

ಬೆಟ್ಟಭೂಮಿಯಲ್ಲಿ ಬೆಳೆನಾಶ ಮಾಡಿದ ಅರಣ್ಯ ಇಲಾಖೆ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಸಿದ್ದಾಪುರದ ಕುಣಜಿಗ್ರಾಮದ ಇಬ್ಬರು ರೈತರು ಅರಣ್ಯ ಇಲಾಖೆಯ ಈ ದೌರ್ಜನ್ಯದ ವಿರುದ್ಧ ಕಾನೂನುಕ್ರಮಕ್ಕೆ ಮುಂದಾಗಿರುವುದಾಗಿ ತಿಳಿಸಿದ್ದಾರೆ.

ಕುಣಜಿಗ್ರಾಮದ ತಮ್ಮ ಪರಂಪರಾಗತ ಬೆಟ್ಟದಲ್ಲಿ ಹಲವು ವರ್ಷಗಳಿಂದ ಉಳುಮೆ ಮಾಡುತಿದ್ದ ಹಲಗಡೆಕೊಪ್ಪದ ಕರಡಿಗುಡ್ಡೆಯ ಪ್ರದೇಶದಲ್ಲಿ ಮೂರುಜನರೈತರ ಬೆಳೆದ ನೂರಾರು ಅಡಿಕೆ ಗಿಡಗಳನ್ನು ಕಡಿದು ನಾಶ ಮಾಡಿದ ಬಗ್ಗೆ ವಿವರಿಸಿದ ತನುಜಾ ಪಾಟೀಲ್ ಸೇರಿದ ಕೆಲವು ರೈತರು ಬೆಳೆನಾಶ ಮಾಡಿದ ಅರಣ್ಯ ಇಲಾಖೆ ವಿರುದ್ಧ ಕಾನೂನು ಹೋರಾಟ ಮಾಡುವುದಾಗಿ ತಿಳಿಸಿದರು.
ಈ ಬಗ್ಗೆ ನಗರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಂತ್ರಸ್ತ ರೈತರು ಇದು ಅರಣ್ಯ ಇಲಾಖೆಯ ದಬ್ಬಾಳಿಕೆಯಾಗಿದ್ದು ಜನಪ್ರತಿನಿಧಿಗಳು ಈ ಬಗ್ಗೆ ಧ್ವನಿ ಎತ್ತಬೇಕು ಎಂದರು.


ಅರಣ್ಯ ಇಲಾಖೆಯ ಪ್ರತಿಕ್ರೀಯೆ-
ಕುಣಜಿಗ್ರಾಮದ ಹಲಗಡೆಕೊಪ್ಪದ ೨೦ ಎಕರೆ ಪ್ರದೇಶ ರಕ್ಷಿತ ಅರಣ್ಯ ಸ್ಥಳ, ಈ ಜಾಗದಲ್ಲಿ ಈ ಹಿಂದೆ ಅರಣ್ಯ ಇಲಾಖೆ ಶ್ರೀಗಂಧ ಮತ್ತು ಬೀಟೆ ಮರಗಳನ್ನು ಬೆಳೆದಿತ್ತು ಈ ರಕ್ಷಿತಾರಣ್ಯದಲ್ಲಿ ಕೆಲವರು ತಮ್ಮ ಹಕ್ಕು ಪ್ರತಿಪಾದಿಸಿ ಬೆಳೆಬಾಳುವ ಮರಗಳನ್ನು ಕಡಿದು ಅರಣ್ಯನಾಶ ಮಾಡಿದ್ದಲ್ಲದೆ ಅಕ್ರಮವಾಗಿ ಮಣ್ಣು ತೆಗೆದು ಬೊರ್ವೆಲ್ ಹಾಕಿಸಿ ಅನ್ಯರಿಗೆ ಲೀಜ್ ಮೇಲೆ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ನೀಡಿದ್ದಾರೆ. ಈ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಇಲಾಖೆಯ ನಿಯಮಾನುಸಾರ ಕ್ರಮ ಜರುಗಿಸಲಾಗಿದೆ. – ಅರಣ್ಯ ಇಲಾಖೆ ಮೂಲಗಳು
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






