


ಸಿದ್ದಾಪುರ: ಬೆಂಗಳೂರಿನಲ್ಲಿ ನಡೆದ Masters Asian Aquatic Swimming Championship – 2026 ಅಂತಾರಾಷ್ಟ್ರೀಯ ಈಜು ಕ್ರೀಡಾಕೂಟದಲ್ಲಿ ಸಿದ್ದಾಪುರದ ನಿವಾಸಿ ಹಾಗೂ ಸಾಗರ ತಾಲ್ಲೂಕಿನಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಶ್ಯಾಮಸುಂದರ ಜಿ. ಪುರುಷರ 200 ಮೀಟರ್ ರಿಲೇ ಈಜು ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದು ಸಾಧನೆ ಮಾಡಿದ್ದಾರೆ.


ಅಕ್ಟೋಬರ್ 4ರಿಂದ 10ರವರೆಗೆ ಬೆಂಗಳೂರಿನ ದ್ರಾವಿಡ್ ಪಡುಕೋಣೆ ಸೆಂಟರ್ ಫಾರ್ ಸ್ಪೋರ್ಟ್ಸ್ ಎಕ್ಸಲೆನ್ಸ್ನ Dolphin Aquatic Centerನಲ್ಲಿ ಈ ಕ್ರೀಡಾಕೂಟ ನಡೆಯಿತು. ಭಾರತ ಈಜು ಒಕ್ಕೂಟ ಹಾಗೂ ಕರ್ನಾಟಕ ಈಜು ಒಕ್ಕೂಟದ ಸಹಭಾಗಿತ್ವದಲ್ಲಿ ಆಯೋಜಿಸಲಾದ ಈ ಚಾಂಪಿಯನ್ಶಿಪ್ನಲ್ಲಿ ಭಾರತ ಸೇರಿದಂತೆ ಶ್ರೀಲಂಕಾ, ಚೀನಾ, ಥೈಲ್ಯಾಂಡ್, ಮಲೇಷ್ಯಾ, ಇರಾನ್, ಜಪಾನ್, ದಕ್ಷಿಣ ಕೊರಿಯಾ ಸೇರಿದಂತೆ ಹಲವು ದೇಶಗಳ 2,000ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಿದ್ದರು.
ಶ್ಯಾಮಸುಂದರ ಜಿ. ಅವರ ಕ್ರೀಡಾ ಬದುಕಿನಲ್ಲಿ ಇದು ಎರಡನೇ ಅಂತಾರಾಷ್ಟ್ರೀಯ ಮಟ್ಟದ ಪದಕವಾಗಿದೆ. ಅವರು ದೇಶದ ವಿವಿಧ ರಾಜ್ಯಗಳಲ್ಲಿ ನಡೆದ ರಾಜ್ಯ ಹಾಗೂ ರಾಷ್ಟ್ರಮಟ್ಟದ ವಿವಿಧ ಈಜು ಸ್ಪರ್ಧೆಗಳಲ್ಲಿ ಭಾಗವಹಿಸಿ, ALL INDIA LEVELನಲ್ಲಿ 150ಕ್ಕೂ ಹೆಚ್ಚು ಚಿನ್ನದ ಪದಕಗಳನ್ನು ಗಳಿಸಿರುವುದು ವಿಶೇಷ ಸಾಧನೆಯಾಗಿದೆ.


ಶಿಕ್ಷಕ ವೃತ್ತಿಯೊಂದಿಗೆ ಈಜು ಕ್ರೀಡೆಯಲ್ಲಿಯೂ ಗಮನಾರ್ಹ ಸಾಧನೆ ಮಾಡುತ್ತಿರುವ ಶ್ಯಾಮಸುಂದರ ಜಿ. ಅವರ ಈ ಸಾಧನೆಗೆ ಅಭಿಮಾನಿಗಳು, ಕುಟುಂಬಸ್ಥರು, ಸ್ನೇಹಿತರು ಹಾಗೂ ಶಿಕ್ಷಕ ಸಮೂಹ ಅಭಿನಂದನೆ ಸಲ್ಲಿಸಿದ್ದು, ಮುಂದಿನ ಕ್ರೀಡಾ ಪಯಣ ಮತ್ತಷ್ಟು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದ್ದಾರೆ.

_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________




