

ಸಿದ್ದಾಪುರ: ತಾಲೂಕಿನ ಅವರಗುಪ್ಪದ ವೀರಭದ್ರೇಶ್ವರ ದೇವರ ವಾರ್ಷಿಕೋತ್ಸವ ಹಾಗೂ ಬಸವನ ಮೂರ್ತಿ ಪುನರ್ ಪ್ರತಿಷ್ಠಾಪನೆ ಕಾರ್ಯಕ್ರಮ ಬ್ರಹ್ಮಶ್ರೀ ನಾರಾಯಣಗುರು ಮಹಾಸಂಸ್ಥಾನ ನಿಟ್ಟೂರ ಪೀಠಾಧಿಪತಿ ಶ್ರೀ ರೇಣುಕಾನಂದ ಸ್ವಾಮೀಜಿ ದಿವ್ಯ ಸಾನಿಧ್ಯದಲ್ಲಿ ವಿಜೃಂಭಣೆಯಿಂದ ಜರುಗಿತು.


ಧರ್ಮಸಭೆಯ ದಿವ್ಯ ಸಾನಿಧ್ಯ ವಹಿಸಿದ್ದ ಶ್ರೀ ರೇಣುಕಾನಂದ ಸ್ವಾಮೀಜಿ ಮಾತನಾಡಿ, ಧಾರ್ಮಿಕ ಕಾರ್ಯಕ್ರಮಗಳು ಜಾಗೃತಿ ಮೂಡಿಸುವ ವೇದಿಕೆಗಳಾಗಬೇಕು. ಧರ್ಮವನ್ನು ಬಿಟ್ಟು ಯಾರು ಬದುಕಲು ಸಾಧ್ಯವಿಲ್ಲ. ಧರ್ಮ ಹಾಗೂ ಸಮಾನತೆಯ ಹೋರಾಟ ಸಾಕಷ್ಟು ವರ್ಷಗಳಿಂದ ನಡೆಯುತ್ತಿದೆ. ಬ್ರಹ್ಮಶ್ರೀ ನಾರಾಯಣಗುರುಗಳು 18ನೇ ಶತಮಾನದಲ್ಲಿ ದೊಡ್ಡ ಹೋರಾಟ ಮಾಡಿ ದೇವರ ದೃಷ್ಟಿಯಲ್ಲಿ ವಿಭಿನ್ನತೆಯಿಲ್ಲ. ಮನುಷ್ಯರೆಲ್ಲರೂ ಸಮಾನರು ಎಂದು ಸಂದೇಶ ನೀಡಿದ ನಂತರ ದೇಶದಲ್ಲಿ ಸಾಕಷ್ಟು ಕ್ರಾಂತಿಯಾಗಿದೆ. ನಾರಾಯಣಗುರುಗಳು ಹೇಳಿದಂತೆ ಮಕ್ಕಳಿಗೆ ಶಿಕ್ಷಣ ಕೊಡುವ ಜತೆಗೆ ಸಂಸ್ಕಾರ ಕಲಿಸಬೇಕು ಎಂದರು.

ಧಾರ್ಮಿಕ ಕಾರ್ಯಕ್ರಮ ನಡೆಸಿಕೊಟ್ಟ ವೇ.ಮೂ. ಪರಮೇಶ್ವರಯ್ಯ ಕಾನಳ್ಳಿಮಠ ಮಾತನಾಡಿ, ಭಕ್ತರು ಹಾಗೂ ಊರಿನ ಜನರ ಪರಿಶ್ರಮದಿಂದ ದೇವಾಲಯ ನಿರ್ಮಾಣಗೊಂಡಿದೆ. ವೀರಭದ್ರೇಶ್ವರನ ಕೃಪೆಯಿಂದ ಅವರಗುಪ್ಪ ಸುಭೀಕ್ಷವಾಗಿರಲಿ ಎಂದು ಹಾರೈಸಿದರು.


ಈ ಸಂದರ್ಭದಲ್ಲಿ ಗ್ರಾಮಾಭಿವೃದ್ಧಿ ಕಮಿಟಿ ಉಪಾಧ್ಯಕ್ಷ ಮೋಹನ ನಾಯ್ಕ, ಕಾರ್ಯದರ್ಶಿ ಪ್ರಶಾಂತ ನಾಯ್ಕ ಉಪಸ್ಥಿತರಿದ್ದರು.
ಗ್ರಾಮಾಭಿವೃದ್ಧಿ ಕಮಿಟಿ ಅಧ್ಯಕ್ಷ ನಾರಾಯಣ ನಾಯ್ಕ ಸ್ವಾಗತಿಸಿದರು. ಗ್ರಾಮದ ರವಿ ನಾಯ್ಕ ಕಾರ್ಯಕ್ರಮ ನಿರೂಪಿಸಿದರು.


_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________





