ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

  • ಒಂದು ವಾರದ ಸಿದ್ಧಾಪುರ ಅವರಗುಪ್ಪಾ ಮಾರಿಕಾಂಬಾ ಜಾತ್ರೆ ಮುಕ್ತಾಯವಾಗಿದೆ. ಮಳೆಯ ರಗಳೆ ನಡುವೆ ಅದ್ಧೂರಿಯಾಗಿ ನಡೆದ ಈ ಜಾತ್ರಾಮಹೋತ್ಸವದ ಮುಕ್ತಾಯದ ಮಾರಿ ವಿಸರ್ಜನೆ ಅಹೋರಾತ್ರಿ ನಡೆಯಿತು. ಸ್ಥಳೀಯರು ವಿಶೇಶವಾಗಿ ಯುವಕರು ಕುಣಿದು ಕುಪ್ಪಳಿಸಿ ಮಾರಿಕಾಂಬೆಯ ವಿಸರ್ಜನಾ ವಿಧಿ ಪೂರೈಸಿದರು..
  • ಬೆಲೆ ಏರಿಕೆ ಖಂಡಿಸಿ ಸಿದ್ಧಾಪುರ ಬಿ.ಜೆ.ಪಿ. ಮಂಡಳದಿಂದ ಸಿದ್ಧಾಪುರ ರಾಮಕೃಷ್ಣ ಹೆಗಡೆ ವೃತ್ತದ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯ ಸಂದರ್ಭದಲ್ಲಿ ಮಾತನಾಡಿದ ಮುಖಂಡರು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದರು.

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ – 9740598884

ಹವಾಮಾನ ವರದಿ: ಬೆಂಗಳೂರು ಸೇರಿ ರಾಜ್ಯದ 15 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ!

ಚಂಡಮಾರುತದ ಪರಿಣಾಮವಾಗಿಯೇ ಮುಂಗಾರು ಪೂರ್ವ ಮಳೆ ಚುರುಕಾಗುತ್ತಿದ್ದು, ಒಂದು ವಾರ ಸಮೃದ್ಧ ಮಳೆಯಾಗಲಿದೆ ಎಂದು ತಿಳಿದುಬಂದಿದೆ.

Rain likely to occur at isolated places in karnataka

ಕರ್ನಾಟಕದಲ್ಲಿ ಮಳೆ (ಸಾಂದರ್ಭಿಕ ಚಿತ್ರ)online desk

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿಯಾಗಿರುವುದರಿಂದಾಗಿ ರಾಜ್ಯದ ಮೇಲೆ ಪರಿಣಾಮ ಉಂಟಾಗಿದ್ದು, ಇಂದಿನಿಂದ ಏ.17 ವರೆಗೆ ಬೆಂಗಳೂರು ಸೇರಿ 15 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಂಡಮಾರುತದ ಪರಿಣಾಮವಾಗಿಯೇ ಮುಂಗಾರು ಪೂರ್ವ ಮಳೆ ಚುರುಕಾಗುತ್ತಿದ್ದು, ಒಂದು ವಾರ ಸಮೃದ್ಧ ಮಳೆಯಾಗಲಿದೆ ಎಂದು ತಿಳಿದುಬಂದಿದೆ. ಈ ಮಧ್ಯೆ ಕಲಬುರಗಿ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಬಿಸಿಲ ಝಳವೂ ಹೆಚ್ಚಾಗಿದೆ.

Rain likely to occur at isolated places in karnataka

ಬೆಂಗಳೂರು: ಮುಂದಿನ ಎರಡು ದಿನ ರಾಜ್ಯದ ಕೆಲ ಭಾಗಗಳಲ್ಲಿ ಬಿರುಗಾಳಿ ಸಹಿತ ಮಳೆ ಸಾಧ್ಯತೆ

ಕರಾವಳಿಯ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡಿನಲ್ಲಿ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ. ಇದರೊಂದಿಗೆ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯಾಗಲಿದೆ ಎಂದು IMD ವರದಿ ಹೇಳಿದೆ. ಏ.08 ರಂದು ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ 4 ಸೆಂಟೀಮೀಟರ್ ಮಳೆಯಾಗಿದೆ. ಇನ್ನು ಬೆಂಗಳೂರಿನಲ್ಲಿ 24 ಗಂಟೆಗಳು ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ 35 ಡಿಗ್ರಿ ಮತ್ತು ಕನಿಷ್ಟ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *