Workshop for childrens -ಸೊರಬಾದಲ್ಲಿ ಮಕ್ಕಳಿಗಾಗಿ ಸೃಜನಶೀಲ ಬರವಣಿಗೆ ಕಾರ್ಯಗಾರ

ಮಕ್ಕಳಲ್ಲಿಯೂ ತಮ್ಮದೇ ಆದ ಕಲ್ಪನೆ, ಪರಿಕಲ್ಪನೆಗಳು, ಕೌಶಲಗಳು ಇರುತ್ತವೆ.ಅವುಗಳನ್ನು ಬರಹರೂಪಕ್ಕೆ ಇಳಿಸಲು ಅವರಿಗೆ ಅಭ್ಯಾಸ ಬೇಕಾಗುತ್ತದೆ. ಅಂತಹ ಅಭ್ಯಾಸದ ಅವಕಾಶ , ಮಾರ್ಗದರ್ಶನ ಸಿಕ್ಕಾಗ ಅವರಲ್ಲಿಯೂ ಸೃಜನಶೀಲ ಬರವಣಿಗೆ ಸಾಧ್ಯವಾಗುತ್ತದೆ.
ಅದಕ್ಕಾಗಿ ಮಕ್ಕಳ ಸಾಹಿತ್ಯ ಪರಿಷತ್ತು ಶಿವಮೊಗ್ಗ, ಮಕ್ಕಳ ಮಂದಾರ ಪತ್ರಿಕಾ ಬಳಗ ವತಿಯಿಂದ ಜಿಲ್ಲೆಯಾದ್ಯಂತ ಸೃಜನಶೀಲ ಬರವಣಿಗೆಯ ಕಾರ್ಯಗಾರ ಏರ್ಪಡಿಸಲಾಗುತ್ತಿದೆ ಎಂದು ಸೊರಬದ ಮೆಟ್ರಿಕ್ ಪೂರ್ವ ಎಸ್ ಸಿ ಎಸ್ಟಿ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಹಮ್ಮಿಕೊಂಡಿದ್ದ ತರಬೇತಿಯಲ್ಲಿ ಮಕ್ಕಳ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷರಾದ ರವಿರಾಜ್ ಮಂಡಗಳಲೆ ಅವರು ಹೇಳಿದರು.

ಮಕ್ಕಳಲ್ಲಿ ಸೃಜನಶೀಲ ಬರವಣಿಗೆ ಸಾಮರ್ಥ್ಯ ಹೆಚ್ಚಿಸಲು ಮಕ್ಕಳ ಸಾಹಿತಿಗಳೂ ಆದ ರವಿರಾಜ್ ಅವರು ರೂಪಿಸಿರುವ ಸಾಹಿತ್ಯ ಅಧ್ಯಯನ ಸಾಮಗ್ರಿಗಳನ್ನು ಮಕ್ಕಳಿಗೆ ನೀಡಿ ಸುಮಾರು 40 ಸಾಹಿತ್ಯ ಆಸಕ್ತ ಪ್ರತಿಭಾವಂತ ಮಕ್ಕಳಿಗೆ ತರಬೇತಿ ನೀಡಿದರು.ಮಕ್ಕಳು ಕ್ರಿಯಾಶೀಲವಾಗಿ ಆರು ತಂಡಗಳಾಗಿ ತೊಡಗಿಕೊಂಡು ಸ್ಥಳದಲ್ಲಿಯೇ ಕಥೆ,ಕವನ,ಕಿರುನಾಟಕ ಸಹ ರಚಿಸಿದರು. ಸಂಜೆ ವೇಳೆಗೆ ಸ್ಥಳದಲ್ಲಿಯೇ ಮಕ್ಕಳ ಮಂದಾರ ಕೈಬರಹ ಪತ್ರಿಕೆ ಸಿದ್ದಪಡಿಸಿ ಗಮನ ಸೆಳೆದರು.
ಉಚಿತವಾಗಿ ಜಿಲ್ಲೆಯಾದ್ಯಂತ ಕಾರ್ಯಾಗಾರ ಏರ್ಪಡಿಸಲು ಸಹಯೋಗಕ್ಕಾಗಿ 9980952630 ಗೆ ಕರೆ ಮಾಡಲು ಕೋರಿದರು.

ತಾಲ್ಲೂಕು ಘಟಕದ ಅಧ್ಯಕ್ಷ ಡಾ.ಉಮೇಶ್ ಭದ್ರಾಪುರ ಅವರು ಉಪನ್ಯಾಸ ನೀಡಿದರು. ನಿಲಯ ಪಾಲಕರಾದ ಉಮೇಶ್ ಮಂಡಗಳಲೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪರಿಷತ್ತಿನ ಖಜಾಂಚಿ ರವೀಂದ್ರ ಕಾರ್ಯಕ್ರಮ ನಿರ್ವಹಿಸಿದರು.ನಿಲಯದ ಸಿಬ್ಬಂದಿ ಸಹ ತರಬೇತಿಯಲ್ಲಿ ಪಾಲ್ಗೊಂಡಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *