ದೇಶೀ ವೈಶಿಷ್ಟ್ಯಗಳಿಂದ ಗಮನ ಸೆಳೆದ ಜಾನಪದ ಪರಿಷತ್‌ ಕಾರ್ಯಕ್ರಮ

ಕರ್ನಾಟಕ ಜಾನಪದ ಪರಿಷತ್‌ ಸ್ವಾಯತ್ತ ಸಂಸ್ಥೆಯಾಗಿದ್ದು ಜಾನಪದ ಸಂವರ್ಧನೆ ಕೆಲಸ ಮಾಡುತ್ತಾ ರಾಜ್ಯದಾದ್ಯಂತ ಕೆಲಸ ಮಾಡುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕೂಡಾ ಎಲ್ಲಾ ತಾಲೂಕುಗಳಲ್ಲಿ ಜಾನಪದ ಪರಿಷತ್‌ ಘಟಕಗಳು ರಚನೆಯಾಗುತಿದ್ದು ಎಲ್ಲರ ಸಹಕಾರದಿಂದ ಜಾನಪದ ಉಳಿವು ಬೆಳವಣಿಗೆಗಾಗಿ ಶ್ರಮಿಸಲು ಸಂಘಟಿತವಾಗಿ ಸಿದ್ಧವಾಗುತಿದ್ದೇವೆ ಎಂದು ಜಾನಪದ ಪರಿಷತ್‌ ಜಿಲ್ಲಾಧ್ಯಕ್ಷ ಡಾ. ವೆಂಕಟೇಶ ನಾಯ್ಕ ಹೇಳಿದರು. ಸಿದ್ಧಾಪುರ ಲಯನ್ಸ್‌ ಬಾಲಭವನದಲ್ಲಿ ನಡೆದ ಕರ್ನಾಟಕ ಜಾನಪದ ಪರಿಷತ್‌ ಸಿದ್ಧಾಪುರ ತಾಲೂಕಾ ಘಟಕದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಾನಪದ ಅದರಷ್ಟಕ್ಕೆ ಅದೇ ಬೆಳೆಯುತ್ತಿದೆ. ನಾವು ಆಧುನಿಕ ಅನುಕೂಲಗಳ ಮೂಲಕ ಜಾನಪದ ಉಳಿಸುವ ಕೆಲಸ ಮಾಡಬೇಕು ಎಂದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಾನಪದ ಕಲಾವಿದೆ ಲೀಲಾವತಿ ಕೊಂಡ್ಲಿ ಜಾನಪದ ಹಾಡುಗಳ ಮೂಲಕ ರಂಜಿಸಿದರು.

ಮುಖ್ಯ ಅತಿಥಿಯಾಗಿದ್ದ ಸಾಹಿತಿ ಸುಬ್ರಾಯ ಮತ್ತೀಹಳ್ಳಿ ಮಾತನಾಡಿ ನಾನಾ ಪ್ರದೇಶಗಳ ಜಾನಪದ ವೈಶಿಷ್ಟಯಗಳು ಬಹು ಭಿನ್ನವಾಗಿವೆ. ಅವುಗಳ ದಾಖಲೀಕರಣ ಅಗತ್ಯ ಎಂದರು.

ಇನ್ನೊರ್ವ ಅತಿಥಿ ಪತ್ರಕರ್ತ ಕನ್ನೇಶ್‌ ಕೋಲಶಿರ್ಸಿ ಮಾತನಾಡಿ ಜಾನಪದದ ಮಹತ್ವ,ಪ್ರಾಮುಖ್ಯತೆಗಳನ್ನು ದೃಷ್ಟಾಂತಗಳೊಂದಿಗೆ ವಿವರಿಸಿದರು.ಅತಿಥಿಗಳಾಗಿದ್ದ ಎ.ಜಿ.ನಾಯ್ಕ ಕುಂಬಾರಕುಳಿ, ರಮೇಶ್‌ ಹಾರ್ಸಿಮನೆ ಮಾತನಾಡಿದರು. ಜಾನಪದ ಪರಿಷತ್‌ ತಾಲೂಕಾ ಅಧ್ಯಕ್ಷ ಎಂ.ಕೆ.ನಾಯ್ಕ ಹೊಸಳ್ಳಿ ಪ್ರಾಸ್ಥಾವಿಕವಾಗಿ ಮಾತನಾಡಿದರು. ಗೋಪಾಲ ಕಾನಳ್ಳಿ ತಂಡ ಹಾಡು-ನೃತ್ಯಗಳ ಮೂಲಕ ಮನರಂಜಿಸಿದರೆ ಪ್ರಜ್ಞಾ ಹೆಗಡೆ & ಲೀಲಾವತಿ ಕೊಂಡ್ಲಿ ಜಾನಪದ ಗಾಯನ ಗಮನ ಸೆಳೆಯಿತು. ಕ.ಸಾ.ಪ. ತಾಲೂಕಾ ಅಧ್ಯಕ್ಷ ಚಂದ್ರಶೇಖರ್‌ ಕುಂಬ್ರಿಗದ್ದೆ ನಿರೂಪಿಸಿದರು. ಜಾನಪದ ಕಲಾ ಪ್ರಕಾರಗಳನ್ನು ಬಳಸಿ ಮಾಡಿದ ವೇದಿಕೆ ಕಾರ್ಯಕ್ರಮದ ಮೆರಗು ಹೆಚ್ಚಿಸುವಂತಿತ್ತು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *