samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

  • ಸಿದ್ಧಾಪುರ ಹೆಗ್ಗರಣಿಯಲ್ಲಿ ನಡೆಯುತ್ತಿರುವ ಪ್ರಥಮ ದರ್ಜೆ ಮಹಾವಿದ್ಯಾಲಯ ತ್ಯಾರಸಿ ಸಿದ್ದಾಪುರದ ಎನ್.ಎಸ್.ಎಸ್.‌ ವಾರ್ಷಿಕ ಶಿಬಿರದ ಶಿಬಿರಾರ್ಥಿಗಳೊಂದಿಗೆ ಸ್ಥಳೀಯ ಶಾಸಕ ಭೀಮಣ್ಣ ನಾಯ್ಕ ಉಂಚಳ್ಳಿಯಲ್ಲಿ ಸಂವಾದ ನಡೆಸಿದರು.
  • ಅರಣ್ಯ ಹಕ್ಕು ಮಾನ್ಯತಾ ಸಮೀತಿಗಳ ಕಾನೂನು ವಿರೋಧಿ ಕ್ರಮದ ಬಗ್ಗೆ ಎ. ರವೀಂದ್ರ ಖಂಡನೆ

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ

ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ ವಿಧಾನಸೌಧವನ್ನ ಪ್ರವಾಸಿ ತಾಣವಾಗಿ ಮಾಡಲು ಸರ್ಕಾರ ನಿರ್ಧರಿಸಿದೆ.

vidhanasoudha

ಬೆಂಗಳೂರು: ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ ವಿಧಾನಸೌಧವನ್ನ ಪ್ರವಾಸಿ ತಾಣವಾಗಿ ಮಾಡಲು ಸರ್ಕಾರ ನಿರ್ಧರಿಸಿದೆ.

ಪ್ರವಾಸೋಧ್ಯಮ ಇಲಾಖೆಯ ಮನವಿ ಮೇರೆಗೆ ಸರ್ಕಾರ ಷರತ್ತು ಬದ್ದ ಅನುಮತಿ ನೀಡಿದೆ. ನಿರ್ಧಿಷ್ಟ ಪ್ರವೇಶ ಶುಲ್ಕ ನೀಡಿ ಪ್ರವಾಸಿಗರು ವಿಧಾನಸೌಧ ನೋಡಲು ವ್ಯವಸ್ಥೆ ಮಾಡಲಾಗುತ್ತಿದೆ.

ವಿಧಾನಸೌಧ ಪ್ರವೇಶಕ್ಕೆ ಶುಲ್ಕ, ಷರತ್ತು ಮತ್ತು ನಿಬಂಧನೆಗಳು

ಸಾರ್ವತ್ರಿಕ ರಜಾ ದಿನಗಳಂದು ಮಾತ್ರ ಬೆಳಿಗ್ಗೆ 8.00 ರಿಂದ ಸಂಜೆ 6.00ರವರೆಗೆ ವಿಧಾನಸೌಧದ ವೀಕ್ಷಣೆಗೆ ಅವಕಾಶ ಇರಲಿದೆ. ಇದಕ್ಕಾಗಿ “Guided Tour” ವ್ಯವಸ್ಥೆ ಕಲ್ಪಿಸಲಾಗುತ್ತಿದೆ.

Guided Tour ಗೆ ಅನುವಾಗುವಂತೆ ಪ್ರವಾಸಿಗರು Online ಮುಖಾಂತರ ticket ಪಡೆಯಲು ಪ್ರವಾಸೋದ್ಯಮ ಇಲಾಖೆಯಿಂದ ತಂತ್ರಾಂಶ ಅಭಿವೃದ್ಧಿ ಪಡಿಸಲಾಗುತ್ತಿದೆ.

vidhanasoudha

ಪ್ರವಾಸಿಗರಿಗೆ ನಿಗದಿಪಡಿಸುವ ಪ್ರವೇಶ ದರ ಜನಸ್ನೇಹಿಯಾಗಿರುವಂತೆ ಚಿಂತನೆ ನಡೆಸಲಾಗುತ್ತಿದೆ.

ವಿಧಾನಸೌಧ ಕಟ್ಟಡ/ ಉದ್ಯಾನವನಗಳು/ಪ್ರತಿಮೆಗಳಿಗೆ ಯಾವುದೇ ಧಕ್ಕೆ ಉಂಟಾಗದಂತೆ ಎಚ್ಚರಿಕ ವಹಿಸತಕ್ಕದ್ದು ಹಾಗೂ ಈ ಕುರಿತು ಅಗತ್ಯ ಸೂಚನಾ ಫಲಕಗಳನ್ನು ಅಳವಡಿಸಲು ಲೋಕೋಪಯೋಗಿ ಇಲಾಖೆಯು ಕ್ರಮವಹಿಸತಕ್ಕದ್ದು ಎಂಬ ಪ್ರಸ್ತಾವನೆ ಸಲ್ಲಿಸಲಾಗಿದೆ. (ಕ.ಪ್ರ.ಡಾ.)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *