covid caution-ಕೋವಿಡ್ ಮಾರ್ಗಸೂಚಿ ದಿಕ್ಕರಿಸಿ ವ್ಯಕ್ತಿಯನ್ನು ಸಮಾಧಿ ಮಾಡಿದ ನಂತರ ರಾಜಸ್ಥಾನದ ಗ್ರಾಮವೊಂದರಲ್ಲಿ 21 ಜನರ ಸಾವು!

ಕೋವಿಡ್ ಸೋಂಕಿತನ ಶವವನ್ನು ಕೊರೋನಾ ಮಾರ್ಗಸೂಚಿ ಅನುಸರಿಸದೆ ಸಮಾಧಿ ಮಾಡಿದ ನಂತರ ಕಳೆದ ಕೆಲ ದಿನಗಳಲ್ಲೇ ರಾಜಸ್ಥಾನದ ಸಿಕಾರ್ ಜಿಲ್ಲೆಯ ಹಳ್ಳಿಯಲ್ಲಿ ಇಪ್ಪತ್ತೊಂದು ಜನರು ಸಾವನ್ನಪ್ಪಿದ್ದಾರೆ. 

representational purpose only

ಜೈಪುರ: ಕೋವಿಡ್ ಸೋಂಕಿತನ ಶವವನ್ನು ಕೊರೋನಾ ಮಾರ್ಗಸೂಚಿ ಅನುಸರಿಸದೆ ಸಮಾಧಿ ಮಾಡಿದ ನಂತರ ಕಳೆದ ಕೆಲ ದಿನಗಳಲ್ಲೇ ರಾಜಸ್ಥಾನದ ಸಿಕಾರ್ ಜಿಲ್ಲೆಯ ಹಳ್ಳಿಯಲ್ಲಿ ಇಪ್ಪತ್ತೊಂದು ಜನರು ಸಾವನ್ನಪ್ಪಿದ್ದಾರೆ. 

ಏಪ್ರಿಲ್ 15ರಿಂದ ಮೇ 5ರ ನಡುವೆ ವೈರಸ್‌ನಿಂದ ಕೇವಲ ನಾಲ್ಕು ಸಾವುಗಳು ಸಂಭವಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, ಏಪ್ರಿಲ್ 21ರಂದು ಕೋವಿಡ್ ಸೋಂಕಿತನ ದೇಹವನ್ನು ಖೀರ್ವಾ ಗ್ರಾಮಕ್ಕೆ ತರಲಾಯಿತು. ಅಂತ್ಯಕ್ರಿಯೆಯಲ್ಲಿ ಸುಮಾರು 150 ಜನರು ಭಾಗಿಯಾಗಿದ್ದರು. ಆದರೆ ಈ ವೇಳೆ ಕೊರೋನಾ ಮಾರ್ಗಸೂಚಿ ಅನ್ನು ಅನುಸರಿಸದೆ ಸಮಾಧಿ ಮಾಡಲಾಯಿತು. ಶವವನ್ನು ಪ್ಲಾಸ್ಟಿಕ್ ಚೀಲದಿಂದ ಹೊರತೆಗೆದು ಸಮಾಧಿ ಸಮಯದಲ್ಲಿ ಹಲವಾರು ಜನರು ಅದನ್ನು ಮುಟ್ಟಿದ್ದಾರೆ ಎಂದು ಅಧಿಕಾರಿಗಳು ಹೇಳಿದರು.

’21 ಸಾವುಗಳಲ್ಲಿ ಕೋವಿಡ್ ಕಾರಣದಿಂದಾಗಿ ಕೇವಲ 3-4 ಸಾವುಗಳು ಸಂಭವಿಸಿವೆ. ಹೆಚ್ಚಿನ ಸಾವುಗಳು ವೃದ್ಧಾಪ್ಯದಿಂದ ಆಗಿವೆ. ‘ನಾವು ಕೋವಿಡ್ -19 ಸಮುದಾಯ ಪ್ರಸರಣವಾಗಿದೆಯೇ ಎಂದು ಪರೀಕ್ಷಿಸಲು ಸಾವು ಸಂಭವಿಸಿದ 147 ಕುಟುಂಬಗಳ ಮಾದರಿಯನ್ನು ನಾವು ತೆಗೆದುಕೊಂಡಿದ್ದೇವೆ ಎಂದು ಲಕ್ಷ್ಮನ್‌ಗಡದ ಉಪ ವಿಭಾಗೀಯ ಅಧಿಕಾರಿ ಕುಲ್ರಾಜ್ ಮೀನಾ ತಿಳಿಸಿದ್ದಾರೆ.

ಗ್ರಾಮದಲ್ಲಿ ಸ್ಯಾನಿಟೈಸೇಶನ್ ಡ್ರೈವ್ ನಡೆಸಲಾಗಿದೆ. ಸಮಸ್ಯೆಯ ತೀವ್ರತೆಯ ಬಗ್ಗೆ ಗ್ರಾಮಸ್ಥರಿಗೆ ವಿವರಿಸಲಾಗಿದ್ದು, ಈಗ ಅವರು ಸಹಕರಿಸುತ್ತಿದ್ದಾರೆ ಎಂದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *