


ಸಿದ್ದಾಪುರ: ತಾಲೂಕಾ ಆಡಳಿತ, ಕನ್ನಡ & ಸಂಸ್ಕೃತಿ ಇಲಾಖೆ, ತಾಲೂಕಾ ಪಂಚಾಯತ, ಪಟ್ಟಣ ಪಂಚಾಯತ ಹಾಗೂ ತಾಲೂಕಾ ನಾಮಧಾರಿ ಸಮಾಜದ ಸಹಯೋಗದಲ್ಲಿ ಭಾನುವಾರ ನಡೆದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು.
ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಹಳ್ಳಿಬೈಲ್ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಗೋಪಾಲ ನಾಯ್ಕ ಭಾಶಿ, ಯಕ್ಷಗಾನ ಭಾಗವತ ಎಂ.ಆರ್.ನಾಯ್ಕ ಕರ್ಸೆಬೈಲ್,
ಜೇನು ಕೃಷಿಯಲ್ಲಿ ಸಾಧನೆ ಮಾಡುತ್ತಿರುವ ಬೆನಕ ನಾಯ್ಕ ಬಿಳುಮನೆ, ಹಿರಿಯ ಕೃಷಿಕ ತಿಮ್ಮಣ್ಣ ನಾಯ್ಕ ರನ್ನು ಗೌರವಿಸಲಾಯಿತು.

ನಾರಾಯಣಗುರು ಜಯಂತಿ ಉದ್ಘಾಟಿಸಿದ ತಾಲೂಕಾ ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಜಿ.ನಾಗರಾಜ ಮಾತನಾಡಿ, ನಾರಾಯಣಗುರು ಜಾತಿ, ಮತವನ್ನು ಮೀರಿದ ಸತ್ಪುರುಷರಾಗಿದ್ದರು. ಕೆಳಸ್ತರದ ಜನರ ಶಿಕ್ಷಣಕ್ಕಾಗಿ ಶಾಲೆಯನ್ನು ತೆರೆದ ಮಹಾನ್ ವ್ಯಕ್ತಿಯಾಗಿದ್ದರು. ದೇಶದಲ್ಲಿ ಕೇರಳ ರಾಜ್ಯ ಸಾಕ್ಷರತೆಯಲ್ಲಿ ಮೊದಲ ಸ್ಥಾನ ಪಡೆಯಲು ಪ್ರಮುಖ ಕಾರಣಿಕರ್ತರು ನಾರಾಯಣಗುರು. ಸಾಮಾಜಿಕ ಅನಿಷ್ಟಗಳ ವಿರುದ್ಧ ಚಳುವಳಿ ಸಾರಿದ ನಾರಾಯಣಗುರು ಸಾಮಾಜಿಕ ಕ್ರಾಂತಿಗೆ ಕಾರಣರಾಗಿದ್ದರು. ನಾರಾಯಣಗುರುಗಳ ಆದರ್ಶವನ್ನು ನಾವೆಲ್ಲರೂ ಪಾಲಿಸೋಣ ಎಂದರು.
ಸಿದ್ದಾಪುರ ಸರ್ಕಾರಿ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ರತ್ನಾಕರ ನಾಯ್ಕ ಉಪನ್ಯಾಸ ನೀಡಿ, ಸಮುದಾಯದ ಸಾಮಾಜಿಕ ಬದಲಾವಣೆಗೆ ಕಾರಣರಾದ ನಾರಾಯಣಗುರು ಶಿಕ್ಷಣದಿಂದ ಸಂಘಟಿತರಾಗಿ ಎಂದು ಕರೆ ಕೊಟ್ಟವರು. ಕೆಳವರ್ಗದವರಿಗೆ ಸ್ತನ ತೆರಿಗೆ ಸಂಪ್ರದಾಯವಿದ್ದ ಕೇರಳದಂತಹ ನಾಡಿನಲ್ಲಿ ಸಂತನಾಗಿ ಬೆಳೆದ ನಾರಾಯಣಗುರು ಶೈಕ್ಷಣಿಕ ಹಾಗೂ ಸಾಮಾಜಿಕ ಕ್ರಾಂತಿಗೆ ಕಾರಣರಾದವರು. ಶೈಕ್ಷಣಿಕ, ಸಾಮಾಜಿಕ ಜಾಗೃತಿ ಮೂಡಿಸಬೇಕು. ಮನುಷ್ಯತ್ವವುಳ್ಳ ಎಲ್ಲಾ ಸಮುದಾಯಗಳು ನಾರಾಯಣಗುರುಗಳ ವಿಚಾರಧಾರೆಯನ್ನು ಅಳವಡಿಸಿಕೊಳ್ಳಬೇಕು ಎಂದರು.



