




ಸಿದ್ದಾಪುರ. ತಾಲೂಕಿನ ನಾಣಿಕಟ್ಟಾದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಪದವಿಪೂರ್ವ ಮತ್ತು ಪ್ರೌಢಶಾಲಾ ವಿಭಾಗಗಳು ಜಂಟಿಯಾಗಿ ಧ್ವಜಾರೋಹಣ ಕಾರ್ಯಕ್ರಮವನ್ನು ನಡೆಸಿದವು. ಕಾಲೇಜಿನ ಪ್ರಾಚಾರ್ಯ ಎಂ. ಕೆ. ನಾಯ್ಕ ಹೊಸಳ್ಳಿ ಧ್ವಜಾರೋಹಣ ಮಾಡಿ ಮಾತನಾಡುತ್ತಾ ನಮ್ಮ ಹಿರಿಯರ, ಸ್ವಾತಂತ್ರ ಹೋರಾಟಗಾರರ ನಿರಂತರ ಹೋರಾಟದಿಂದ ದೇಶಕ್ಕೆ ಸ್ವಾತಂತ್ರ್ಯ ದೊರಕಿದೆ. ಅದನ್ನು ಉಳಿಸಿ ಬೆಳೆಸಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ. ಸುಜಲ ಸುಫಲ, ಸಸ್ಯ ಶ್ಯಾಮಲ ಆಗಿರುವ ಈ ಭೂಮಾತೆಯನ್ನು ಸಮೃದ್ಧವಾಗಿ ಉಳಿಸಿಕೊಳ್ಳುವುದು ಸ್ವಾತಂತ್ರ್ಯದ ಒಂದು ಭಾಗವಾಗಿದೆ ಎಂದರು.

ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಮಹೇಶ ಹೆಗಡೆ ತ್ಯಾಗಲಿ, ಪ್ರೌಢಶಾಲಾ ವಿಭಾಗದ ಎಸ್.ಡಿ.ಎಂ.ಸಿ. ಅಧ್ಯಕ್ಷ ಮಹಾಬಲೇಶ್ವರ ಹೆಗಡೆ ಮತ್ತು ಉಮೇಶ ನಾಯ್ಕ ಶೇಲೂರು ಸ್ವಾತಂತ್ರ್ಯೋತ್ಸವದ ಶುಭ ಕೋರಿದರು. ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರು, ಎಸ್ ಡಿ ಎಂ ಸಿ ಸದಸ್ಯರು, ಕಾಲೇಜು ಹಾಗೂ ಪ್ರೌಢಶಾಲಾ ವಿಭಾಗದ ಬೋಧಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ವಂದೇಮಾತರಂ, ರಾಷ್ಟ್ರಗೀತೆ, ಧ್ವಜಗೀತೆ, ದೇಶಭಕ್ತಿಗೀತೆಗಳನ್ನು ಹಾಡಿದರು. ವಿದ್ಯಾರ್ಥಿ ರಫಾನ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ ಗಂಗೊಳ್ಳಿ ಧ್ವಜಾರೋಹಣಕ್ಕೆ ಸಹಕರಿಸಿದರು. ಸ್ವಾತಂತ್ರ್ಯೋತ್ಸವದ ನಿಮಿತ್ತ ಏರ್ಪಡಿಸಲಾಗಿದ್ದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಉಪನ್ಯಾಸಕ ಎಂ.ಆಯ್. ಹೆಗಡೆ ಸ್ವಾಗತಿಸಿ ನಿರೂಪಿಸಿದರು. ಹಿರಿಯ ಶಿಕ್ಷಕಿ ರೀನಾ ನಾಯಕ್ ವಂದಿಸಿದರು.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






