


ಕುಮಟಾದಲ್ಲಿ ಸಂತೆ ಹಿನ್ನೆಲೆಯಲ್ಲಿ ವ್ಯಾಪಾರಸ್ಥರು ಹಣ್ಣು ಹಾಗೂ ತರಕಾರಿ ಹೊತ್ತು ಲಾರಿಯಲ್ಲಿ ಬರುತ್ತಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಲಾರಿ ಪಲ್ಟಿಯಾಗಿ ಅಪಘಾತ ಸಂಭವಿಸಿದೆ.


ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿರುವ ಪೊಲೀಸರು
ಯಲ್ಲಾಪುರ: ಲಾರಿ ಪಲ್ಟಿಯಾಗಿ 9 ಮಂದಿ ಸಾವನ್ನಪ್ಪಿರುವ ದುರ್ಘಟನೆಯೊಂದು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಬಳಿ ಬುಧವಾರ ನಡೆದಿದೆ.


ಕುಮಟಾದಲ್ಲಿ ಸಂತೆ ಹಿನ್ನೆಲೆಯಲ್ಲಿ ವ್ಯಾಪಾರಸ್ಥರು ಹಣ್ಣು ಹಾಗೂ ತರಕಾರಿ ಹೊತ್ತು ಲಾರಿಯಲ್ಲಿ ಬರುತ್ತಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಲಾರಿ ಪಲ್ಟಿಯಾಗಿ ಅಪಘಾತ ಸಂಭವಿಸಿದೆ.
ಸವಣೂರು ತಾಲೂಕಿನ 28 ವ್ಯಾಪಾರಿಗಳು ಲಾರಿಯಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಗುಳ್ಳಾಪುರದ ಬಳಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದ್ದು, ಪರಿಣಾಮ 9 ಮಂದಿ ವ್ಯಾಪಾರಿಗಳು ಸ್ಥಳದಲ್ಲಿಯೇ ದುರ್ಮರಣವನ್ನಪ್ಪಿದ್ದಾರೆ. ಅಲ್ಲದೆ, 13 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಮತ್ತಷ್ಟು ಜನರ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.
ಘಟನೆ ವೇಳೆ ಲಾರಿಯಲ್ಲಿ ಒಟ್ಟು 28 ಮಂದಿ ವ್ಯಾಪಾರಿಗಳು ಪ್ರಯಾಣಿಸುತ್ತಿದ್ದ. ಲಾರಿಯು ಸವಣೂರಿನಿಂದ ಕುಮಟಾಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಪೊಲೀಸರು, ಪರಿಶೀಲನೆ ನಡೆಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






