sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/

ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/

ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/

ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/

ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/

ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ ವಿದ್ಯಾರ್ಥಿಗಳು ಮೆಟ್ರಿಕ್‌ ಪಾಸಾಗಿರುವ ರಾಜ್ಯದ ನಂ೧ ತಾಲೂಕಾಗಿ ಹೊರಹೊಮ್ಮುವ ಸಾಧ್ಯತೆ ಇದೆ.

ಕಳೆದ ವರ್ಷ ಬೆಳಗಾವಿ ವಿಭಾಗಕ್ಕೆ ಮೊದಲು, ರಾಜ್ಯಕ್ಕೆ ನಂ೨ ಆಗಿ ಹೆಸರು ಮಾಡಿದ್ದ ಸಿದ್ದಾಪುರ ಈ ವರ್ಷ ತನ್ನ ಸಾಧನೆ ಹೆಚ್ಚಿಸಿಕೊಂಡಿದ್ದು ಮೂರು ಜನ ಮಾತ್ರ ಅನುತ್ತೀರ್ಣರಾಗಿ ಪ್ರತಿಶತ ೯೯.೭೫ ಫಲಿತಾಂಶ ದಾಖಲಿಸುವ ಮೂಲಕ ರಾಜ್ಯದ ನಂ೧ ತಾಲೂಕೆಂದು ಘೋಷಣೆ ಮಾಡುವುದೊಂದೇ ಬಾಕಿ ಎನ್ನುವಂತಿದೆ. ತಾಲೂಕಿನ ೩೩ ಹೈಸ್ಕೂಲುಗಳಲ್ಲಿ ೩೨ ಹೈಸ್ಕೂಲುಗಳು ಪ್ರತಿಶತ ೧೦೦ ದಾಖಲೆ ಮಾಡಿದ್ದು ಸರಾಸರಿ ಫಲಿತಾಂಶ ಮತ್ತು ಗುಣಾತ್ಮಕ ಪ್ರಮಾಣದಲ್ಲಿ ರಾಜ್ಯಕ್ಕೇ ನಂ೧ ಎನ್ನುವಂತಾಗಿದೆ.

ಸಿದ್ಧಾಪುರ ನಗರದ ಹೊಸೂರಿನ ಅನುದಾನಿತ ಪ್ರೌಢಶಾಲೆಯೊಂದನ್ನು ಬಿಟ್ಟು ನಗರ ಮತ್ತು ಗ್ರಾಮೀಣ ಪ್ರದೇಶಗಳ ಎಲ್ಲಾ ಪ್ರೌಢಶಾಲೆಗಳು ೧೦೦ ಕ್ಕೆ ನೂರು ಫಲಿತಾಂಶ ದಾಖಲಿಸಿರುವುದು ದಾಖಲೆ ಎನ್ನಲಾಗಿದೆ.

ಕ್ಷೇತ್ರಶಿಕ್ಷಣಾಧಿಕಾರಿಗಳು, ಶಿಕ್ಷಕರು ಸೇರಿದಂತೆ ಇಡೀ ಇಲಾಖೆಯ ಅವಿರತ ಶ್ರಮ ಇಂದಿನ ಎಸ್. ಎಸ್.‌ ಎಲ್.ಸಿ. ಫಲಿತಾಂಶದ ಮೂಲಕ ಪ್ರತಿಬಿಂಬಿತವಾಗಿದೆ. ರಾಜ್ಯಮಟ್ಟದ ೫ ರ್ಯಾಂಕ್‌ ಗಳಿಸಿರುವ ಸಿದ್ಧಾಪುರ ತಾಲೂಕು ಜಿಲ್ಲೆ, ವಿಭಾಗ ಮಟ್ಟ ಮೀರಿ ರಾಜ್ಯದಲ್ಲಿ ಗುರುತಿಸಿಕೊಂಡಂತಾಗಿದೆ.

  • ನಮ್ಮ ಪ್ರಯತ್ನ, ಶ್ರಮಕ್ಕಿಂತ ವಿದ್ಯಾರ್ಥಿಗಳ ಸಾಧನೆ ದೊಡ್ಡದು ಇಲಾಖೆ, ಶಿಕ್ಷಕರು ಗುರಿ ನಿಗದಿಪಡಿಸಿ ಕೆಲಸಮಾಡಬಹುದು ಆದರೆ ವಿದ್ಯಾರ್ಥಿಗಳ ಆಸಕ್ತಿ-ಶ್ರಮ ತೊಡಗಿಸಿಕೊಳ್ಳುವಿಕೆ ಇಲ್ಲದೆ ಫಲಿತಾಂಶ ಬರುವುದಿಲ್ಲ. ನಮ್ಮ ತಾಲೂಕಿನ ವಿದ್ಯಾರ್ಥಿಗಳು, ಶಿಕ್ಷಕರ ಶ್ರಮಕ್ಕೆ ನಾನು ಕೃತಜ್ಙನಾಗಿದ್ದೇನೆ…
  • – ಎಂ.ಎಚ್.‌ ನಾಯ್ಕ ಬಿ.ಇ.ಓ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *