ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ ಕುಡಿಯಾಗಿದ್ದ ರಮಾನಂದ ನಾಯಕ ಸಾಹಿತ್ಯ-ಸಾಂಸ್ಕೃತಿಕ ಮನಸ್ಸಿನ ತೂಕದ ವ್ಯಕ್ತಿಯಾಗಿದ್ದರು. ವಯೋಸಹಜ ಅನಾರೋಗ್ಯದಿಂದ ಇಂದು ಬೆಂಗಳೂರಿನಲ್ಲಿ ನಿಧನರಾದ ಅವರ ಶವ ಸಂಸ್ಕಾರ ಅವರ ಹುಟ್ಟೂರು ಹಿಚ್ಕಡದಲ್ಲಿ ಶುಕ್ರವಾರ ನಡೆಯಲಿದೆ. ಹಿರಿಯ ನಾಯಕ ರಮಾನಂದ ನಾಯಕ ಸಾವಿಗೆ ಕಂಬನಿ ಮಿಡಿದಿರುವ ಅನೇಕರಲ್ಲಿ ಶಾಸಕ ಭೀಮಣ್ಣ ನಾಯಕ, ಹಿರಿಯ ನಾಯಕ ಆರ್.ವಿ.ದೇಶಪಾಂಡೆ, ಸಂಸದ ವಿಶ್ವೇಶ್ವರ ಹೆಗಡೆ, ಕೆ.ಜಿ.ನಾಗರಾಜ್‌, ಶಶಿಭೂಷಣ ಹೆಗಡೆ ಸೇರಿದಂತೆ ಅನೇಕರು ಅವರ ಸೇವೆ ಸ್ಮರಿಸಿದ್ದಾರೆ.

*ಶ್ರದ್ಧಾಂಜಲಿ*

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಹಿರಿಯ ನಾಯಕರು ಉತ್ತರಕನ್ನಡ ಜಿಲ್ಲಾ ಪರಿಷತ್ತಿನ ಮೊದಲ ಅಧ್ಯಕ್ಷರು ಸರಳ ವ್ಯಕ್ತಿತ್ವದ ಸಜ್ಜನಿಕೆಯ ರಾಜನೀತಿಜ್ಞ ಶ್ರೀ ರಮಾನಂದ ನಾಯಕರು ನಮ್ಮನ್ನಗಲಿದ್ದಾರೆ.

*ನಾಡಿನ ಕೆಲವೇ‌ ಕೆಲವು ಮುತ್ಸದ್ಧಿ ರಾಜಕಾರಣಿಗಳ ಹೆಸರಿನ ಸಾಲಿನಲ್ಲಿ ರಮಾನಂದ ನಾಯಕರು ಇದ್ದೇ ಇರುತ್ತಾರೆ. ಅವರ ಬದುಕು, ಹಾಗೂ ವ್ಯಕ್ತಿತ್ವವೇ ಒಂದು ಆದರ್ಶ. ಜೀವಪರ ಚಿಂತನೆಯ‌ ಕಾಯಕ ಯೋಗಿ. ಜಿಲ್ಲಾ ಪರಿಷತ್ ಅಧ್ಯಕ್ಷರಾಗಿ ಉತ್ತರಕನ್ನಡ ಜಿಲ್ಲೆಗೆ ಅವರು ನೀಡಿದ ಕೊಡುಗೆ ಅಪಾರ. ರಾಜಕಾರಣದಲ್ಲಿ ಏನನ್ನೂ ಬಯಸದ, ಪಡೆಯದ ನಿಸ್ಪ್ರಹ ‌ಮನುಷ್ಯ. ರಾಜನೀತಿಯ ಜೊತೆಗೆ ಸಾಹಿತ್ಯಿಕ, ಸಾಂಸ್ಕೃತಿಕ, ಸಾಮಾಜಿಕ ವಿಚಾರಗಳಲ್ಲಿಯೂ ಅಪಾರ ಅನುಭವವುಳ್ಳ ಸಂಪನ್ಮೂಲ ವ್ಯಕ್ತಿ. ಎಲ್ಲರೂ ಪ್ರೀತಿಸುವ… ಎಲ್ಲರನ್ನೂ ಪ್ರೀತಿಸುವ ಅಜಾತ ಶತ್ರು.ಇಂತಹ ಅಪರೂಪದ ಸಜ್ಜನನ ಅಗಲುವಿಕೆ ಈ ಜಿಲ್ಲೆಗೊಂದು ತುಂಬಲಾರದ ನಷ್ಟ. ಅವರ ಹೋರಾಟ, ಚಿಂತನೆಗಳನ್ನ‌ ಮುಂದುವರೆಸುವ ಶಕ್ತಿ ಎಲ್ಲರೆದೆಯಲ್ಲಿ ಬಿತ್ತಲಿ.

ಅಗಲಿದ ಹಿರಿಯ ಚೇತನಕ್ಕೆ ನಮನಗಳು

*ಭೀಮಣ್ಣ ಟಿ ನಾಯ್ಕ್,ಶಾಸಕರು,ಶಿರಸಿ ಸಿದ್ದಾಪುರ ಕ್ಷೇತ್ರ*

ಶ್ರದ್ಧಾಂಜಲಿ*

ಉತ್ತರ ಕನ್ನಡ ಜಿಲ್ಲೆಯ ಹಿರಿಯ ಚೇತನ, ಸಜ್ಜನ ರಾಜಕಾರಣಿ ಹಾಗೂ ಜಿಲ್ಲಾ ಪಂಚಾಯತ್‌ನ ಪ್ರಥಮ ಅಧ್ಯಕ್ಷರಾಗಿದ್ದ ರಮಾನಂದ ನಾಯಕ್ ಅವರ ನಿಧನದ ವಾರ್ತೆ ಅತ್ಯಂತ ದುಃಖದಾಯಕವಾಗಿದೆ.

ಜಿಲ್ಲೆಯ ಅಭಿವೃದ್ಧಿ ಮತ್ತು ಜನಪರ ಹೋರಾಟಗಳಲ್ಲಿ ಸದಾ ಮುಂಚೂಣಿಯಲ್ಲಿದ್ದ ಅವರು, ವಿಶೇಷವಾಗಿ ಹುಬ್ಬಳ್ಳಿ-ಅಂಕೋಲಾ ರೈಲ್ವೆ ಮಾರ್ಗದ ನಿರ್ಮಾಣಕ್ಕಾಗಿ ನಡೆಸಿದ ಹೋರಾಟ ಜಿಲ್ಲೆಯ ಇತಿಹಾಸದಲ್ಲಿ ಅವಿಸ್ಮರಣೀಯವಾಗಿದೆ.

​ಕೇವಲ ರಾಜಕೀಯ ಕ್ಷೇತ್ರಕ್ಕೆ ಸೀಮಿತವಾಗದೆ ಸಹಕಾರಿ, ಧಾರ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲೂ ತಮ್ಮದೇ ಆದ ವಿಶೇಷ ಕೊಡುಗೆ ನೀಡಿದ್ದ ಅವರು, ಪಕ್ಷಾತೀತವಾಗಿ ಎಲ್ಲರ ಪ್ರೀತಿ ಮತ್ತು ವಿಶ್ವಾಸಕ್ಕೆ ಪಾತ್ರರಾದ ಜನಾನುರಾಗಿ ನಾಯಕರಾಗಿದ್ದರು. ಅವರ ನಿಧನದಿಂದ ಜಿಲ್ಲೆಯು ಒಬ್ಬ ಮಾರ್ಗದರ್ಶಕ ಹಾಗೂ ಅಭಿವೃದ್ಧಿ ಪರ ಚಿಂತಕನನ್ನು ಕಳೆದುಕೊಂಡಂತಾಗಿದೆ.

ಭಗವಂತನು ಅವರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ ಮತ್ತು ಅವರ ಕುಟುಂಬ ವರ್ಗದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

*ವಿಶ್ವೇಶ್ವರ ಹೆಗಡೆ ಕಾಗೇರಿ,ಸಂಸದರು ಉತ್ತರಕನ್ನಡ*

ಚಿರಶಾಂತಿ ದೊರೆಯಲಿ….

ರಾಷ್ಟ್ರ ನಾಯಕ ರಾಮಕೃಷ್ಣ ಹೆಗಡೆಯವರ ನಿಷ್ಠ ಅನುಯಾಯಿಯಾಗಿ ಮೊಟ್ಟಮೊದಲ ಜಿಲ್ಲಾ ಪರಿಷತ್ ಅಧ್ಯಕ್ಷರಾಗಿ ದಾಖಲಾರ್ಹ ಕೆಲಸ ಮಾಡಿ ಜನಾನುರಾಗಿಯಾಗಿದ್ದ ಮಾನ್ಯ ರಮಾನಂದ ನಾಯಕರ ಅಗಲುವಿಕೆಯಿಂದ ರಾಮಕೃಷ್ಣ ಹೆಗಡೆ ಪ್ರತಿಪಾದಿಸಿದ್ದ ಮೌಲ್ಯಾಧಾರಿತ ರಾಜಕಾರಣದ ಮುಖ್ಯ ಕೊಂಡಿ ಕಳಚಿದಂತಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ಕೋರುವದಲ್ಲದೆ ಅವರ ಕುಟುಂಬಕ್ಕೆ ದುಖ: ಭರಿಸುವ ಶಕ್ತಿಯನ್ನು ಪರಮಾತ್ಮ ನೀಡಲೆಂದು ಪ್ರಾರ್ಥಿಸುತ್ತೇನೆ. 

ನಮ್ಮ ಕುಟುಂಬಕ್ಕೆ ತೀರಾ ಆಪ್ತರಾಗಿದ್ದ ಆತ್ಮೀಯನನ್ನು ಕಳೆದುಕೊಂಡ ನೋವು ನಮ್ಮದಾಗಿದೆ. 

ಶಶಿಭೂಷಣ್ ಹೆಗಡೆ, ದೊಡ್ಮನೆ,

ಅಧ್ಯಕ್ಷ ರು

ರಾಮಕೃಷ್ಣ ಹೆಗಡೆ ಚಿರಂತನ & ಶಿಕ್ಷಣ ಪ್ರಸಾರಕ ಸಮಿತಿ, ಸಿದ್ದಾಪುರ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

Recommended For You

About the Author: Kanneshwar Naik

Leave a Reply

Your email address will not be published. Required fields are marked *