ಕೆಂಪು ಕೋಟೆ ಹಿಂಸಾಚಾರ ಬಿಜೆಪಿಯ ಯೋಜಿತ ಪಿತೂರಿ, ಕೃಷಿ ಕಾಯ್ದೆ ರೈತರಿಗೆ ಡೆತ್ ವಾರಂಟ್: ಅರವಿಂದ್ ಕೇಜ್ರಿವಾಲ್

ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳು ರೈತರಿಗೆ ಡೆತ್ ವಾರಂಟ್.ಸರ್ಕಾರ ಅವರ ಭೂಮಿಯನ್ನು ವಶಪಡಿಸಿಕೊಂಡು ಮೂರ್ನಾಲ್ಕು ಬಂಡವಾಳಶಾಹಿಗಳಿಗೆ ನೀಡಲು ಮುಂದಾಗಿದೆ. ಈ ಕೃಷಿ ಕಾಯ್ದೆಗಳು ಜಾರಿಗೆ ಬಂದರೆ ರೈತರು ತಮ್ಮ ಜಮೀನಿನಲ್ಲಿಯೇ ಕಾರ್ಮಿಕರಾಗುತ್ತಾರೆ. ಹೀಗಾಗಿ ಇದು ರೈತರಿಗೆ ಮಾಡು ಇಲ್ಲವೆ ಮಡಿಯ ಪರಿಸ್ಥಿತಿಯಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ 

Aravind Kejriwal

ನವದೆಹಲಿ: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳು ರೈತರಿಗೆ ಡೆತ್ ವಾರಂಟ್.ಸರ್ಕಾರ ಅವರ ಭೂಮಿಯನ್ನು ವಶಪಡಿಸಿಕೊಂಡು ಮೂರ್ನಾಲ್ಕು ಬಂಡವಾಳಶಾಹಿಗಳಿಗೆ ನೀಡಲು ಮುಂದಾಗಿದೆ. ಈ ಕೃಷಿ ಕಾಯ್ದೆಗಳು ಜಾರಿಗೆ ಬಂದರೆ ರೈತರು ತಮ್ಮ ಜಮೀನಿನಲ್ಲಿಯೇ ಕಾರ್ಮಿಕರಾಗುತ್ತಾರೆ. ಹೀಗಾಗಿ ಇದು ರೈತರಿಗೆ ಮಾಡು ಇಲ್ಲವೆ ಮಡಿಯ ಪರಿಸ್ಥಿತಿಯಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆರೋಪಿಸಿದ್ದಾರೆ. 

ಮೀರತ್ ನಲ್ಲಿ ಇಂದು ಮಾತನಾಡಿದ ಅವರು, ಬ್ರಿಟಿಷರು ಕೂಡ ತಮ್ಮ ಆಳ್ವಿಕೆ ಸಮಯದಲ್ಲಿ ರೈತರನ್ನು ಇಷ್ಟೊಂದು ತುಳಿದಿರಲಿಲ್ಲ, ರೈತರ ಭೂಮಿಯ ವಿಚಾರದಲ್ಲಿ ತಗಾದೆಯೆತ್ತಿರಲಿಲ್ಲ. ಆದರೆ ಇಂದಿನ ಎನ್ ಡಿಎ ಸರ್ಕಾರ ಮಾತ್ರ ಬ್ರಿಟಿಷರಿಗಿಂತ ಕಡೆ ಎಂದು ಆಕ್ರೋಶದಿಂದ ಹೇಳಿದರು.

ಕೆಂಪು ಕೋಟೆ ದುರ್ಘಟನೆ ಬಿಜೆಪಿಯ ಪಿತೂರಿ: ಜನವರಿ 26ರಂದು ದೆಹಲಿಯ ಕೆಂಪು ಕೋಟೆಯಲ್ಲಿ ನಡೆದ ಹಿಂಸಾಚಾರ ದುರ್ಘಟನೆ ಪೂರ್ವ ನಿಯೋಜಿತ ಕೃತ್ಯ. ಪ್ರತಿಭಟನಾ ನಿರತ ರೈತರಿಗೆ ದೆಹಲಿಯ ಮಾರ್ಗಗಳು ಗೊತ್ತಿಲ್ಲದಿರುವಾಗ ಬಿಜೆಪಿ ಕಡೆಯವರೇ ಅವರಿಗೆ ತಪ್ಪು ದಾರಿ ತೋರಿಸಿದರು ಎಂದು ಹಲವರು ನನಗೆ ಹೇಳಿದ್ದಾರೆ. ಕೆಂಪು ಕೋಟೆಯಲ್ಲಿ ಧ್ವಜ ಹಾರಿಸಿದವರು ಕೂಡ ಬಿಜೆಪಿ ಕಾರ್ಯಕರ್ತರೇ. ನಮ್ಮ ರೈತರು ಎಂದಿಗೂ ದೇಶ ವಿರೋಧಿ ಕೃತ್ಯ ನಡೆಸಲು ಸಾಧ್ಯವಿಲ್ಲ ಎಂದರು.

ದೇಶ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂದು ಆರೋಪಿಸಿ ಕೇಂದ್ರ ಸರ್ಕಾರ ರೈತರ ವಿರುದ್ಧ ಕೇಸು ಹಾಕಿದೆ. ಬ್ರಿಟಿಷರಿಗೂ ಇಷ್ಟೊಂದು ಧೈರ್ಯವಿರಲಿಲ್ಲ. ನಮ್ಮ ರೈತರನ್ನು ಭಯೋತ್ಪಾದಕರು ಎಂದು ಕರೆಯುತ್ತಾರೆ ಎಂದು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.  (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ತ್ಯಾರಸಿ ಯುವತಿಗೆ ಬಂಗಾರದ ಪದಕ

ಸಿದ್ದಾಪುರ: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಾರ್ಷಿಕ ಘಟಿಕೋತ್ಸವದಲ್ಲಿ ಸಿದ್ದಾಪುರ ತಾಲೂಕಿನ ತ್ಯಾರ್ಸಿಯ ರಚನಾ ಪ್ರಕಾಶ ಗೌಡರ್ ರಾಜ್ಯದ ರಾಜ್ಯಪಾಲರಿಂದ ಬಂಗಾರದ( ಗೋಲ್ಡ್ ಮೆಡಲ್...

ಸಹಕಾರಿ ಸೇರಿದಂತೆ…. ನಾನಾ ಕ್ಷೇತ್ರಗಳ ಕೀಲಿಕೈ ಕಳ್ಳನ ಕೈ ಸೇರಿದರೆ ಅಪಾಯ!!!

ಕನ್ನ ಹಾಕಿದವರಿಗಿಂತ ಕಾವಲು ನಿಂತು ಕಣ್ಣುಮುಚ್ಚಿದವನೇ ಪ್ರಧಾನ ಆರೋಪಿ!?(ಸಹಕಾರಿ ರಂಗದ ರಕ್ಷಾ ಕವಚವಾದ ಸನ್ನದು ಲೆಕ್ಕಪರಿಶೋಧಕರ ನೈತಿಕ ಅಧಃಪತನದ ಕರಾಳ ದರ್ಶನ) “ಭಾರತೀಯ ಸಂಸ್ಕೃತಿಯಲ್ಲಿ...

namdhari-issue- part-01 – ಚರಿತ್ರೆಯಿಂದ ಪಾಠ ಕಲಿಯಿರಿ… ವಿವೇಕದಿಂದ ಮುಂದುವರಿಯಿರಿ….

ಸಿದ್ಧಾಪುರ ನಾಮಧಾರಿ ಅಭಿವೃದ್ಧಿ ಸಂಘ ಯಾನೆ ದೀವರ ಸಂಘದ ವಿಚಾರ ಈಗ ಚರ್ಚೆಯ ವಿಷಯವಾಗಿ ಮಾರ್ಪಟ್ಟಿದೆ. ಇದು ಒಂದು ಸಮೂದಾಯದ ಅದರಲ್ಲೂ ಹಿಂದುಳಿದ ವರ್ಗದ...

ಭಿತ್ತಿಯ ಚಿತ್ರ ಬಿ. ಡಿ. ಹಿರೇಮಠ

ಬಿ. ಡಿ. ಹಿರೇಮಠ… ಯಾರಿಗೆ ಗೊತ್ತಿಲ್ಲ ಹೇಳಿ….೨೦ ವರ್ಷಗಳ ಹಿಂದೆ ಹೈ ಕೋರ್ಟ್ ಧಾರವಾಡ ವಿಭಾಗೀಯ ಪೀಠಕ್ಕಾಗಿ ಹೋರಾಡಿ ಮನೆ ಮಾತಾಗಿದ್ದ ಬಿಡಿ ಹಿರೇಮಠ...

ಶಾಲೆಗೆ ಹೋಗದ ರಾಜ!

ಅಕ್ಷರ ಕಲಿಯದೇ ಆಕಾಶದೆತ್ತರಕ್ಕೆ ಬೆಳೆದ ಅಪರೂಪದ ನಟ ಅನರ್ಘ್ಯ ರತ್ನ. ಮತ್ತೇ ಶಾಲೆಗೆ ಮುಖ ತೋರಿಸಲೇ ಇಲ್ಲ.

Latest Posts

ತ್ಯಾರಸಿ ಯುವತಿಗೆ ಬಂಗಾರದ ಪದಕ

ಸಿದ್ದಾಪುರ: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಾರ್ಷಿಕ ಘಟಿಕೋತ್ಸವದಲ್ಲಿ ಸಿದ್ದಾಪುರ ತಾಲೂಕಿನ ತ್ಯಾರ್ಸಿಯ ರಚನಾ ಪ್ರಕಾಶ ಗೌಡರ್ ರಾಜ್ಯದ ರಾಜ್ಯಪಾಲರಿಂದ ಬಂಗಾರದ( ಗೋಲ್ಡ್ ಮೆಡಲ್ ) ಪಡೆದುಕೊಂಡಿದ್ದಾರೆ.ದಾವಣಗೆರೆಯ ಬಿಡಿಟಿ ಇಂಜನೀಯರಿಂಗ್ ಕಾಲೇಜಿನಲ್ಲಿ ಇಂಡಸ್ಟ್ರಿಯಲ್ & ಪ್ರೊಡಕ್ಷನ್ ವಿಭಾಗದಲ್ಲಿ ಪ್ರಥಮ ರ್ಯಾಂಕ್ ಪಡೆದ ರಚನಾಳಿಗೆ ರಾಜ್ಯದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಾರ್ಷಿಕ ಘಟಿಕೋತ್ಸವದಲ್ಲಿ ಕರ್ನಾಟಕದ ರಾಜ್ಯಪಾಲ...

Recommended For You

About the Author: Kanneshwar Naik

Leave a Reply

Your email address will not be published. Required fields are marked *