

ರಾಜ್ಯದ 100 ವಿಧಾನಸಭಾ ಕ್ಷೇತ್ರಗಳಲ್ಲಿ ಜನಧ್ವನಿ ಜಾಥಾಕ್ಕೆ ಕಾಂಗ್ರೆಸ್ ಬುಧವಾರ ಚಾಲನೆ ನೀಡಿದೆ.


ಬೆಂಗಳೂರು: ರಾಜ್ಯದ 100 ವಿಧಾನಸಭಾ ಕ್ಷೇತ್ರಗಳಲ್ಲಿ ಜನಧ್ವನಿ ಜಾಥಾಕ್ಕೆ ಕಾಂಗ್ರೆಸ್ ಬುಧವಾರ ಚಾಲನೆ ನೀಡಿದೆ.
100 ವಿಧಾನಸಭಾ ಕ್ಷೇತ್ರಗಳಲ್ಲಿ ಜನರ ಸಮಸ್ಯೆಗಳು ಮತ್ತು ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರದ ವೈಫಲ್ಯವನ್ನು ಖಂಡಿಸಿ ಪಾದಯಾತ್ರೆ ಹಮ್ಮಿಕೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ. ಚಾಲನೆ ನೀಡಿದ ಸಂದರ್ಭದಲ್ಲಿ ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಿರಿಯ ನಾಯಕರು, ವಿಧಾನಸಭೆ, ವಿಧಾನ ಪರಿಷತ್ ನಾಯಕರು ಉಪಸ್ಥಿತರಿದ್ದರು.


ಅಡುಗೆ ಅನಿಲದ ಬೆಲೆ ದಿನದಿನಕ್ಕೂ ಹೆಚ್ಚಿಸಿ ಜನಸಾಮಾನ್ಯರು ಅಡುಗೆ ಮಾಡಿ ತಿನ್ನಲಾಗದಂತ ಪರಿಸ್ಥಿತಿ ನಿರ್ಮಾಣವಾಗಿದೆ. ನಾ ಖಾವೂಂಗಾ, ನಾ ಖಾನೆದೂಂಗ ಎನ್ನುವ ತಮ್ಮ ಮಾತಿಗೆ ಪ್ರಧಾನಿ ಮೋದಿ ಅರ್ಥ ಕೊಟ್ಟಿದ್ದಾರೆ. ಲಾಕ್ಡೌನ್‌ನಿಂದ ತತ್ತರಿಸಿದ್ದ ಜನತೆಗೆ ಬೆಲೆ ಏರಿಕೆಯ ಬರೆ ಹಾಕಿದ್ದಾರೆ. ಬಿಜೆಪಿಯ ಇಂತಹ ಜನವಿರೋಧಿ ನೀತಿಗಳ ವಿರುದ್ಧ ಜನಧ್ವನಿ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ ಎಂದು ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ. (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