ತಾಲೂಕಾ ನಾಮಧಾರಿ ಸಮಾಜದ ಅಧ್ಯಕ್ಷ ಕೆ.ಜಿ.ನಾಯ್ಕ ಹಣಜಿಬೈಲ್, ವಸಂತ ನಾಯ್ಕ ಮನಮನೆ ಮಾತನಾಡಿದರು. ತಾಲೂಕಾ ದಂಡಾಧಿಕಾರಿ ಎಂ.ಆರ್.ಕುಲಕರ್ಣಿ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕ ಮಾತನಾಡಿದರು.
ಈ ವೇಳೆ ತಾಲೂಕಾ ನಾಮಧಾರಿ ಸಮಾಜದ ಗೌರವಾಧ್ಯಕ್ಷ ಆನಂದ ನಾಯ್ಕ, ಶ್ರೀರಾಮ ಸೇವಾ ಸಮಿತಿ ಅಧ್ಯಕ್ಷ ವಿ.ಎನ್.ನಾಯ್ಕ, ತಾಲೂಕಾ ನಾಮಧಾರಿ ನೌಕರರ ಸಂಘದ ಅಧ್ಯಕ್ಷ ರವಿ ನಾಯ್ಕ, ಬಿ.ಎಸ್.ಎನ್.ಡಿ.ಪಿ ತಾಲೂಕಾ ಅಧ್ಯಕ್ಷ ವಿನಾಯಕ ನಾಯ್ಕ, ತಾಲೂಕಾ ಪಂಚಾಯ್ತಿ ಇಓ ದೇವರಾಜ ಹಿತ್ತಲಕೊಪ್ಪ, ತಾಲೂಕಾ ದಂಡಾಧಿಕಾರಿ ಎಂ.ಆರ್.ಕುಲಕರ್ಣಿ, ತಾಲೂಕಾ ಆರೋಗ್ಯಾಧಿಕಾರಿ ಲಕ್ಷ್ಮೀಕಾಂತ ನಾಯ್ಕ, ಪಪಂ ಮುಖ್ಯಾಧಿಕಾರಿ ಜೆ.ಆರ್.ನಾಯ್ಕ, ಸಂಕಲ್ಪ ಸೇವಾ ಸಂಸ್ಥೆಯ ಅಧ್ಯಕ್ಷ ಪಿ.ಬಿ.ಹೊಸೂರ, ಸಮಾಜದ ಪ್ರಮುಖರಾದ ವಸಂತ ನಾಯ್ಕ, ವೀರಭದ್ರ ನಾಯ್ಕ, ಸಿ.ಆರ್.ನಾಯ್ಕ, ಇಂದಿರಾ ನಾಯ್ಕ, ಕೆ.ಆರ್.ವಿನಾಯಕ, ಲೀಲಾವತಿ ನಾಯ್ಕ, ಬಾಲಕೃಷ್ಣ ನಾಯ್ಕ ಕೋಲಶಿರ್ಸಿ ಉಪಸ್ಥಿತರಿದ್ದರು. ಉಪತಹಶೀಲ್ದಾರ ಜಿ.ಎಲ್.ಶ್ಯಾಮಸುಂದರ ಸ್ವಾಗತಿಸಿದರು. ಅರುಣ ಸುಂಕತ್ತಿ ನಿರೂಪಿಸಿದರು. ಅಣ್ಣಪ್ಪ ನಾಯ್ಕ ಶಿರಳಗಿ ವಂದಿಸಿದರು.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






