Sirsi crime- ಪರೀಕ್ಷೆ ಮುಗಿಸಿ ಮನೆಗೆ ಮರಳುತಿದ್ದ ವಿದ್ಯಾರ್ಥಿ ಮೇಲೆ ಹಲ್ಲೆ

ಪರೀಕ್ಷೆ ಮುಗಿಸಿ ಮನೆಗೆ ತೆರಳುತಿದ್ದ ವಿದ್ಯಾರ್ಥಿ ಮೇಲೆ ಗುಂಪೊಂದು ಹಲ್ಲೆ ನಡೆಸಿ ಪರಾರಿಯಾದ ಘಟನೆ ಇಂದು ಮಧ್ಯಾಹ್ನ ಶಿರಸಿಯಲ್ಲಿ ನಡೆದಿದೆ. ಶಿರಸಿ ಮಾರಿಕಾಂಬಾ ಕಾಲೇಜಿನ ವಿದ್ಯಾರ್ಥಿ ಹುತ್ಗಾರ್‌ ನ ನಾಗರಾಜ್‌ ಪಟಗಾರ ಹಲ್ಲೆಗೆ ಒಳಗಾದ ವಿದ್ಯಾರ್ಥಿ. ಪರೀಕ್ಷೆ ಮುಗಿಸಿ ಮನೆಗೆ ಮರಳುತಿದ್ದ ಈ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದ ಗುಂಪು ಕೊಲೆ ಬೆದರಿಕೆ ಹಾಕಿ ನಾಪತ್ತೆಯಾಯಿತು ಎಂದು ಹಲ್ಲೆಗೆ ಒಳಗಾದ ವಿದ್ಯಾರ್ಥಿ ಪೊಲೀಸರಿಗೆ ತಿಳಿಸಿದ್ದಾನೆ. ಮಾಹಿತಿ ತಿಳಿದ ಪೊಲೀಸರು ತಕ್ಷಣ ವಿದ್ಯಾರ್ಥಿಯನ್ನು ಆಸ್ಫತ್ರೆಗೆ ರವಾನಿಸಿದ್ದು ತನಿಖೆ ಮುಂದುವರಿಸಿದ್ದಾರೆ.