



ಸಿದ್ಧಾಪುರ,ಜ.೧೦- ಇಲ್ಲಿಯ ಅವರಗುಪ್ಪಾದ ಸರ್ಕಾರಿ ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಮಂಗಳೂರಿನಲ್ಲಿ ನಡೆದ ೪೫ ನೇ ರಾಜ್ಯಮಟ್ಟದ ಅಂತರ್ ಪಾಲಿಟೆಕ್ನಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಉದ್ದಜಿಗಿತದಲ್ಲಿ ಹರೀಶ ರಾಮಚಂಧ್ರ ಗೌಡ ಚಿನ್ನದ ಪದಕ ಗಳಿಸಿದ್ದಾರೆ. ವಿದ್ಯಾಧರ ಇ.ಎಂ. ೩೦೦೦ ಮತ್ತು ೧೫೦೦ ಮೀಟರ್ ಓಟದಲ್ಲಿ ಕ್ರಮವಾಗಿ ಬೆಳ್ಳಿ ಮತ್ತು ಕಂಚಿನ ಪದಕ ಪಡೆದಿದ್ದಾನೆ. ಈ ವಿದ್ಯಾರ್ಥಿಗಳ ಸಾಧನೆಗೆ ಸಾರ್ವಜನಿಕ ಪ್ರಶಂಸೆ ವ್ಯಕ್ತವಾಗಿದೆ.

