ಮತ್ತೆ ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ, ನೌಕರರ ಸಂಘದ ಬೆಂಬಲ

ಮೂಲಭೂತ ಸೌಲಭ್ಯಗಳ ಪೂರೈಕೆ ಸೇರಿದಂತೆ ಹಲವು ಬೇಡಿಕೆಗಳನ್ನಿಟ್ಟುಕೊಂಡು ಗ್ರಾಮ ಆಡಳಿತಾಧಿಕಾರಿಗಳು ಮತ್ತೆ ಮುಷ್ಕರ ಪ್ರಾರಂಭಿಸಿದ್ದಾರೆ. ಹಿಂದೆ ಗ್ರಾಮ ಆಡಳಿತಾಧಿಗಳ ಮುಷ್ಕರ ಪ್ರಾರಂಭವಾದಾಗ ಸರ್ಕಾರ ಉಪಸಮೀತಿಯೊಂದನ್ನು ರಚಿಸಿ ಬೇಡಿಕೆ ಪರಿಶೀಲಿಸುವುದಾಗಿ ತಿಳಿಸಿತ್ತು. ಈಗ ಅದೇ ಬೇಡಿಕೆಗಳ ಹಿನ್ನೆಲೆಯಲ್ಲಿ ರಾಜ್ಯಸಂಘ ಕರೆಕೊಟ್ಟಿರುವ ಮುಷ್ಕರಕ್ಕೆ ಸ್ಪಂದಿಸಿರುವ ಗ್ರಾಮ ಆಡಳಿತಾಧಿಕಾರಿಗಳು ಎಲ್ಲಾ ತಾಲೂಕು ಕೆಂದ್ರ, ಜಿಲ್ಲಾ ಕೇಂದ್ರಗಳಲ್ಲಿ ಮುಷ್ಕರ ಪ್ರಾರಂಭಿಸಿದ್ದಾರೆ.

ಸಿದ್ದಾಪುರದಲ್ಲಿ ಕೂಡಾ ಕೆಲಸ ಬಹಿಷ್ಕರಿಸಿರುವ ಗ್ರಾಮ ಆಡಳಿತಾಧಿಕಾರಿಗಳು ಇಂದು ನೆಹರೂ ಮೈದಾನದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಪ್ರಾರಂಭಿಸಿದರು. ಮುಷ್ಕರ ನಿರತ ಕಂದಾಯ ಇಲಾಖಾ ನೌಕರರನ್ನು ಭೇಟಿ ಮಾಡಿದ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕಾ ಅಧ್ಯಕ್ಷ ರಾಜೇಶ್‌ ನಾಯ್ಕ, ಕಾರ್ಯದರ್ಶಿ ಜಿ.ಎಲ್.‌ ಶ್ಯಾಮಸುಂದರ್‌, ರಾಜ್ಯ ಪ್ರತಿನಿಧಿ ಡಿ. ಎಂ. ನಾಯ್ಕ ಕಂದಾಯ ಇಲಾಖೆಯ ಕೆಳಹಂತದ ನೌಕರರಿಗೆ ಯಾವುದೇ ಅನುಕೂಲಗಳಿಲ್ಲ. ಹೆಚ್ಚು ಸೇವಾ ಕೆಲಸಮಾಡುವ ಕಂದಾಯ ನೌಕರರಿಗೆ ಮೂಲಭೂತ ಸೌಲಭ್ಯ, ಕನಿಷ್ಟ ಅನುಕೂಲಗಳನ್ನೂ ಪೂರೈಸದೆ ದುಡಿಸಿಕೊಳ್ಳುವುದು ಸರಿಯಲ್ಲ ನಮ್ಮದೇ ಮಾರ್ಗಗಳ ಮೂಲಕ ಸರ್ಕಾರಕ್ಕೆ ಒತ್ತಡ ತಂದು ಅವಶ್ಯ ಕೆಲಸಗಳಾಗಬೇಕೆಂಬ ಬೇಡಿಕೆಗೆ ನಮ್ಮ ಸಹಕಾರವಿದೆ. ಸರ್ಕಾರಕ್ಕೆ ಕೂಡಾ ನಾವು ನಮ್ಮ ಸಂಘದ ಮೂಲಕ ಒತ್ತಡ ಹೇರುವ ಕೆಲಸ ಮಾಡುತ್ತೇವೆ ಎಂದರು.

ಇಂದಿನಿಂದ ಪ್ರಾರಂಭವಾಗಿರುವ ಗ್ರಾಮ ಆಡಳಿತಾಧಿಕಾರಿಗಳ ಅನಿರ್ಧಿಷ್ಟಾವಧಿ ಮುಷ್ಕರದಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಸರ್ಕಾರ ಗಮನಹರಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಲಿದೆ ಎನ್ನುವ ನಿರೀಕ್ಷೆ ಇದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *