ಹಕ್ಕುಚ್ಯುತಿ ಕುರಿತು ಚರ್ಚೆಗೆ ಅವಕಾಶ ನೀಡದ ಸ್ಪೀಕರ್‌ ವಿರುದ್ಧ ಕಾಂಗ್ರೆಸ್‌ ಸದಸ್ಯರ ಧರಣಿ

ಹಕ್ಕುಚ್ಯುತಿ ಬಗ್ಗೆ ಪ್ರಸ್ತಾಪಿಸಲು ಪಕ್ಷೇತರ ಶಾಸಕ ಶರತ್‌ ಬಚ್ಚೇಗೌಡ ಅವರಿಗೆ ಅವಕಾಶ ನೀಡದ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ನಡೆ ವಿರೋಧಿಸಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಸದಸ್ಯರು ವಿಧಾನಸಭೆಯಲ್ಲಿ ಸೋಮವಾರ ಧರಣಿ ನಡೆಸಿದರು.

Assembly session

ಬೆಂಗಳೂರು: ಹಕ್ಕುಚ್ಯುತಿ ಬಗ್ಗೆ ಪ್ರಸ್ತಾಪಿಸಲು ಪಕ್ಷೇತರ ಶಾಸಕ ಶರತ್‌ ಬಚ್ಚೇಗೌಡ ಅವರಿಗೆ ಅವಕಾಶ ನೀಡದ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ನಡೆ ವಿರೋಧಿಸಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಸದಸ್ಯರು ವಿಧಾನಸಭೆಯಲ್ಲಿ ಸೋಮವಾರ ಧರಣಿ ನಡೆಸಿದರು.

ಪ್ರಶ್ನೋತ್ತರ ಅವಧಿ ಮುಗಿಯುತ್ತಿದ್ದಂತೆ ಹಕ್ಕುಚ್ಯುತಿ ಮಂಡಿಸಲು ಅವಕಾಶ ನೀಡಬೇಕು ಎಂದು ಶರತ್‌ ಬಚ್ಚೇಗೌಡ ಮನವಿ ಮಾಡಿದರು. ಆಗ ಕಾಗೇರಿ, ಕಲಾಪ ಸಲಹಾ ಸಮಿತಿ ನಡೆಯುತ್ತಿದ್ದ ವೇಳೆಯಲ್ಲಿ ಶರತ್‌ ಅವರು ಹಕ್ಕು ಚ್ಯುತಿ ಕುರಿತು ಪತ್ರವೊಂದನ್ನು ನೀಡಿದ್ದಾರೆ. ಅದನ್ನು ನಾನು ಪರಿಶೀಲಿಸಿಲ್ಲ. ಪೂರಕ ಮಾಹಿತಿ ಪಡೆದ ನಂತರ ಅಗತ್ಯ ಕ್ರಮ ಕೈಗೊಳ್ಳುತ್ತೇನೆ ಎಂದರು. 

ಆದರೆ, ಇದಕ್ಕೊಪ್ಪದ ಶರತ್‌, ನನ್ನ ಹಕ್ಕುಚ್ಯುತಿಯಾಗಿದ್ದು, ವಿಷಯ ಪ್ರಸ್ತಾವಕ್ಕೆ ಅವಕಾಶ ನೀಡಬೇಕು ಎಂದು ಪಟ್ಟು ಹಿಡಿದರು. ಇದಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಧ್ವನಿಗೂಡಿಸಿದರು. ಚರ್ಚೆ ನಂತರ ನಡೆಸಬಹುದು, ಆದರೆ, ಪ್ರಸ್ತಾಪಿಸಲು ಅವಕಾಶ ಕೊಡಿ ಎಂದು ಮನವಿ ಮಾಡಿದರು.

ಕಾಂಗ್ರೆಸ್‌ನ ಕೃಷ್ಣ ಬೈರೇಗೌಡ, ಹಕ್ಕುಚ್ಯುತಿಯಾಗಿದೆ ಎಂದು ಸದಸ್ಯರು ನೋಟಿಸ್‌ ನೀಡಿದ ಬಳಿಕ ವಿಷಯ ಪ್ರಸ್ತಾಪಿಸಲು ಅವಕಾಶ ನೀಡಬೇಕು ಎಂಬುದು ಕಲಾಪದ ನಿಯಮ ಎಂದರು. 

ಇದಕ್ಕೆ ಉತ್ತರಿಸಿದ ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ, ಯಾವಾಗ ಚರ್ಚೆಗೆ ಅವಕಾಶ ನೀಡಬೇಕು ಎಂಬುದನ್ನು ಸಭಾಧ್ಯಕ್ಷರು ನಿರ್ಣಯಿಸುತ್ತಾರೆ ಎಂದರು. 

ಆದರೆ, ಕಾಗೇರಿ ಮಾತ್ರ ಪತ್ರ ನೋಡಿದ ಬಳಿಕ ಅವಕಾಶ ನೀಡುವುದಾಗಿ ಪುನರುಚ್ಚರಿಸಿದರು. ಅದಕ್ಕೆ ಕಾಂಗ್ರೆಸ್‌ ಸದಸ್ಯರು ಒಪ್ಪಲಿಲ್ಲ. ಶರತ್‌ ಬಚ್ಚೇಗೌಡ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಸದಸ್ಯರು ಧರಣಿ ನಡೆಸಿದರು. ಈ ಧರಣಿ, ಗದ್ದಲದ ನಡುವೆಯೂ ಸಭಾಧ್ಯಕ್ಷರು ಮೂರು ವಿಧೇಯಕಗಳನ್ನು ಮಂಡನೆಯನ್ನು ಅನುಮೋದಿಸಿದರು. 

ನಂತರ, ಧರಣಿ ನಿರತರನ್ನು ಉದ್ದೇಶಿಸಿ, ನೀವೆಲ್ಲ ಈ ರೀತಿಯಾಗಿ ಒತ್ತಡ ಹೇರುವುದು ಸರಿಯಲ್ಲ’ ಎಂದು ಸಭಾಧ್ಯಕ್ಷರು ಅಸಮಾಧಾನ ವ್ಯಕ್ತಪಡಿಸಿದರು. ಪತ್ರ ನೋಡಿ ಇವತ್ತೇ ಚರ್ಚೆಗೆ ಅವಕಾಶ ನೀಡುವುದಾಗಿ ಭರವಸೆ ನೀಡಿದರು. 
ಆಗ ಸಿದ್ದರಾಮಯ್ಯ, ಧರಣಿ ಕೈಬಿಡಲು ಸದಸ್ಯರಿಗೆ ಸೂಚಿಸಿದರು. 

ನಂತರ ಸ್ಪೀಕರ್‌, ಡಿ.ಕೆ.ಶಿವಕುಮಾರ್ ಅವರೇ, ಯಾವ ಸಂದೇಶ ನೀಡಬೇಕು ಎಂದು ಭಾವಿಸಿದ್ದೀರೋ ಅದನ್ನು ತಲುಪಿಸಿದ್ದೀರಿ ಎಂದರು. ಅದಕ್ಕೆ ಕಾಂಗ್ರೆಸ್‌ ಸದಸ್ಯರು ನಗೆಚಟಾಕಿ ಹಾರಿಸಿದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *