


ಎಲೆಚುಕ್ಕಿ ರೋಗ ಎಳೆಯ ಅಡಕೆ ಮರಗಳ ಸಾವು ಸೇರಿದಂತೆ ಅಡಕೆ ಬೆಳೆಗಾರರ ಸಮಸ್ಯೆ ಆಲಿಸಿದ ಮುಖ್ಯಮಂತ್ರಿಗಳು ಅಡಕೆ ಬೆಳೆಗಾರರ ಸಮಸ್ಯೆಗಳಿಗೆ ಸ್ಫಂದಿಸುವ ಭರವಸೆ ನೀಡಿದ್ದಾರೆ. ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಮಾಡಿ ಅಡಕೆ ಬೆಳೆಗಾರರ ಪರವಾಗಿ ಮುಖ್ಯಮಂತ್ರಿಗಳಿಗೆ ಶಾಸಕ ಭೀಮಣ್ಣ ನಾಯ್ಕ ನೀಡಿದ ಮನವಿ ಸ್ವೀಕರಿಸಿ ಚರ್ಚಿಸಿದ ಮುಖ್ಯಮಂತ್ರಿಗಳು ಶಾಸಕರ ಮನವಿಗೆ ಸ್ಫಂದಿಸಿದ್ದಾರೆ.


ಈ ಬಗ್ಗೆ ಪ್ರಕಟಣೆ ನೀಡಿರುವ ಶಾಸಕರ ಕಾರ್ಯಾಲಯ ಸಿದ್ಧಾಪುರದಲ್ಲಿ ನಡೆದ ಅಡಕೆ ಬೆಳೆಗಾರರ ಸಭೆ, ಅಡಕೆ ಬೆಳೆಗಾರರು ಮತ್ತು ಸಂಘ ಸಂಸ್ಥೆಗಳು ಅಡಕೆ ಬೆಳೆಗಾರರ ಕಷ್ಟದ ಪರಿಸ್ಥಿತಿಯನ್ನು ಶಾಸಕರ ಗಮನಕ್ಕೆ ತಂದಿದ್ದರು. ಅಡಕೆ ಬೆಳೆಗಾರರಿಗೆ ಭರವಸೆ ನೀಡಿದಂತೆ ಅವರ ಪರವಾಗಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ ಶಾಸಕರು ಮುಖ್ಯಮಂತ್ರಿಗಳಿಗೆ ಮನವಿ ನೀಡಿ, ಮಾಹಿತಿ ನೀಡಿದ ಮೇಲೆ ಸರ್ಕಾರ ಈ ಬೇಡಿಕೆ ಪರಿಶೀಲಿಸಲಿದೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದು ಶಾಸಕರು ತಿಳಿಸಿರುವ ಬಗ್ಗೆ ಉಲ್ಲೇಖಿಸಿದ್ದಾರೆ. ಶಿರಸಿ-ಸಿದ್ಧಾಪುರಗಳಲ್ಲಿ ನಡೆದ ಅಡಕೆ ಬೆಳೆಗಾರರು ಮತ್ತು ಸಂಘ- ಸಂಸ್ಥೆಗಳ ಸಭೆಯಲ್ಲಿ ಅಡಕೆ ಬೆಳೆಗಾರರ ಸಮಸ್ಯೆ ಬಗ್ಗೆ ಸರ್ಕಾರದ ಗಮನ ಸೆಳೆಯಲು ಶಾಸಕರಿಗೆ ಮನವಿ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.

_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






