಯ ರಾಜಕಾರಣಿ ಸಿಟಿ ರವಿ ಅವರು, ಪದೇ ಪದೇ ತಮ್ಮ ಸಂಸ್ಕೃತಿಯನ್ನು ತೋರಿಸುತ್ತಿದ್ದಾರೆ, ಹಿರಿಯ ಕಾಂಗ್ರೆಸ್ ಮುಖಂಡರಿಗೆ ಒಂದಲ್ಲ ಒಂದು ಅವಹೇಳನಕಾರಿ ಭಾಷೆಯನ್ನು ಬಳಸುತ್ತಾ ಬಂದಿರುವ ಅವರು ತಮ್ಮ ಹರುಕು ಬಾಯಿಯನ್ನು ಮತ್ತೆ ಅವಾಚ್ಯ ಶಬ್ದಗಳಿಂದ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಬಳಸಿರುವುದು ಇಡಿ ಸ್ತ್ರೀ ಕುಲಕ್ಕೆ ಮಾಡಿದ ಅವಮಾನ ಎಂದಿದ್ದಾರೆ. ಮತ್ತು ರಾಹುಲ್ ಗಾಂಧಿ ಅವರಿಗೆ ಡ್ರಗ್ ಅಡಿಕ್ಟ್ ಎಂದು ಸಿ.ಟಿ.ರವಿ ಅವರು ಹೇಳಿರುವುದು ಎಷ್ಟೊಂದು ಸರಿ, ಹಾಗೆ ಹೆಣ್ಣು ಮಕ್ಕಳಿಗೆ ಸ್ವತಂತ್ರಯನ್ನು ಕೊಟ್ಟಂತ ನಮ್ಮ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಬಗ್ಗೆಯೂ ಕೂಡ ಕೇಂದ್ರ ಸಚಿವರು ಅಮಿತ್ ಶಾ ಅವರು ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿ ಮಾತುಗಳನಾಡಿದ್ದು ಕೂಡ ಇಡೀ ಕಾಂಗ್ರೆಸ್ ಬಳಗ ವಿರೋಧಿಸುತ್ತದೆ.
ಕೂಡಲೆ ಅಮಿತಾ ಶಾ ಮತ್ತು ಸಿ.ಟಿ.ರವಿ ಅವರನ್ನು ಕಾನೂನಿನ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
