

ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶಿಕ್ಷಣ ಮತ್ತು ಉದ್ಯೋಗ ಗಳಿಗೆ ಹೆಚ್ಚಿನ ಮಹತ್ವ ನೀಡಿದರೆ ಹೊಸ ಪೀಳಿಗೆ ಮಹತ್ವದ್ದನ್ನು ಸಾಧಿಸಲು ಸಾಧ್ಯ ಎಂದಿರುವ ಶಾಸಕ ಭೀಮಣ್ಣ ನಾಯ್ಕ ಗ್ರಾಮಗಳಿಂದ ಹೊರ ನಡೆದವರೂ ತಮ್ಮ ಹುಟ್ಟೂರಿನ ಬಗ್ಗೆ ಅಭಿಮಾನ ಇಟ್ಟುಕೊಂಡರೆ ಸಮಾಜ ಅಭಿವೃದ್ಧಿ ಹೊಂದಲು ಅನುಕೂಲವಾಗುತ್ತದೆ ಎಂದರು. ಸಿದ್ಧಾಪುರ ಅರಿಶಿಣಗೋಡಿನಲ್ಲಿ ನಡೆದ ಅಷ್ಟಬಂಧ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಧಾರ್ಮಿಕ, ಶೈಕ್ಷಣಿಕ, ಆರ್ಥಿಕ ಚಟುವಟಿಕೆಗಳು ಪೂರಕವಾಗಿ ಸಾಗಿದರೆ ಸುಸ್ಥಿರ ಅಭಿವೃದ್ಧಿಗೆ ಅನುಕೂಲವಾಗುತ್ತದೆ ಎಂದು ವಿವರಿಸಿದರು.
ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಸಿಗಂಧೂರು ಚೌಡೇಶ್ವರಿ ದೇವಸ್ಥಾನದ ಧರ್ಮದರ್ಶಿ ರಾಮಪ್ಪ ಮಾತನಾಡಿ ಹಳೆ ಗುಡಿ, ಹಳೆ ಶಾಲೆ ಅಭಿವೃದ್ಧಿಯಾದರೆ ಊರಿಗೇ ಕಳೆ ಬರುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಗಣ್ಯರನ್ನು ಸನ್ಮಾನಿಸಿ, ಗೌರವಿಸಲಾಯಿತು. ಸುವ್ಯವಸ್ಥಿತವಾಗಿ ನಡೆದ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗ್ರಾಮಸ್ಥರು, ಯುವಕರ ಉತ್ಸಾಹ, ಕಾರ್ಯಕ್ರಮಕ್ಕೆ ಕಳೆ ಕಟ್ಟಿತ್ತು.

