

ಕನ್ನಡ ಚಿತ್ರರಂಗದ ಮೇರುನಟ, ಅನಭಿಷಿಕ್ತ ನಟಸಾರ್ವಭೌಮ ಡಾ ರಾಜ್ ಕುಮಾರ್ ಅಗಲಿ ಇಂದಿಗೆ 15 ವರ್ಷ. ಭಾರತೀಯ ಚಿತ್ರರಂಗದಲ್ಲಿ ತಮ್ಮ ಛಾಪು ಮೂಡಿಸಿರುವ ಡಾ ರಾಜ್ ಕುಮಾರ್ 5 ದಶಕಗಳ ಕಾಲ ಕನ್ನಡ ಚಿತ್ರರಂಗದಲ್ಲಿ ಮೆರೆದವರು.


ಬೆಂಗಳೂರು: ಕನ್ನಡ ಚಿತ್ರರಂಗದ ಮೇರುನಟ, ಅನಭಿಷಿಕ್ತ ನಟಸಾರ್ವಭೌಮ ಡಾ ರಾಜ್ ಕುಮಾರ್ ಅಗಲಿ ಇಂದಿಗೆ 15 ವರ್ಷ. ಭಾರತೀಯ ಚಿತ್ರರಂಗದಲ್ಲಿ ತಮ್ಮ ಛಾಪು ಮೂಡಿಸಿರುವ ಡಾ ರಾಜ್ ಕುಮಾರ್ 5 ದಶಕಗಳ ಕಾಲ ಕನ್ನಡ ಚಿತ್ರರಂಗದಲ್ಲಿ ಮೆರೆದವರು.
ಇಂದಿಗೂ ಅವರನ್ನು ನೆನೆಸಿಕೊಳ್ಳದವರು ಬಹುಶಃ ಕರ್ನಾಟಕದಲ್ಲಿ ಯಾರೂ ಇರಲಿಕ್ಕಿಲ್ಲ. ಅಭಿಮಾನಿಗಳ ಹೃದಯದಲ್ಲಿ ಅವರು ಅಜರಾಮರಾಗಿದ್ದಾರೆ. ಅವರ ಅಚ್ಚಳಿಯದ ಚಿತ್ರಗಳು, ನಟನೆ, ಅದ್ಬುತ ಕಂಠಕ್ಕೆ ಮನಸೋಲದವರಿಲ್ಲ. 2006ರ ಏಪ್ರಿಲ್ 12ರಂದು ಡಾ ರಾಜ್ ಕುಮಾರ್ ಭೌತಿಕವಾಗಿ ಅಗಲಿಹೋದರು. ಆಗ ಅವರಿಗೆ 76 ವರ್ಷವಾಗಿತ್ತು.
ಅವರ ನಿಧನ ನಂತರವೂ ಅವರ ಹೆಸರಿನಲ್ಲಿ ಜನ್ಮದಿನ ಮತ್ತು ಪುಣ್ಯದಿನದಂದು ಅಭಿಮಾನಿಗಳ ಸಂಘ, ಕುಟುಂಬ ವರ್ಗದವರು ಹತ್ತಾರು ಕಾರ್ಯಕ್ರಮಗಳು, ನೇತ್ರದಾನ, ರಕ್ತದಾನ, ಅನ್ನದಾನ , ಆರೋಗ್ಯ ತಪಾಸಣೆ ಇತ್ಯಾದಿಗಳನ್ನು ಹಮ್ಮಿಕೊಂಡು ಬಂದಿದ್ದಾರೆ.
ಇಂದು 15ನೇ ವರ್ಷದ ಪುಣ್ಯತಿಥಿ ಸಂದರ್ಭದಲ್ಲಿ ಅವರ ಮಕ್ಕಳು, ಕುಟುಂಬ ವರ್ಗ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ರಾಜಕೀಯ ನಾಯಕರು, ಸ್ಯಾಂಡಲ್ ವುಡ್ ಕಲಾವಿದರು, ಅಭಿಮಾನಿಗಳು ನೆನಪು ಮಾಡಿಕೊಂಡಿದ್ದಾರೆ. (kpc)

_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
