

ಸಿದ್ಧಾಪುರ, ಕುಮಟಾ ರಾಜ್ಯ ಹೆದ್ದಾರಿಯ ಬೇಡ್ಕಣಿ ಬಳಿ ಭೂಕುಸಿತವಾಗಿದ್ದು ವಾಹನ ಸವಾರರಿಗೆ ಅಪಾಯವಿರುವುದರಿಂದ ತಕ್ಷಣ ತಾಲೂಕಾ ಆಡಳಿಯ ಸೂಕ್ತ ಕ್ರಮ ಕೈಗೊಳ್ಳಲು ತಾಲೂಕಾ ಕ.ಸಾ.ಪ. ಅಧ್ಯಕ್ಷ ಚಂದ್ರಶೇಖರ್ ನಾಯ್ಕ ಕುಂಬ್ರಿಗದ್ದೆ ಆಗ್ರಹಿಸಿದ್ದಾರೆ. ಈ ಬಗ್ಗೆ ಸಮಾಜಮುಖಿ ಡಾಟ್ ನೆಟ್ ನ್ಯೂಸ್ ಜೊತೆ ಮಾತನಾಡಿದ ಅವರು ಹಗಲು ರಾತ್ರಿ ಎನ್ನದೆ ಈ ರಸ್ತೆಯಲ್ಲಿ ವಾಹನಗಳು ಚಲಿಸುತ್ತಿವೆ. ವಾಹನಗಳು ವಾಹನ ಸವಾರರ ಹಿತದೃಷ್ಟಿಯಿಂದ ಲೋಕೋಪಯೋಗಿ ಇಲಾಖೆ ಸೂಚನಾ ಫಲಕಗಳನ್ನು ಅಳವಡಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ಕುಮಟಾ-ಸಿದ್ಧಾಪುರ ರಸ್ತೆ ಬೇಡ್ಕಣಿ ಬಳಿ ಭೂಕುಸಿತವಾದ ಮಾಹಿತಿ ಸಿಕ್ಕಿದೆ. ಕಳೆದ ವರ್ಷವೇ ಈ ಭೂಸಿತದ ಅಪಾಯದ ಬಗ್ಗೆ ರಾಜ್ಯ ಸರ್ಕಾರಕ್ಕೆ ಮಾಹಿತಿ ನೀಡಿದ್ದೇವೆ. ಈ ವರೆಗೆ ಅನುದಾನ ಬಂದಿಲ್ಲ. ತಕ್ಷಣಕ್ಕೆ ಸೂಚನಾ ಫಲಕಗಳನ್ನು ಹಾಕಿ ವಾಹನ ಸವಾರರಿಗೆ ತೊಂದರೆ ಆಗದಂತೆ ಜಾಗೃತೆ ವಹಿಸುತ್ತೇವೆ. -ಶಶಿಕಾಂತ್ ಗೌಡ, ಸ.ಕಾ. ಅ. ಲೋಕೋಪಯೋಗಿ ಇಲಾಖೆ ಸಿದ್ಧಾಪುರ
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






