ಹವ್ಯಕ ಸಮುದಾಯ ಕ್ಷೀಣಿಸುತ್ತಿದೆ…..! ಆತಂಕ

ಅಡಿಕೆ ಬೆಳೆಗಾರರ ರಕ್ಷಣೆಗೆ ಸರ್ಕಾರ ಬದ್ಧ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಒಂದು ಕಾಲದಲ್ಲಿ ಆಮದು ಎನ್ನುತ್ತಿದ್ದ ಭಾರತದಲ್ಲಿ ಇಂದು ಮೊಬೈಲ್ ನಿಂದ ಹಿಡಿದು ರಕ್ಷಣಾ ಸಾಧನದವರೆಗೆ ರಫ್ತಿನ ಕೇಂದ್ರವಾಗಿ ಬೆಳೆಯುತ್ತಿದೆ.

3rd Havyaka Sammelana being inaugurated at Bengaluru

ಅಖಿಲ ಹವ್ಯಕ ಮಹಾಸಭಾ 81‌ ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿರುವ ಮೂರು ದಿನದ ತೃತೀಯ ವಿಶ್ವ ಹವ್ಯಕ ಸಮ್ಮೇಳನದ ಉದ್ಘಾಟನೆ

ಬೆಂಗಳೂರು: ಹವ್ಯಕ ಬ್ರಾಹ್ಮಣ ಸಮಾಜ ಮೂಲತಃ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಮಂದಿ. ನನ್ನ ಬಳಿ ಪ್ರಮುಖವಾಗಿ ಅಡಿಕೆ ಸಂಬಂಧಿತ ಸಮಸ್ಯೆಗಳನ್ನು ಹೇಳಿಕೊಂಡು ಬರುತ್ತಾರೆ. ಅಡಿಕೆ ಕೇವಲ ಎಲೆ ಅಡಿಕೆಯಾಗಿ ತಿನ್ನಲು ಮಾತ್ರ ಬಳಕೆಯಾಗದೆ ಮದುವೆಯಿಂದ ಹಿಡಿದು ಶ್ರಾದ್ಧದವರೆಗೆ ಉಪಯೋಗವಾಗಿದೆ. ಅನೇಕ ರೀತಿಯ ವ್ಯತಿರಿಕ್ತ ವರದಿಗಳು ಅಡಿಕೆ ಬಗ್ಗೆ ಬಂದರೂ ಸಹ ಭಾರತ ಸರ್ಕಾರದ ಮಂತ್ರಿಯಾಗಿ ಅಡಿಕೆ ಬೆಳೆಗಾರರ ಯಾವುದೇ ಸಮಸ್ಯೆಗಳಿಗೆ ನಾವು ಜೊತೆಯಾಗಿ ಇರುತ್ತೇವೆ ಎಂದು ಭರವಸೆ ನೀಡುತ್ತೇನೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಅಖಿಲ ಹವ್ಯಕ ಮಹಾಸಭಾ 81‌ ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿರುವ ಮೂರು ದಿನದ ತೃತೀಯ ವಿಶ್ವ ಹವ್ಯಕ ಸಮ್ಮೇಳನದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಒಟ್ಟು ಹಿಂದೂ ಸಮಾಜವನ್ನು ನಾವು ಜೊತೆಯಾಗಿ ತೆಗೆದುಕೊಂಡು ಹೋಗಬೇಕಿದೆ. ಇಂದು ಭಾರತ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿದೆ. ಒಂದು ಕಾಲದಲ್ಲಿ ಫ್ರೆಜೈಲ್ 5 ಎನ್ನುತ್ತಿದ್ದ ಆರ್ಥಿಕತೆ ಒಡೆದು ಹೋಗಬಹುದಾಗಿದ್ದ ಆರ್ಥಿಕತೆ ಸ್ಥಿತಿಯಿಂದ ಇಂದು ಜಗತ್ತಿನಲ್ಲಿ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯ ದೇಶವಾಗಿ ಇವತ್ತು ಹೊರಹೊಮ್ಮಿದೆ.

ಒಂದು ಕಾಲದಲ್ಲಿ ಆಮದು ಎನ್ನುತ್ತಿದ್ದ ಭಾರತದಲ್ಲಿ ಇಂದು ಮೊಬೈಲ್ ನಿಂದ ಹಿಡಿದು ರಕ್ಷಣಾ ಸಾಧನದವರೆಗೆ ರಫ್ತಿನ ಕೇಂದ್ರವಾಗಿ ಬೆಳೆಯುತ್ತಿದೆ. ಒಂದು ಕಾಲದಲ್ಲಿ ರಫ್ತಿನ ಕೇಂದ್ರ ಚೀನಾ ಎಂದು ಹೇಳುತ್ತಿದ್ದಲ್ಲಿ ಇಂದು ಭಾರತ ಅದನ್ನು ಹಿಂದಿಕ್ಕುವ ಸಾಧನೆ ತೋರಿಸುತ್ತಿದೆ. ಕೋವಿಡ್ ನಂತರ ಭಾರತದ ಆರ್ಥಿಕತೆಯ ಪುನರುತ್ಥಾನದ ಬಗ್ಗೆ ಜಗತ್ತು ಆಸಕ್ತಿಯಿಂದ ನೋಡುತ್ತಿದೆ.

ಉದ್ಯೋಗ ಬಯಸುವವರಿಗಿಂತ ನೀಡುವವರಾಗಿ: ಇಂದಿನ ಜನಾಂಗದ ಭಾರತೀಯರು ಎಲ್ಲಾ ಕ್ಷೇತ್ರದಲ್ಲಿಯೂ ಸಾಧನೆ ತೋರಿಸುತ್ತಿದ್ದಾರೆ. ಸ್ವಾವಲಂಬಿಗಳಾಗುತ್ತಿದ್ದಾರೆ. ಹೀಗಿರುವಾಗ ನಾವು ಉದ್ಯೋಗ ಬಯಸುವವರಾಗುವುದಕ್ಕಿಂತ ಉದ್ಯೋಗ ನೀಡುವವರಾಗಿ ಬದಲಾಗಬೇಕು.

ಕಾರ್ಯಕ್ರಮದಲ್ಲಿ ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ರಾಘವೇಶ್ವರಭಾರತೀ ಮಹಾಸ್ವಾಮಿಗಳು, ಮಂತ್ರಾಲಯದ ಶ್ರೀರಾಘವೇಂದ್ರ ಮಠದ ಪರಮಪೂಜ್ಯ ಸುಬುಧೇಂದ್ರ ತೀರ್ಥ ಮಹಾಸ್ವಾಮಿಗಳು ಹಾಗೂ ಆದಿಚುಂಚನಗಿರಿ ಮಠದ ಸೌಮ್ಯನಾಥ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿದ್ದರು.

ಕಾರ್ಯಕ್ರಮದಲ್ಲಿ ತೃತೀಯ ವಿಶ್ವ ಹವ್ಯಕ ಸಮ್ಮೇಳನದ ಗೌರವಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಾಸಕ ಡಾ ಅಶ್ವತ್ಥನಾರಾಯಣ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

3rd Havyaka Sammelana being inaugurated at Bengaluru

ಹವ್ಯಕ ಸಮುದಾಯ ಕ್ಷೀಣಿಸುತ್ತಿದೆ: ಬ್ರಾಹ್ಮಣ ಸಮುದಾಯದಲ್ಲಿ ಹವ್ಯಕ ಪಂಗಡದವರ ಸಂಖ್ಯೆ ಕ್ಷೀಣಿಸುತ್ತಿದೆ. ಪೀಠಕ್ಕೆ ಬಂದ 30 ವರ್ಷಗಳ ಹಿಂದೆ ಇದ್ದ ಹವ್ಯಕ ಸಮುದಾಯದವರ ಸಂಖ್ಯೆ ಈಗ ಅರ್ಧಕ್ಕಿಂತ ಕಡಿಮೆಯಾಗಿದೆ. ಇಂದಿನ ಯುವಜನಾಂಗ ಮದುವೆ, ಮಕ್ಕಳೆಂಬ ಜವಾಬ್ದಾರಿ ಹೊಂದುವುದರಿಂದ ವಿಮುಖರಾಗುತ್ತಿದ್ದಾರೆ. ಹಿಂದಿನ ಕಾಲದಲ್ಲಿ ಮಕ್ಕಳು ಹೊಂದುವುದು ಖುಷಿಯ ವಿಚಾರವಾಗಿದ್ದರೆ ಇಂದು ಹೊರೆ ಎಂದು ಭಾವಿಸುತ್ತಾರೆ. ಇಂತಹ ಆಲೋಚನೆ ಸಮಾಜದ ಬೆಳವಣಿಗೆಗೆ ಉತ್ತಮವಲ್ಲ ಎಂದು ಶ್ರೀರಾಮಚಂದ್ರಾಪುರ ಮಠದ ಶಂಕರಾಚಾರ್ಯ ರಾಘವೇಶ್ವರಭಾರತೀ ಮಹಾಸ್ವಾಮಿಗಳು ಖೇದ ವ್ಯಕ್ತಪಡಿಸಿದರು.

ಅಪರೂಪದ ಗೋತಳಿಗಳನ್ನು ಉಳಿಸುವ ಅಭಿಯಾನದಂತೆ ಹವ್ಯಕ ಸಮುದಾಯಗಳನ್ನು ಉಳಿಸುವ ಅಭಿಯಾನವನ್ನು ಆರಂಭಿಸುತ್ತೇವೆ. ಅನೇಕ ಮಕ್ಕಳನ್ನು ಹೆತ್ತ ತಾಯಿಗೆ ಕಂಚಿ ಆಚಾರ್ಯರು ವೀರಮಾತ ಎಂಬ ಪ್ರಶಸ್ತಿ ನೀಡಿ ಗೌರವಿಸುತ್ತಿದ್ದರು. ಅದೇ ರೀತಿ ಹವ್ಯಕ ಮಠದಲ್ಲಿಯೂ ಇನ್ನು ಆರಂಭಿಸಲಿದ್ದೇವೆ ಎಂದರು. (kp.c)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *