ರಾಜ್ಯದಲ್ಲಿ ಯಾವುದೇ ರೀತಿಯ ಲಾಕ್ ಡೌನ್ ಇಲ್ಲ, ಆದರೆ 15 ದಿನ ಜಾತ್ರೆ, ಪ್ರತಿಭಟನೆಗೆ ಬ್ರೇಕ್: ಸಿಎಂ ಯಡಿಯೂರಪ್ಪ

ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದರೂ ರಾಜ್ಯದಲ್ಲಿ ಯಾವುದೇ ರೀತಿಯ ಲಾಕ್ ಡೌನ್ ಇಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸೋಮವಾರ ಸ್ಪಷ್ಟಪಡಿಸಿದ್ದಾರೆ.

yediyurappa

ಬೆಂಗಳೂರು: ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದರೂ ರಾಜ್ಯದಲ್ಲಿ ಯಾವುದೇ ರೀತಿಯ ಲಾಕ್ ಡೌನ್ ಇಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸೋಮವಾರ ಸ್ಪಷ್ಟಪಡಿಸಿದ್ದಾರೆ.

ಕೊರೋನಾ ರೂಪಾಂತರಿ ಹೆಚ್ಚಳ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ಅವರು ಇಂದು ಸಂಜೆ ಗೃಹ ಕಚೇರಿ ಕೃಷ್ಣಾದಲ್ಲಿ ಗೃಹ, ಆರೋಗ್ಯ, ಶಿಕ್ಷಣ ಸಚಿವರು ಹಾಗೂ ಇಲಾಖಾಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದರು.

ಸಭೆಯ ನಂತರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಎಂ, ರಾಜ್ಯದಲ್ಲಿ ಯಾವುದೇ ಲಾಕ್ ಡೌನ್ ಇಲ್ಲ. ನೈಟ್ ಕರ್ಫ್ಯೂ ಸಹ ಜಾರಿಗೊಳಿಸುವುದಿಲ್ಲ. ಆದರೆ ನಾಳೆಯಿಂದ 15 ದಿನ ಧಾರ್ಮಿಕ ಕಾರ್ಯಕ್ರಮ, ಜಾತ್ರೆ, ಪ್ರತಿಭಟನೆ, ಸತ್ಯಾಗ್ರಹಗಳಿಗೆ ಅವಕಾಶ ಇಲ್ಲ ಎಂದರು.

ಲಾಕ್ ಡೌನ್ ಬದಲಿಗೆ ರಾಜ್ಯದಲ್ಲಿ ಕೋವಿಡ್ ನಿರ್ಬಂಧಿಸಲು ಒಂದಷ್ಟು ಕಠಿಣ ನಿಯಮಗಳು ಜಾರಿಗೆ ತರಲಾಗುತ್ತಿದೆ. ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮಾಸ್ಕ್ ಧರಿಸದಿದ್ದರೆ ದಂಡ ವಿಧಿಸಲಾಗುವುದು. ಅಪಾರ್ಟ್ ಮೆಂಟ್ ಗಳಲ್ಲಿ ಪಾರ್ಟಿ, ಜಿಮ್ ಮತ್ತು ಈಜುಕೋಳಗಳನ್ನು ನಿಷೇಧಿಲಾಗಿದೆ ಎಂದು ಸಿಎಂ ಹೇಳಿದರು.

ಮದುವೆ ಹಾಗೂ ಇತರೆ ಸಮಾರಂಭಗಳಲ್ಲಿ ಹೆಚ್ಚು ಜನ ಸೇರುವಂತಿಲ್ಲ. ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸುವುದು ಕಡ್ಡಾಯ ಎಂದಿದ್ದಾರೆ.

ಇನ್ನು ಪತ್ರಿಕಾಗೋಷ್ಠಿಯಲ್ಲಿ ಸಿದ್ದರಾಮಯ್ಯ ಅವರು ರಾಜ್ಯದ ಜನರ ಹಿತದೃಷ್ಟಿಯಿಂದ ಬರೆದಿದ್ದ ಪತ್ರವನ್ನು ಓದಿದ ಸಿಎಂ ಯಡಿಯೂರಪ್ಪ, ಜನರನ್ನು ಭಯ ಪಡಿಸದೇ ಕೆಲ ನಿರ್ಣಯಗಳನ್ನು ತೆಗೆದುಕೊಳ್ಳುವಂತೆ ಸಲಹೆ ನೀಡಿದ್ದಾರೆ. ಮಾಸ್ಕ್, ಸಾನಿಟೈಸರ್ ಮತ್ತು ಲಸಿಕೆ ಹೆಚ್ಚಳ ಮಾಡುವ ಬಗ್ಗೆ ಸಲಹೆ ನೀಡಿದ್ದು, ಅದನ್ನು ಸಹ ನಿಮ್ಮ ಗಮನಕ್ಕೆ ತಂದಿದ್ದೇನೆ ಎಂದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *