ಸರ್ವೋತ್ತಮ ಸೇವಾ ಪ್ರಶಸ್ತಿ ನನ್ನ ಜವಾಬ್ಧಾರಿ ಹೆಚ್ಚಿಸಿದೆ..-ದೇವರಾಜ್‌ ಹಿತ್ತಲಕೊಪ್ಪ

ನನ್ನ ಸಹೋದ್ಯೋಗಿಗಳ ಸಹಕಾರ ಗ್ರಾಮ ಪಂಚಾಯತ್‌ ಸಿಬ್ಬಂದಿಗಳ ಪ್ರಾಮಾಣಿಕ ಕೆಲಸಗಳಿಂದ ನನಗೆ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಬಂದಿದೆ. ಇದನ್ನು ನನ್ನ ಇಲಾಖೆಯ ಸಿಬ್ಬಂದಿಗಳಿಗೇ ಅರ್ಪಿಸುತ್ತೇನೆ ಎಂದಿರುವ ಸಿದ್ದಾಪುರ ತಾಲೂಕಾ ಪಂಚಾಯತ್‌ ಕಾರ್ಯನಿರ್ವಹಣಾಧಿಕಾರಿ ದೇವರಾಜ್‌ ಹಿತ್ತಲಕೊಪ್ಪ ಈ ಪ್ರಶಸ್ತಿ ನನ್ನ ಜವಾಬ್ಧಾರಿ ಹೆಚ್ಚಿಸಿದೆ ಎಂದು ವಿನಮ್ರವಾಗಿ ತಿಳಿಸಿದ್ದಾರೆ.

ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪಡೆದಿರುವ ಬಗ್ಗೆ ಸಮಾಜಮುಖಿ ಡಾಟ್‌ ನೆಟ್‌ ಪ್ರತಿನಿಧಿ ಜೊತೆ ಮಾತನಾಡಿದ ಅವರು ಸಿಬ್ಬಂದಿಗಳನ್ನು ವಿಶ್ವಾಸಕ್ಕೆ ಪಡೆದು ಕೆಲಸ ಮಾಡಿಸುವುದು ಮುಖ್ಯ ನಾವು ಇಲಾಖೆಯ ಮಾಸಿಕ ಗುರಿಗಳನ್ನು ಮುಟ್ಟಿದ್ದೇವೆ. ವಾರ್ಷಿಕ ಗುರಿಗಳಲ್ಲೂ ನಾವು ಜಿಲ್ಲೆಯಲ್ಲಿ ಮೊದಲ ಸ್ಥಾನದಲ್ಲಿದ್ದೇವೆ. ನರೇಗಾ, ತೆರಿಗೆ ವಸೂಲಾತಿ ವಸತಿ ಯೋಜನೆ ಹೀಗೆ ಇಲಾಖೆಯ ಕೆಲಸ, ತಾಲೂಕಿನ ಪ್ರಗತಿ ಎಲ್ಲದರಲ್ಲೂ ನಮ್ಮ ಸಾಧನೆ ಮೊದಲ ಸ್ಥಾನದಲ್ಲಿರಲು ನಮ್ಮ ಸಿಬ್ಬಂದಿಗಳೇ ಕಾರಣ ಪ್ರಶಸ್ತಿ ಸಾಂಕೇತಿಕವಾಗಿ ನನಗೆ ದಕ್ಕಿದ್ದರೂ ಅದು ನಮ್ಮ ಸಿಬ್ಬಂದಿಗಳಿಗೇ ಸಲ್ಲಬೇಕು ಎಂದರು.

