ಬೆಟ್ಟಜಾಗದಲ್ಲಿ ಅಡಿಕೆ ನಾಶ, ರೈತರ ಆಕ್ರೋಶ *betta land issue*

ಬೆಟ್ಟಭೂಮಿಯಲ್ಲಿ ಬೆಳೆನಾಶ ಮಾಡಿದ ಅರಣ್ಯ ಇಲಾಖೆ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಸಿದ್ದಾಪುರದ ಕುಣಜಿಗ್ರಾಮದ ಇಬ್ಬರು ರೈತರು ಅರಣ್ಯ ಇಲಾಖೆಯ ಈ ದೌರ್ಜನ್ಯದ ವಿರುದ್ಧ ಕಾನೂನುಕ್ರಮಕ್ಕೆ ಮುಂದಾಗಿರುವುದಾಗಿ ತಿಳಿಸಿದ್ದಾರೆ.

ಕುಣಜಿಗ್ರಾಮದ ತಮ್ಮ ಪರಂಪರಾಗತ ಬೆಟ್ಟದಲ್ಲಿ ಹಲವು ವರ್ಷಗಳಿಂದ ಉಳುಮೆ ಮಾಡುತಿದ್ದ ಹಲಗಡೆಕೊಪ್ಪದ ಕರಡಿಗುಡ್ಡೆಯ ಪ್ರದೇಶದಲ್ಲಿ ಮೂರುಜನರೈತರ ಬೆಳೆದ ನೂರಾರು ಅಡಿಕೆ ಗಿಡಗಳನ್ನು ಕಡಿದು ನಾಶ ಮಾಡಿದ ಬಗ್ಗೆ ವಿವರಿಸಿದ ತನುಜಾ ಪಾಟೀಲ್‌ ಸೇರಿದ ಕೆಲವು ರೈತರು ಬೆಳೆನಾಶ ಮಾಡಿದ ಅರಣ್ಯ ಇಲಾಖೆ ವಿರುದ್ಧ ಕಾನೂನು ಹೋರಾಟ ಮಾಡುವುದಾಗಿ ತಿಳಿಸಿದರು.

ಈ ಬಗ್ಗೆ ನಗರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಂತ್ರಸ್ತ ರೈತರು ಇದು ಅರಣ್ಯ ಇಲಾಖೆಯ ದಬ್ಬಾಳಿಕೆಯಾಗಿದ್ದು ಜನಪ್ರತಿನಿಧಿಗಳು ಈ ಬಗ್ಗೆ ಧ್ವನಿ ಎತ್ತಬೇಕು ಎಂದರು.

ಅರಣ್ಯ ಇಲಾಖೆಯ ಪ್ರತಿಕ್ರೀಯೆ-

ಕುಣಜಿಗ್ರಾಮದ ಹಲಗಡೆಕೊಪ್ಪದ ೨೦ ಎಕರೆ ಪ್ರದೇಶ ರಕ್ಷಿತ ಅರಣ್ಯ ಸ್ಥಳ, ಈ ಜಾಗದಲ್ಲಿ ಈ ಹಿಂದೆ ಅರಣ್ಯ ಇಲಾಖೆ ಶ್ರೀಗಂಧ ಮತ್ತು ಬೀಟೆ ಮರಗಳನ್ನು ಬೆಳೆದಿತ್ತು ಈ ರಕ್ಷಿತಾರಣ್ಯದಲ್ಲಿ ಕೆಲವರು ತಮ್ಮ ಹಕ್ಕು ಪ್ರತಿಪಾದಿಸಿ ಬೆಳೆಬಾಳುವ ಮರಗಳನ್ನು ಕಡಿದು ಅರಣ್ಯನಾಶ ಮಾಡಿದ್ದಲ್ಲದೆ ಅಕ್ರಮವಾಗಿ ಮಣ್ಣು ತೆಗೆದು ಬೊರ್ವೆಲ್‌ ಹಾಕಿಸಿ ಅನ್ಯರಿಗೆ ಲೀಜ್‌ ಮೇಲೆ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ನೀಡಿದ್ದಾರೆ. ಈ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಇಲಾಖೆಯ ನಿಯಮಾನುಸಾರ ಕ್ರಮ ಜರುಗಿಸಲಾಗಿದೆ. – ಅರಣ್ಯ ಇಲಾಖೆ ಮೂಲಗಳು

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *