ವಾರದ ಸಂತೆ ಬಂದ್; ಬೆಳಿಗ್ಗೆ 6ರಿಂದ 12ರವರೆಗೆ ದಿನಸಿ ಅಂಗಡಿ, ಎಪಿಎಂಸಿ ಮಾರುಕಟ್ಟೆ ತೆರೆಯಲು ಅವಕಾಶ: ರಾಜ್ಯ ಸರ್ಕಾರದ ಆದೇಶ

ರಾಜ್ಯದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಪ್ರಮಾಣ ಹೆಚ್ಚಾಗಿರುವಂತೆಯೇ ಇತ್ತ ಕರ್ನಾಟಕ ಸರ್ಕಾರ ಕೋವಿಡ್ ಮಾರ್ಗ ಸೂಚಿಗಳಲ್ಲಿ ಬದಲಾವಣೆ ಮಾಡಿದ್ದು, ವಾರದ ಸಂತೆಗಳನ್ನು ಬಂದ್ ಮಾಡಿ ಆದೇಶ ನೀಡಿದೆ.

Karnataka bans weekly markets

ಬೆಂಗಳೂರು: ರಾಜ್ಯದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಪ್ರಮಾಣ ಹೆಚ್ಚಾಗಿರುವಂತೆಯೇ ಇತ್ತ ಕರ್ನಾಟಕ ಸರ್ಕಾರ ಕೋವಿಡ್ ಮಾರ್ಗ ಸೂಚಿಗಳಲ್ಲಿ ಬದಲಾವಣೆ ಮಾಡಿದ್ದು, ವಾರದ ಸಂತೆಗಳನ್ನು ಬಂದ್ ಮಾಡಿ ಆದೇಶ ನೀಡಿದೆ.

ಹೌದು..ದಿನಸಿ ಮತ್ತು ಎಪಿಎಂಸಿ ಮಾರುಕಟ್ಟೆಯನ್ನು ಬೆಳಿಗ್ಗೆ 6 ಗಂಟೆಯಿಂದ 12ರವರೆಗೆ ತೆರೆಯಲು ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಇದರೊಂದಿಗೆ ವಾರದ ಸಂತೆಗಳನ್ನು ಬಂದ್ ಮಾಡಿದೆ. ಮೇ 2ರ ಭಾನುವಾರದಿಂದ ಅನ್ವಯವಾಗುವಂತೆ ಈ ಪರಿಷ್ಕೃತ ಆದೇಶ ಜಾರಿಯಲ್ಲಿರಲಿದೆ  ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್‌. ಮಂಜುನಾಥ ಪ್ರಸಾದ್ ತಿಳಿಸಿದ್ದಾರೆ.

ಖರೀದಿ ವೇಳೆ ಮಾರುಕಟ್ಟೆಯಲ್ಲಿ ಆಗುತ್ತಿರುವ ನೂಕುನುಗ್ಗಲು, ಜನಸಂದಣಿ ತಪ್ಪಿಸಲು ಈ ಉಪಕ್ರಮ ಕೈಗೊಳ್ಳಲಾಗಿದೆ. ವಾರದ ಸಂತೆ ಸೇರಿದಂತೆ ಎಲ್ಲ ರೀತಿಯ ಸಂತೆಗಳನ್ನೂ ನಿರ್ಬಂಧಿಸಲಾಗಿದೆ. ಅದರ ಬದಲಿಗೆ ಹಾಪ್‌ಕಾಮ್ಸ್‌, ಹಾಲಿನ ಬೂತ್‌ಗಳು, ತಳ್ಳುಗಾಡಿಗಳ ಮೂಲಕ ತರಕಾರಿ, ಹಣ್ಣು ಮಾರಾಟ  ಮಾಡುವವರು ಹಾಗೂ ದುಬಾರಿ ಬೆಲೆಗೆ ಮಾರದೇ ಮಾರುಕಟ್ಟೆ ದರದಲ್ಲಿ ವ್ಯಾಪಾರ ಮಾಡುವವರಿಗೆ ಬೆಳಿಗ್ಗೆ 6ರಿಂದ ಸಂಜೆ 6ರವರೆಗೂ ಅವಕಾಶ ನೀಡಲಾಗಿದೆ. ವ್ಯಾಪಾರಿಗಳು ಮಾರುಕಟ್ಟೆ ದರದಲ್ಲಿ ಹಣ್ಣು, ತರಕಾರಿ ಮಾರಾಟ ಮಾಡಬೇಕು. ಹೆಚ್ಚಿನ ಬೆಲೆಗೆ ಮಾರಾಟ ಮಾಡುವಂತಿಲ್ಲ ಎಂಬ ಷರತ್ತಿನೊಂದಿಗೆ  ಅವಕಾಶ ಒದಗಿಸಲಾಗಿದೆ. ಬಿಬಿಎಂಪಿ, ಪೊಲೀಸ್ ಕಮಿಷನರ್, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಈ ಆದೇಶವನ್ನು ಜಾರಿ ಮಾಡಲು ಅವರು ಸೂಚಿಸಿದ್ದಾರೆ.

ಇನ್ನು ಕರ್ನಾಟಕದಲ್ಲಿ ಶನಿವಾರ ಅಂದರೆ ಮೇ 1, ಒಟ್ಟು 40,990 ಮಂದಿಗೆ ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದೆ. 271 ಜನರು ಮೃತಪಟ್ಟಿದ್ದಾರೆ. ಬೆಂಗಳೂರು ನಗರದಲ್ಲಿ ಅತಿಹೆಚ್ಚು, ಅಂದರೆ 19,353 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. 162 ಜನರು ಸಾವನ್ನಪ್ಪಿದ್ದಾರೆ. ಸತತವಾಗಿ 30 ಸಾವಿರದ  ಆಸುಪಾಸಿನಲ್ಲಿ ಬರುತ್ತಿದ್ದ ರಾಜ್ಯದ ಸೋಂಕಿತರ ಸಂಖ್ಯೆ ನಿನ್ನೆಯಿಂದ 40 ಸಾವಿರದ ಗಡಿ ದಾಟುತ್ತಿದೆ. ಪ್ರಸ್ತುತ ರಾಜ್ಯದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 15,64,132ಕ್ಕೆ (15.64 ಲಕ್ಷ) ಏರಿಕೆಯಾಗಿದೆ. ಈ ಪೈಕಿ 11,43,250 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ  ಸೋಂಕಿನಿಂದ 271 ಜನರ ಸಾವನ್ನಪ್ಪಿದ್ದಾರೆ. ಈವರೆಗೆ ಕೊರೊನಾದಿಂದ ಮೃತಪಟ್ಟವರ ಒಟ್ಟು ಸಂಖ್ಯೆ 15,794ಕ್ಕೆ ಏರಿಕೆಯಾಗಿದೆ. 4,05,068 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *