senaa sevaa-ಸೈನಿಕನಿಗೆ ಹುಟ್ಟೂರಿನ ಗೌರವ

ಸಿದ್ದಾಪುರ: ಭಾರತೀಯ ಸೈನ್ಯದಲ್ಲಿ ಹದಿನೇಳು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಪಡೆದು ತಾಯ್ನಾಡಿಗೆ ಮರಳಿದ ಸಿದ್ದಾಪುರ ತಾಲೂಕಿನ ಸಂಪೇಕೇರಿಯ(ಮುಗದೂರ) ವಿನಯಕುಮಾರ ನಾಯ್ಕ ರಿಗೆ ತಾಲೂಕಿನ‌ ಜನತೆ ಹಾಗೂ ಸ್ಥಳೀಯರು ಅಭೂತಪೂರ್ವ ಸ್ವಾಗತ ನೀಡಿದರು.
2008 ರಲ್ಲಿ ಭಾರತೀಯ ಸೈನ್ಯಕ್ಕೆ ಸೇರಿದ ವಿನಯಕುಮಾರ ನಾಯ್ಕ ಲಡಾಕ್, ಶ್ರೀನಗರ, ಪಂಜಾಬ್ ಸೇರಿದಂತೆ ದೇಶದ ಅನೇಕ ಕಡೆಗಳಲ್ಲಿ ಸೇವೆ ಸಲ್ಲಿಸಿ ಸೇವೆಯಿಂದ ನಿವೃತ್ತರಾಗಿ ಗುರುವಾರ ಹುಟ್ಟೂರಿಗೆ ಮರಳಿದ್ದಾರೆ.


ಸುಧೀರ್ಘ 17 ವರ್ಷ ಸೇವೆ ಸಲ್ಲಿಸಿ ಶಿರಸಿ ಮಾರ್ಗದ ಮೂಲಕ ಸಿದ್ದಾಪುರಕ್ಕೆ ಆಗಮಿಸಿದ ವಿನಯಕುಮಾರ ನಾಯ್ಕ ಅವರನ್ನು ಪಟ್ಟಣದ ಗಂಗಾಬಿಕಾ ದೇವಸ್ಥಾನದ ಬಳಿ ಬರಮಾಡಿಕೊಂಡು ಅದ್ಧೂರಿ ಸ್ವಾಗತ ನೀಡಲಾಯಿತು. ಅಲ್ಲಿಂದ ತೆರೆದ ಜೀಪಿನಲ್ಲಿ ಮೆರವಣಿಗೆಯಲ್ಲಿ ಕೊಂಡೊಯ್ದು ಗಾರ್ಡನ್ ಸರ್ಕಲ್ ಬಳಿ ಸಭೆ ನಡೆಸಲಾಯಿತು. ತಾಲೂಕಾ ದಂಡಾಧಿಕಾರಿ ಎಂ.ಆರ್.ಕುಲಕರ್ಣಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಕುಮಾರ ಗೌಡರ್ ಹಾರ ಹಾಕಿ ಸ್ವಾಗತಿಸಿದರು. ಹದಿನೇಳು ವರ್ಷಗಳ ಕಾಲ ಭಾರತೀಯ ಸೈನ್ಯದಲ್ಲಿ ಕರ್ತವ್ಯ ನಿರ್ವಹಿಸಿ ತಾಯ್ನಾಡಿನ ಸೇವೆ ಸಲ್ಲಿಸಿದ ವಿನಯಕುಮಾರ ನಾಯ್ಕ ನಿಜಕ್ಕೂ ಅಭಿನಂದನಾರ್ಹರು. ದೇಶದ ಪ್ರತಿಯೊಬ್ಬ ಪ್ರಜೆಯೂ ನೆಮ್ಮದಿಯಿಂದ ಜೀವನ ಸಾಗಿಸಲು ಕಾರಣರಾದ ಸೈನಿಕರು ಹಾಗೂ ರೈತರನ್ನು ಎಲ್ಲರೂ ಗೌರವದಿಂದ ಕಾಣಬೇಕು. ವಿನಯಕುಮಾರ ಮುಂದಿನ ಜೀವನ ಸುಖ, ಶಾಂತಿಯಿಂದ ಕೂಡಿರಲಿ ಎಂದು ಮೂವರು ಶುಭ ಹಾರೈಸಿದರು.


ಗಾರ್ಡನ್ ಸರ್ಕಲ್ಲಿನಿಂದ ಹೊರಟ ಮೆರವಣಿಗೆ ರಾಜಮಾರ್ಗ, ಸೊರಬಾ ರಸ್ತೆ, ಹಾಳದಕಟ್ಟಾ ಮಾರ್ಗವಾಗಿ ಮುಗದೂರ ಶಾಲೆಗೆ ತೆರಳಿ ವಿನಯಕುಮಾರ ಪ್ರಾಥಮಿಕ ಶಿಕ್ಷಣ ಪಡೆದ ಶಾಲೆಯಲ್ಲಿ ಅಭಿನಂದಿಸಲಾಯಿತು. ನಂತರ ಹುಟ್ಟೂರಾದ ಸಂಪೇಕೇರಿಯಲ್ಲಿ ಭವ್ಯ ಸ್ವಾಗತ ನೀಡಿ ಬರಮಾಡಿಕೊಳ್ಳಲಾಯಿತು. ಮೆರವಣಿಗೆಯುದ್ದಕ್ಕೂ ಸ್ಥಳೀಯರು, ಯುವಕರು ಹಾಗೂ ದೇಶಾಭಿಮಾನಿಗಳು ಬೈಕ್ ರ್ಯಾಲಿ ನಡೆಸಿ ವೀರ ಯೋಧನ ಸೇವೆಗೆ ಗೌರವ ಸಲ್ಲಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *