ಮುಖ್ಯಮಂತ್ರಿಗಳ ವಿಶೇಶ ಉಪನ್ಯಾಸ…. # siddharamayya- speech-viral-news#

ಸಾವರ್ಕರ್, ಗೋಲ್ವಾಲ್ಕರ್ ಅಂಬೇಡ್ಕರ್ ಸಂವಿಧಾನದ ವಿರುದ್ಧ ಇದ್ದವರು- ಸಿಎಂ ಸಿದ್ದರಾಮಯ್ಯ

ಯುವ ಕಾಂಗ್ರೆಸ್ ಆಯೋಜಿಸಿದ್ದ ‘ಯುವ ಕ್ರಾಂತಿ’ ತರಬೇತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಮುಖ್ಯಮಂತ್ರಿ, ಸ್ವಾತಂತ್ರ್ಯ ಹೋರಾಟ ಮತ್ತು‌ ಆಧುನಿಕ ಭಾರತ ನಿರ್ಮಾಣದಲ್ಲಿ ಕಾಂಗ್ರೆಸ್ ನ ತ್ಯಾಗ-ಬಲಿದಾನ ಮಹತ್ವದ ಪಾತ್ರ ನಿರ್ವಹಿಸಿದೆ ಎಂದರು.

cm Siddaramaiah

ಸಿಎಂ ಸಿದ್ದರಾಮಯ್ಯ

ಮೈಸೂರು: ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ. ಈಗವರು ದೇಶಭಕ್ತಿ ಬಗ್ಗೆ ಮಾತಾಡುತ್ತಾರೆ. ಸಾವರ್ಕರ್ ಮತ್ತು ಗೋಲ್ವಾಲ್ಕರರು ಅಂಬೇಡ್ಕರ್ ಅವರ ಸಂವಿಧಾನದ ವಿರುದ್ಧ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹೇಳಿದರು.

ಯುವ ಕಾಂಗ್ರೆಸ್ ಆಯೋಜಿಸಿದ್ದ ‘ಯುವ ಕ್ರಾಂತಿ’ ತರಬೇತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಮುಖ್ಯಮಂತ್ರಿ, ಸ್ವಾತಂತ್ರ್ಯ ಹೋರಾಟ ಮತ್ತು‌ ಆಧುನಿಕ ಭಾರತ ನಿರ್ಮಾಣದಲ್ಲಿ ಕಾಂಗ್ರೆಸ್ ನ ತ್ಯಾಗ-ಬಲಿದಾನ ಮಹತ್ವದ ಪಾತ್ರ ನಿರ್ವಹಿಸಿದೆ. ದೇಶಕ್ಕೆ ನಾಗರಿಕ ಹಕ್ಕು ಮತ್ತು ಸಾಮಾಜಿಕ ನ್ಯಾಯ ಒದಗಿಸಲು ಹುಟ್ಟಿದ ಪಕ್ಷ ಕಾಂಗ್ರೆಸ್. ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ.ಆದರೆ ಈಗ ಇವರು ನಮಗೆ ದೇಶ ಭಕ್ತಿ ಬಗ್ಗೆ ಮಾತನಾಡುತ್ತಾರೆ ಎಂದರು.

ಗಾಂಧಿ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದಂತೆ, ಭಾರತದಲ್ಲಿ ಅಂಬೇಡ್ಕರ್ ಅವರ ಸಂವಿಧಾನಕ್ಕೆ ಭದ್ರ ಬುನಾದಿ ಹಾಕಿದವರು ನೆಹರೂರವರು. ಬಹುತ್ವ ಭಾರತದ ನೆಲದಲ್ಲಿ ಏಕತೆ ಮೂಡಿಸಿ ಸಹಿಷ್ಣುತೆಯನ್ನು ಆಚರಣೆಗೆ ತರಲು ನೆಹರೂ ಕೊಡುಗೆ ಅಪಾರ. ಮನುಸ್ಮೃತಿ ಪ್ರೇರಿತ ಜಾತಿ ವ್ಯವಸ್ಥೆ ಭಾರತ ಸಮಾಜವನ್ನು ಜಾತಿ ಆಧಾರದಲ್ಲಿ ಒಡೆಯಿತು. ಈ ಇತಿಹಾಸ ನಿಮಗೆ ಗೊತ್ತಿರಬೇಕು ಎಂದು ತಿಳಿಸಿದರು.

ಯುವ ಕಾಂಗ್ರೆಸ್ ಅಂದರೆ ಭಾರತದ ಸಂವಿಧಾನ ಮತ್ತು ಬಹುತ್ವದ ರಕ್ಷಣೆಗೆ ನಿಂತ ಯುವ ಸೈನ್ಯ. ನಾವು ಏಕೆ ಕಾಂಗ್ರೆಸ್ ಕಟ್ಟುತ್ತಿದ್ದೇವೆ, ಆರ್.ಎಸ್.ಎಸ್ ಮತ್ತು ಸಂಘ ಪರಿವಾರ ಹೇಗೆ ಭಾರತದ ಬಹುತ್ವ ಮತ್ತು ಸಂವಿಧಾನ ವಿರೋಧಿ ಎನ್ನುವ ಸ್ಪಷ್ಟತೆ ನಿಮಗೆ ಇರಬೇಕು. ಈ ಸ್ಪಷ್ಟತೆ ಇಲ್ಲದವರು ಬಹಳ ವರ್ಷ ಕಾಂಗ್ರೆಸ್ ನಲ್ಲಿ ಉಳೀತಾರೆ ಎನ್ನುವುದು ಅನುಮಾನ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಸಹಿಷ್ಣುತೆ ಹಾಗೂ ಸಹಬಾಳ್ವೆ ನಮ್ಮ ಸಂವಿಧಾನದ ಉಸಿರು. ಇದೇ ಭಾರತದ ಉಸಿರು ಕೂಡ ಆಗಿದೆ ಎಂದರು.

“ಅಧಿಕಾರ ಬಲಾಡ್ಯರ ಕೈಯಲ್ಲಿ ಇರಬಾರದು. ಜನ ಸಾಮಾನ್ಯರ ಕೈಯಲ್ಲಿ ಇರಬೇಕು” ಎಂದು ಅಂಬೇಡ್ಕರ್ ಹೇಳಿದ್ದರು. ಕಾಂಗ್ರೆಸ್ ಜನರ ಕೈಗೆ ಅಧಿಕಾರ ಮತ್ತು ಅವಕಾಶಗಳನ್ನು ನೀಡುತ್ತಿದೆ. ಬಿಜೆಪಿ ಬಲಾಡ್ಯರಿಗೆ ಅಧಿಕಾರ ಮತ್ತು ಅವಕಾಶ ನೀಡುತ್ತಿದೆ. ಇದು ಸಂವಿಧಾನ ವಿರೋಧಿ. ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿ ಅಸಮಾನತೆಯನ್ನು ಕಡಿಮೆ ಮಾಡುವ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದ್ದೇನೆ. ಸ್ವಾತಂತ್ರ್ಯ ದೊರೆತದ್ದು ಸಾರ್ಥಕ ಆಗಬೇಕಾದರೆ ಪ್ರತಿಯೊಬ್ಬರೂ ಆರ್ಥಿಕ ಮತ್ತು ಸಾಮಾಜಿಕ ಸಬಲತೆ ಪಡೆದುಕೊಳ್ಳಬೇಕು. ಕಟ್ಟ ಕಡೆಯ ಮನುಷ್ಯನಿಗೆ ಶಕ್ತಿ ಕೊಡುವುದೇ ಸರ್ವೋದಯದ ಆಶಯ ಎಂದು ತಿಳಿಸಿದರು.

ಮೌಡ್ಯ, ಕಂದಾಚಾರ, ಕರ್ಮ ಸಿದ್ಧಾಂತವನ್ನು ಕೃತಕವಾಗಿ ಸೃಷ್ಟಿಸಿ ನೀರು ಗೊಬ್ಬರ ಹಾಕಿ ಗಟ್ಟಿ ಮಾಡಿಟ್ಟಿದ್ದಾರೆ. ದೇವರು ಒಬ್ಬರಿಗೊಂದು, ಮತ್ತೊಬ್ಬರಿಗೊಂದು ಮಾಡುವುದಿಲ್ಲ. ದೇವರ ಹೆಸರಲ್ಲಿ ಮೌಢ್ಯಗಳನ್ನು ಬಿತ್ತುವವರ ಬಗ್ಗೆ ಎಚ್ಚರವಿರಲಿ.

ಶರಣ ಬಸವಣ್ಣ ಹೇಳಿದ ರೀತಿಯಲ್ಲಿ ದೇವರು ಇದ್ದಾನೆ. ಬಸವಣ್ಣರ ರೀತಿಯಲ್ಲಿ ದೇವರನ್ನು ಕಾಣಬೇಕು. ಮಾಡಬಾರದ ಪಾಪಗಳನ್ನೆಲ್ಲಾ ಮಾಡಿ ದೇವರಿಗೆ ಕೈ ಮುಗಿದರೆ ಪಾಪ ಹೋಗುವುದಿಲ್ಲ. ಬಿಜೆಪಿ ದೇವರು, ಧರ್ಮದ ಹೆಸರಲ್ಲಿ ಬರೀ ಸುಳ್ಳು ಹರಡುತ್ತದೆ. ಈ ಬಗ್ಗೆ ದೇಶದ ಜನರ ತಿಳಿವಳಿಕೆ ಹೆಚ್ಚಿಸುವ ಕೆಲಸ ಆಗಬೇಕಿದೆ. ತನ್ನನ್ನು ಚುನಾವಣೆಯಲ್ಲಿ ಸೋಲಿಸಿದ್ದು ಸಾವರ್ಕರ್ ಮತ್ತು ಢಾಂಗೆ ಎಂದು ಅಂಬೇಡ್ಕರ್ ಅವರೇ ಸ್ಪಷ್ಟವಾಗಿ ಬರೆದಿದ್ದಾರೆ. ನಿಮಗೆ ಇಂಥಾ ವಿಷಯಗಳಲ್ಲಿ ಸ್ಪಷ್ಟತೆ ಮತ್ತು ಬದ್ಧತೆ ಇದ್ದರೆ ಯಾರು ಏನೇ ಮಾಡಿದರೂ ನೀವು ಬದಲಾಗಲ್ಲ ಎಂದರು.

cm Siddaramaiah

ರಾಜೀವ್ ಗಾಂಧಿ ಅವರು ಕೊಟ್ಟ ಮೀಸಲಾತಿಯನ್ನು ವಿರೋಧಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದು ಬಿಜೆಪಿಯ ರಾಮಾ ಜೋಯಿಸ್. ಆದರೆ ನ್ಯಾಯಾಲಯ ರಾಜೀವ್ ಗಾಂಧಿ ಅವರು ತಂದ ತಿದ್ದುಪಡಿಯನ್ನು ಎತ್ತಿ ಹಿಡಿದು, ಇದು ಸಂವಿಧಾನ ಬದ್ಧವಾಗಿದೆ ಎಂದು ಹೇಳಿತು. ಮೀಸಲಾತಿಯನ್ನು ವಿರೋಧಿಸಿದ್ದ ಬಿಜೆಪಿ ಮಂಡಲ್ ವರದಿಯನ್ನೂ ವಿರೋಧಿಸಿತು. ಹೀಗಾಗಿ ಇತಿಹಾಸ ಮತ್ತು ಸಿದ್ಧಾಂತದ ಬಗ್ಗೆ ನಿಮಗೆ ಸ್ಪಷ್ಟತೆ ಇದ್ದರೆ ಮುಂದೆ ಉತ್ತಮ‌ ನಾಯಕರಾಗಿ ಬೆಳೆಯುತ್ತೀರಿ ಎಂದು ತಿಳಿಸಿದರು.

ಯುವ ಕಾಂಗ್ರೆಸ್ ಇಂದು ಇಲ್ಲಿ ಆಯೋಜಿಸಿರುವ ಇಂತಹ ಕಾರ್ಯಾಗಾರಗಳು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ನಡೆಯಬೇಕು ಎಂದು ಮುಖ್ಯಮಂತ್ರಿ ಕರೆ ನೀಡಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *