
ಶಿವಮೊಗ್ಗ ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥಗೌಡ ತಮ್ಮ ಬೆಂಬಲಿಗರೊಂದಿಗೆ ಇಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ.

ಬೆಳಗಾವಿ/ಬೀದರ್: ಶಿವಮೊಗ್ಗ ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥಗೌಡ ತಮ್ಮ ಬೆಂಬಲಿಗರೊಂದಿಗೆ ಇಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಬಾವುಟ ಹಿಡಿದು ಕೈ ಪಕ್ಷಕ್ಕೆ ಸೇರಿದ್ದಾರೆ.
ಮಧು ಬಂಗಾರಪ್ಪ ಕಾಂಗ್ರೆಸ್ ಸೇರುತ್ತಿರುವ ಹಿನ್ನೆಲೆ ಅವರನ್ನು ಬೆಂಬಲಿಸಿ ಜೆಡಿಸ್ ನಾಯಕರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಸೇರುತ್ತಿದ್ದಾರೆಂದು ಹಿಂದೊಮ್ಮೆ ಮಂಜುನಾಥಗೌಡ ಹೇಳಿದ್ದರು.
ಮಾಜಿ ಶಾಸಕ ಮಾರುತಿರಾವ್ ಮುಳೆ ಬಿಜೆಪಿಗೆ
ಮಾಜಿ ಶಾಸಕ, ಎನ್.ಸಿ.ಪಿ. ಮುಖಂಡ ಮಾರುತಿರಾವ್ ಮುಳೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಬೀದರ್ ನ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವ ಬಸವರಾಜ ಬೊಮ್ಮಾಯಿ, ವಿ. ಸೋಮಣ್ಣ ಹಾಗೂ ಸಂಸದರಾದ ಭಗವಂತ ಹೂಬಾ ಸಮ್ಮುಖ ಅವರು ಬಿಜೆಪಿಗೆ ಸೇರಿದ್ದಾರೆ. (kpc)
