

ಕದನ ವಿರಾಮ ಒಪ್ಪಂದದ ನಂತರ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಜೈಶಂಕರ್, ಭಾರತ ಮತ್ತು ಪಾಕಿಸ್ತಾನ ಇಂದು ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆ ನಿಲ್ಲಿಸುವ ಕುರಿತು ಪರಸ್ಪರ ಒಮ್ಮತಕ್ಕೆ ಬಂದಿವೆ.


ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್
- https://www.youtube.com/shorts/g7slH78GV1M
ನವದೆಹಲಿ: ಮೂರು ದಿನಗಳಿಂದ ನಡೆಯುತ್ತಿದ್ದ ಭಾರತ- ಪಾಕಿಸ್ತಾನ ನಡುವಿನ ಸೇನಾ ಕಾರ್ಯಾಚರಣೆ ನಿಲ್ಲಿಸಲು ಉಭಯ ರಾಷ್ಟ್ರಗಳು ಒಪ್ಪಿಕೊಂಡಿವೆ. ಆದರೆ ಭಯೋತ್ಪಾದನೆ ವಿರುದ್ಧ ಭಾರತದ ನಿಲುವಿನಲ್ಲಿ ಯಾವುದೇ ರಾಜಿ ಇಲ್ಲ. ಅದು ಮುಂದುವರೆಯುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಶನಿವಾರ ಹೇಳಿದ್ದಾರೆ..
ಕದನ ವಿರಾಮ ಒಪ್ಪಂದದ ನಂತರ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಜೈಶಂಕರ್, ಭಾರತ ಮತ್ತು ಪಾಕಿಸ್ತಾನ ಇಂದು ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆ ನಿಲ್ಲಿಸುವ ಕುರಿತು ಪರಸ್ಪರ ಒಮ್ಮತಕ್ಕೆ ಬಂದಿವೆ.
ಆದರೆ, ಭಾರತ ಯಾವುದೇ ಮಾದರಿಯ ಭಯೋತ್ಪಾದನೆ ಮತ್ತು ಸೂಚನೆಗಳ ವಿರುದ್ಧ ರಾಜಿಯಾಗದ ನಿಲುವನ್ನು ಸ್ಥಿರವಾಗಿ ನಿರ್ವಹಿಸುತ್ತಿದೆ. ಅದು ಮುಂದುವರಿಯುತ್ತದೆ ಎಂದು ಬರೆದುಕೊಂಡಿದ್ದಾರೆ.
ಅಮೆರಿಕದ ಮಧ್ಯಸ್ಥಿಕೆಯಲ್ಲಿ ನಡೆದ ಮಾತುಕತೆಯ ನಂತರ ಭಾರತ ಮತ್ತು ಪಾಕಿಸ್ತಾನಗಳು ‘ಸಂಪೂರ್ಣ ಮತ್ತು ತಕ್ಷಣದ’ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ಹೇಳಿದ್ದಾರೆ. (kp.c)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
