ಜೆಡಿಎಸ್ ಶಾಸಕ ಎಂ.ಸಿ. ಮನಗೂಳಿ ನಿಧನ: ಯಡಿಯೂರಪ್ಪ, ಕುಮಾರಸ್ವಾಮಿ ಸೇರಿ ಹಲವು ಗಣ್ಯರ ಸಂತಾಪ

ಸಿಂದಗಿ ಕ್ಷೇತ್ರದ ಹಿರಿಯ ಜೆಡಿಎಸ್ ಶಾಸಕ ಎಂ. ಸಿ. ಮನಗೂಳಿ ಬೆಂಗಳೂರಿನಲ್ಲಿ ನಿನ್ನೆ ರಾತ್ರಿ  ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.

Sindagi MLA M.C. Managuli1

ಬೆಂಗಳೂರು: ಸಿಂದಗಿ ಕ್ಷೇತ್ರದ ಹಿರಿಯ ಜೆಡಿಎಸ್ ಶಾಸಕ ಎಂ. ಸಿ. ಮನಗೂಳಿ ಬೆಂಗಳೂರಿನಲ್ಲಿ ನಿನ್ನೆ ರಾತ್ರಿ  ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.

15 ದಿನಗಳಿಂದ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಜನವರಿ 9 ರಂದು ಕಲಬುರಗಿಯಿಂದ ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲಾಗಿತ್ತು.  ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತಿತ್ತು. ಆದರೆ, ಚಿಕಿತ್ಸೆ ಫಲಿಸದೆ ರಾತ್ರಿ ಒಂದು ಗಂಟೆ ಸುಮಾರಿಗೆ ಅವರು  ಕೊನೆಯುಸಿರೆಳೆದಿದ್ದಾರೆ.

ಸಿಂದಗಿ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕರಾಗಿದ್ದ ಅವರು ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ – ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ತೋಟಗಾರಿಕೆ ಸಚಿವರಾಗಿ ಸೇವೆ ಸಲ್ಲಿಸಿದ್ದರು. 1994ರಲ್ಲಿ ಮೊದಲ ಬಾರಿಗೆ ಸಿಂದಗಿ ಕ್ಷೇತ್ರದಿಂದ ಜನತಾದಳದ ಶಾಸಕರಾಗಿದ್ದ ಅವರು, ಗ್ರಾಮೀಣಾಭಿವೃದ್ಧಿ ಸಚಿವರೂ ಆಗಿದ್ದರು.

1994ರ ವಿಧಾನಸಭೆ ಚುನಾವಣೆ ಸೇರಿದಂತೆ 6 ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ, 1994 ಮತ್ತು 2018ರಲ್ಲಿ ಎರಡು ಬಾರಿ ವಿಜಯ ಸಾಧಿಸಿ, ಎರಡು ಬಾರಿ ಮಂತ್ರಿ ಆಗಿದ್ದರು. 4 ಬಾರಿ ಪರಾಭವಗೊಂಡಿದ್ದರು.  ಪತ್ನಿ, ಓರ್ವ ಪುತ್ರಿ, ನಾಲ್ವರು ಪುತ್ರರು ಸೇರಿದಂತೆ ಅಪಾರ ಬಂಧು- ಬಳಗ ಅಭಿಮಾನಿಗಳನ್ನು ಅಗಲಿದ್ದಾರೆ.

ಎಂ. ಸಿ. ಮನಗೂಳಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಜೆಡಿಎಸ್ ವರಿಷ್ಠ ಹೆಚ್ . ಡಿ. ದೇವೇಗೌಡ ಮತ್ತಿತರ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

Recommended For You

About the Author: Kanneshwar Naik

Leave a Reply

Your email address will not be published. Required fields are marked *