ಜಿಲ್ಲೆಯ ಕೆಲವೆಡೆ ಕೆಲಸ ಮಾಡಿರುವ ಅನುಭವ ನನಗಿದೆ, ಆದರೆ ಶಿರಸಿ-ಸಿದ್ದಾಪುರದ ಜನತೆ ಇಲಾಖೆಯ ಕಾರ್ಯಕ್ರಮಗಳ ಪ್ರಯೋಜನ ಪಡೆಯುತ್ತಾರೆ. ಉತ್ತಮ ವ್ಯವಸ್ಥೆ,ಸ್ಫಂದಿಸುವ ಜನತೆ, ನೌಕರರ ಸಹಕಾರ ಇವುಗಳಿಂದ ನನ್ನ ತಾಲೂಕಿಗೆ ಈ ಗೌರವ ಸಿಕ್ಕಿದೆ. ಇದೇ ತಾಲೂಕಿನ ಪ್ರಜೆಯಾಗಿ ನನಗೆ ಜವಾಬ್ಧಾರಿ ಹೆಚ್ಚು ಹುಟ್ಟೂರಲ್ಲೇ ಇರುವುದರಿಂದ ಕೆಲಸ, ಪ್ರಗತಿ ಸಾಧನೆಗೆ ಈ ವಾತಾವರಣ ಪೂರಕವಾಗಿದೆ ಎಂದು ವಿವರಿಸಿದ ಅವರು ಗ್ರಾ.ಪಂ. ಕಾರ್ಯದರ್ಶಿಯಿಂದ ಕಾರ್ಯನಿರ್ವಹಣಾಧಿಕಾರಿವರೆಗೆ ಉತ್ತಮ ಸೇವೆ ಮಾಡುವ ಸಂಕಲ್ಪದಿಂದ ಬಡವರು, ಅಸಹಾಯಕರು, ಅವಶ್ಯವಿದ್ದವರಿಗೆ ಸೇವೆ ಸಲ್ಲಿಸುವ ಉದ್ದೇಶದಿಂದ ಕೆಲಸಮಾಡಿರುವ ನನ್ನ ಅಳಿಲು ಸೇವೆಯನ್ನು ಗುರುತಿಸಿದ ಹಿರಿಯ ಅಧಿಕಾರಿಗಳು, ಇಲಾಖೆಗೆ ನಾನೂ ಆಬಾರಿಯಾಗಿದ್ದೇನೆ ಎಂದರು.

ಸಿದ್ಧಾಪುರದ ಗ್ರಾಮೀಣಾಭಿವೃದ್ಧಿ ಇಲಾಖೆಯ ಮಾಸಿಕ ಪ್ರಗತಿ ಪ್ರತಿಶತ೮೮,ವಾರ್ಷಿಕ ಪ್ರಗತಿ ಗುರಿಯ ಪ್ರತಿಶತ ೯೯ ಇವು ನಮ್ಮ ಕೆಲಸದ ದಾಖಲೆಗಳು ಈಗಿನ ಪ್ರಶಸ್ತಿ ಮುಂದಿನ ದಿನಗಳಲ್ಲಿ ಇನ್ನಷ್ಟು ಆಸಕ್ತಿಯಿಂದ ಕೆಲಸ ಮಾಡುವ ಉತ್ಸಾಹ ತುಂಬಿದೆ ಎಂದ ದೇವರಾಜ್‌ ಈ ಕೆಲಸ, ಪ್ರಗತಿಗಳ ಹಿಂದಿರುವ ಸಿಬ್ಬಂದಿಗಳ ಕೊಡುಗೆ ಮರೆಯುವಂತಿಲ್ಲ ಎಂದು ಹೇಳುವುದನ್ನು ಮರೆಯಲಿಲ್ಲ. ಈ ವರೆಗೆ ನನಗೆ ಶಿರಸಿ-ಸಿದ್ಧಾಪುರಗಳಲ್ಲಿ ಉತ್ತಮ ಕೆಲಸ ಮಾಡಲು ಮಾರ್ಗದರ್ಶನ ಮಾಡಿದ ಜನಪ್ರತಿನಿಧಿಗಳೂ ಈ ಪ್ರಶಸ್ತಿಯ ಪಾಲುದಾರರು ಎಂದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *