

ಸುಮಾರು ಎರಡು ವರ್ಷಗಳ ಅವಧಿಯಲ್ಲಿ ಸಿದ್ಧಾಪುರದ ಕರ್ನಾಟಕ ಬ್ಯಾಂಕಿನ ಕೆಲವು ಗ್ರಾಹಕರಿಗೆ ಅಜಮಾಸು ಮೂರೂವರೆ ಕೋಟಿ ರೂಪಾಯಿ ಪಂಗನಾಮ ಹಾಕಿದ ಬಹುಕೋಟಿ ಹಗರಣ ಒಂದು ನಡೆದಿದ್ದು ಬ್ಯಾಂಕ್ ಗ್ರಾಹಕರ ಸೇವೆಗೆ ನಿಗದಿಯಾಗಿದ್ದ ಸಿಬ್ಬಂಧಿಯೇ ಈ ಬಹುಕೋಟಿ ಹಗರಣದ ರೂವಾರಿ ಎನ್ನಲಾಗಿದೆ.

ಕಳೆದ ವಾರದ ಕೊನೆಗೆ ಸಿದ್ದಾಪುರದ ಕರ್ನಾಟಕ ಬ್ಯಾಂಕಿನ ವ್ಯವಸ್ಥಾಪಕರು ಇಲ್ಲಿಯ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದು ಈ ದೂರಿನ ಪ್ರಕಾರ ಸಿದ್ಧಾಪುರ ಹೆಗ್ಗರಣಿ ಮೂಲದ ಮಂಜುನಾಥ ಶ್ರೀಧರ ಭಟ್ ಸಿದ್ಧಾಪುರ ಕರ್ನಾಟಕ ಬ್ಯಾಂಕಿನಲ್ಲಿ ಕಳೆದ ಕೆಲವು ವರ್ಷಗಳಿಂದ ಗ್ರಾಹಕರ ಸೇವಾ ಸಹಾಯಕನಾಗಿ ಕೆಲಸ ಮಾಡುತ್ತಿದ್ದವರು ಗ್ರಾಹಕರ ಠೇವಣಿ ಹಣ ನೀಡಿಕೆ & ನವೀಕರಣ ಪ್ರಕರಣಗಳಲ್ಲಿ ಸುಮಾರು ಮೂರೂವರೆ ಕೋಟಿಗೂ ಹೆಚ್ಚು ಹಣ ತನ್ನ ಖಾತೆಗೆ ವರ್ಗಾಯಿಸಿಕೊಂಡು ಬ್ಯಾಂಕ್ ಮತ್ತು ಗ್ರಾಹಕರಿಗೆ ವಂಚಿಸಿದ್ದ ಬಗ್ಗೆ ದೂರು ನೀಡಿದ್ದಾರೆ.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






