ಜಾನಪದ ಕೋಗಿಲೆ ‘ಪದ್ಮಶ್ರೀ’ ಪುರಸ್ಕೃತ ಹಿರಿಯ ಹಾಡುಗಾರ್ತಿ ಸುಕ್ರಿ ಬೊಮ್ಮಗೌಡ ವಿಧಿವಶ

ಹಾಲಕ್ಕಿ ಜನಾಂಗದ ಜಾನಪದ ಕೋಗಿಲೆ ‘ಪದ್ಮಶ್ರೀ’ ಪುರಸ್ಕೃತ ಹಿರಿಯ ಹಾಡುಗಾರ್ತಿ ಸುಕ್ರಿ ಬೊಮ್ಮಗೌಡ ವಿಧಿವಶ

ಉತ್ತರ ಕನ್ನಡ ಜಿಲ್ಲೆಯ ಹೆಮ್ಮೆಯ ಸುಕ್ರಜ್ಜಿ ಎಂದೇ ಪ್ರಸಿದ್ದರಾಗಿದ್ದ ಸುಕ್ರಿ ಬೊಮ್ಮಗೌಡ ಅವರಿಗೆ 88 ವರ್ಷ ವಯಸ್ಸಾಗಿತ್ತು. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು.

sukri bommagowda

ಸುಕ್ರಿ ಬೊಮ್ಮಗೌಡ

ಸಿದ್ಧಾಪುರ,೧೩- ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಹಾಲಕ್ಕಿ ಸಮುದಾಯದ ಸಾಕ್ಷಿ ಪ್ರಜ್ಞೆಯಂತಿದ್ದ ಜನಪದ ಹಾಡುಗಳನ್ನು ಹಾಡುವ ಜೊತೆಗೆ ಮದ್ಯಪಾನ ವಿರೋಧಿ ಹೋರಾಟದಿಂದ ಖ್ಯಾತಿಗಳಿಸಿದ್ದ ಅಂಕೋಲಾ ತಾಲ್ಲೂಕು ಬಡಗೇರಿಯ ಸುಕ್ರಿ ಬೊಮ್ಮ ಗೌಡ (88) ಗುರುವಾರ ನಸುಕಿನ ಜಾವ ನಿಧನರಾಗಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಹೆಮ್ಮೆಯ ಸುಕ್ರಜ್ಜಿ ಎಂದೇ ಪ್ರಸಿದ್ದರಾಗಿದ್ದ ಸುಕ್ರಿ ಬೊಮ್ಮಗೌಡ ಅವರಿಗೆ 88 ವರ್ಷ ವಯಸ್ಸಾಗಿತ್ತು. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಕೆಲವು ದಿನದ ಹಿಂದೆ ಉಸಿರಾಟ ಸಮಸ್ಯೆಯಿಂದ ಉಡುಪಿಯಲ್ಲಿ ಚಿಕಿತ್ಸೆ ಪಡೆದು ಬಂದಿದ್ದರು. ಆದರೆ ಇಂದು ಮುಂಜಾನೆ 4 ಗಂಟೆ ಸಮಯಕ್ಕೆ ಅಂಕೋಲದ ಬಡಿಗೇರಿಯ ಅವರ ನಿವಾಸದಲ್ಲಿ ಇಹಲೋಕ ತ್ಯಜಿಸಿದ್ದಾರೆ. ಸುಕ್ರಿ ಬೊಮ್ಮಗೌಡ ಅವರು ಇದೀಗ ಇಬ್ಬರು ಮೊಮ್ಮಕ್ಕಳು ಓರ್ವ ಸೊಸೆಯನ್ನು ಅಗಲಿದ್ದಾರೆ.

ಉತ್ತರಕನ್ನಡ ಜಿಲ್ಲೆಯ ಅಂಕೋಲಾದ ಹಾಲಕ್ಕಿ ಒಕ್ಕಲಿಗ ಜನಾಂಗಕ್ಕೆ ಸೇರಿದ ಸುಕ್ರಿ ಬೊಮ್ಮಗೌಡ ಅವರು ಸುಪ್ರಸಿದ್ಧ ಜಾನಪದ ಗಾಯಕಿಯಾಗಿದ್ದರು. ಸುಮಾರು 5 ಸಾವಿರ ಹಾಲಕ್ಕಿ ಹಾಡುಗಳು ಕಂಠಪಾಟವಾಗಿದ್ದವು. ಅವರು ಜಾನಪದ ಕಲೆಗೆ ನೀಡಿದ ಕೊಡುಗೆಗಳಿಗಾಗಿ ಮತ್ತು ಸಾಂಪ್ರದಾಯಿಕ ಬುಡಕಟ್ಟು ಸಂಗೀತವನ್ನು ಸಂರಕ್ಷಿಸುವ ಕಾರ್ಯಕ್ಕಾಗಿ ಹಲವು ಪ್ರಶಸ್ತಿಗಳನ್ನು ಸಂಪಾದಿಸಿದ್ದಾರೆ.

ಜನಪದ ಹಾಗೂ ಸಾಮಾಜಿಕ ಸೇವಾ ಕ್ಷೇತ್ರಕ್ಕೆ ಸುಕ್ರಿ ಬೊಮ್ಮ ಗೌಡ ನೀಡಿರುವ ಕೊಡುಗೆ ಗುರುತಿಸಿ, 1999ರಲ್ಲಿ ಜನಪದಶ್ರೀ ಪ್ರಶಸ್ತಿ, 2006ರಲ್ಲಿ ನಾಡೋಜ ಪ್ರಶಸ್ತಿ, 2017ರಲ್ಲಿ ಭಾರತ ಸರ್ಕಾರವು ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ಇನ್ನು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ದೇಶ ಹಾಗೂ ರಾಜ್ಯದ ಹಲವು ಪ್ರತಿಷ್ಠಿತ ಪ್ರಶಸ್ತಿ ಸುಕ್ರಿ ಬೊಮ್ಮ ಗೌಡ ಅವರನ್ನು ಅರಸಿಕೊಂಡು ಬಂದಿವೆ. (kp.c)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *