ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಕಾರ್ಯಕ್ರಮದ ಸಾನಿಧ್ಯ ವಹಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷ ಸುಬ್ರಾಯ್ ಗೌಡ ಕುಳಿಕಟ್ಟು ತಿಳಿಸಿದರು.


ಇಲ್ಲಿಯ ಪ್ರವಾಸಿ ಮಂದಿರದಲ್ಲಿ ಬುಧವಾರ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ ಹಲವು ವರ್ಷಗಳಿಂದ ಸಮುದಾಯ ಭವನ ನಿರ್ಮಾಣಕ್ಕೆ ಪ್ರಯತ್ನಿಸಿದ್ದರೂ ಸಾಧ್ಯವಾಗಿರಲಿಲ್ಲ. ಆದರೆ ಇದೀಗ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಸಹಕಾರದೊಂದಿಗೆ ಸಿದ್ದಾಪುರ ಕರೆ ಒಕ್ಕಲಿಗರ ಸಂಘದಿಂದ ಹಲಗಡಿಕೊಪ್ಪದಲ್ಲಿ ಜಾಗ ಗುರುತಿಸಿ ಸಮುದಾಯ ಭವನ ನಿರ್ಮಾಣಕ್ಕೆ ಏ.11 ರಂದು ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಳ್ಳಲಾಗಿದೆ ಎಂದರು.


ಶಂಕುಸ್ಥಾಪನೆಯು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಯವರ ಅಮೃತ ಹಸ್ತದಿಂದ ನೆರವೇರಲಿದೆ. ಸಮುದಾಯದ ಅಭಿವೃದ್ಧಿಗೆ ಮಾರ್ಗದರ್ಶನ ನೀಡಿ ಇಂತಹದೊಂದು ಸ್ಮರಣೀಯ ಕಾರ್ಯಕ್ರಮದಲ್ಲಿ ಸಮಾಜದವರು ತೊಡಗಿಕ್ಕೊಳ್ಳುವಂತೆ ಆಶೀರ್ವದಿಸಿದ ಶ್ರೀಮಠದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರಸನ್ನನಾಥ ಸ್ವಾಮೀಜಿ, ಚಿಕ್ಕಬಳ್ಳಾಪುರ ಶಾಖಾ ಮಠದ ಶ್ರೀ ಮಂಗಳನಾಥ ಸ್ವಾಮೀಜಿ, ಮಿರ್ಜಾನ್ ಶಾಖಾ ಮಠದ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಸೇರಿದಂತೆ ಶಾಖಾ ಮಠದ ಪೂಜ್ಯರುಗಳು ಕಾರ್ಯಕ್ರಮದಲ್ಲಿ ಸಾನಿಧ್ಯವಹಿಸಲಿದ್ದಾರೆ ಎಂದರು.
ಇದಲ್ಲದೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕರಾದ ಭೀಮಣ್ಣ ನಾಯ್ಕ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಉಮಾಪತಿ ಗೌಡ, ಮಾಜಿ ಉಪ ಮುಖ್ಯಮಂತ್ರಿ ಸಿ.ಎನ್ ಅಸ್ವತ್‌ನಾರಾಯಣ, ರಾಜ್ಯಸಭಾ ಸದಸ್ಯರಾದ ಜಿ.ಸಿ ಚಂದ್ರಶೇಖರ್, ರಾಜ್ಯ ಒಕ್ಕಲಿಗರ ಸಂಗದ ನಿರ್ದೇಶಕ ಧರ್ಮೇಶ್ ಸಿರಿಬೈಲ್, ಉದ್ಯಮಿ ಉಪೇಂದ್ರ ಪೈ, ವಕೀಲರಾದ ಕೆ.ಟಿ ಗೌಡ, ಎಂ.ಟಿ. ಗೌಡ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿರಲಿದ್ದಾರೆ ಎಂದು ಮಾಹಿತಿ ನೀಡಿದರು.


ಕಾರ್ಯಕ್ರಮದ ಅಂಗವಾಗಿ ಮುಂಜಾನೆ 9.30ಕ್ಕೆ ಸಿದ್ದಾಪುರದ ಸಾಗರ್ ಸರ್ಕಲ್‌ನಿಂದ ಹಲಗಡಿಕೊಪ್ಪದವರೆಗೆ ಬೈಕ್ ರ‍್ಯಾಲಿ ನಡೆಯಲಿದೆ. ಬಳಿಕ ಮಹಿಳೆಯರಿಂದ ಪೂರ್ಣಕುಂಭ ಸ್ವಾಗತ ಹಾಗೂ ಡೊಳ್ಳುಕುಣಿತದೊಂದಿಗೆ ಪೂಜ್ಯರುಗಳನ್ನು ಬರಮಾಡಿಕ್ಕೊಳ್ಳಲಾಗುವುದು. ನಂತರ ಗಣಪತಿ ಹವನ, ಶ್ರೀ ರಾಮತಾರಕ ಮತ್ತು ಪವಮಾನ ಹವನ ಪೂಜಾ ಕಾರ್ಯಕ್ರಮ ನಡೆಯಲಿದೆ. ಬಳಿಕ ಪೂಜ್ಯರುಗಳಿಂದ ಪೂರ್ಣಾಹುತಿ ಹಾಗೂ ಮಹಾಮಂಗಳಾರತಿ ನಡೆಯಲಿದೆ ಎಂದರು.
ಇದೇ ವೇಳೆ ಸಂಘದ ಭವನ ನಿರ್ಮಾಣಕ್ಕೆ ಜಾಗ ನೀಡಿದ ವೆಂಕಟೇಶ ರಾಮದಾಸ ಕಾಂತು ಅವರನ್ನು ಸನ್ಮಾನಿಸಲಿದ್ದು. ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದವರು ಶ್ರೀಮಠದ ಭಕ್ತರು ಆಗಮಿಸುವಂತೆ ಮನವಿ ಮಾಡಿದರು.
ಈ ವೇಳೆ ಸಂಘದ ಗೌರವಾಧ್ಯಕ್ಷ ಮಹಾಬಲೇಶ್ವರ ಗೌಡ ಸರಕುಳಿ, ಸಲಹಾ ಸದಸ್ಯ ಶಂಕರ ಬಡ್ಡೆಮನೆ, ಕಾರ್ಯದರ್ಶಿ ರವೀಶ ಗೌಡ, ಸಂಘದ ಪದಾಧಿಕಾರಿಗಳಾದ ವಿನಾಯಕ ಗೌಡ, ನಾಗಪತಿ ಗೌಡ, ಸೀತಾರಾಮ ಗೌಡ ಸೇರಿದಂತೆ ಇನ್ನಿತರರು ಇದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *