ಸದ್ಯಕ್ಕೆ 18 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ ಲಭ್ಯವಿಲ್ಲ

: ರಾಜ್ಯ ಸರ್ಕಾರ ನಿರ್ಧಾರ -ಮುಂದಿನ ಸೂಚನೆ ಬರುವವರೆಗೆ ನಾಳೆ ಅಂದರೆ ಮೇ 14ರಿಂದ ತಾತ್ಕಾಲಿಕವಾಗಿ 18ರಿಂದ 44 ವರ್ಷದೊಳಗಿನವರಿಗೆ ಕೊರೋನಾ ಲಸಿಕೆ ನೀಡುವುದನ್ನು ಸ್ಥಗಿತಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

Representational image

ಬೆಂಗಳೂರು:ಮುಂದಿನ ಸೂಚನೆ ಬರುವವರೆಗೆ ನಾಳೆ ಅಂದರೆ ಮೇ 14ರಿಂದ ತಾತ್ಕಾಲಿಕವಾಗಿ 18ರಿಂದ 44 ವರ್ಷದೊಳಗಿನವರಿಗೆ ಕೊರೋನಾ ಲಸಿಕೆ ನೀಡುವುದನ್ನು ಸ್ಥಗಿತಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಈಗಾಗಲೇ ಬುಕ್ಕಿಂಗ್ ಮಾಡಿಕೊಂಡ 18ರಿಂದ 44 ವರ್ಷದೊಳಗಿನವರಿಗೆ ಸಹ ಸದ್ಯಕ್ಕೆ ಲಸಿಕೆ ನೀಡುವುದಿಲ್ಲ ಎಂದು ಸರ್ಕಾರ ಹೇಳಿದೆ. ರಾಜ್ಯದಲ್ಲಿರುವ ಎಲ್ಲಾ ಸರ್ಕಾರಿ ಕೇಂದ್ರಗಳಲ್ಲಿ ನೀಡುವ ಲಸಿಕೆ ವಿತರಣೆ ವ್ಯವಸ್ಥೆಗೆ ಸರ್ಕಾರದ ಈ ಹೊಸ ಆದೇಶ ಅನ್ವಯವಾಗಲಿದೆ.

ರಾಜ್ಯ ಸರ್ಕಾರ ಕೊರೋನಾ ಲಸಿಕೆಯ ತೀವ್ರ ಕೊರತೆಯನ್ನು ಎದುರಿಸುತ್ತಿದ್ದು, ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಎರಡು ಕೋಟಿ ಲಸಿಕೆ ತರಿಸಿಕೊಳ್ಳಲು ಜಾಗತಿಕ ಟೆಂಡರ್ ಕರೆಯಲು ನಿರ್ಧರಿಸಿದೆ. ಈ ಮೂಲಕ 18ರಿಂದ 44 ವರ್ಷದೊಳಗಿನವರಿಗೆ ಲಸಿಕೆ ನೀಡಲು ನಿಶ್ಚಯಿಸಿದೆ.

45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಸಂಪೂರ್ಣವಾಗಿ ಲಸಿಕೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು ಎರಡನೇ ಡೋಸ್ ಪಡೆಯುವವರಿಗೆ ಕೊರತೆಯಾಗುತ್ತಿರುವುದರಿಂದ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಸ್ಥಗಿತಗೊಳಿಸಲು ಸದ್ಯಕ್ಕೆ ನಿರ್ಧರಿಸಿದೆ. ಸದ್ಯ 18ರಿಂದ 44 ವರ್ಷದವರೆಗಿನವರಿಗೆ ತೆಗೆದುಕೊಂಡಿರುವ ಲಸಿಕೆಗಳನ್ನು 45 ವರ್ಷಕ್ಕೆ ಮೇಲ್ಪಟ್ಟವರಿಗೆ ಎರಡನೇ ಡೋಸ್ ನೀಡಲು ಬಳಸಿಕೊಳ್ಳಲಾಗುತ್ತದೆ. ಹೀಗಾಗಿ ಕೇಂದ್ರ ಸರ್ಕಾರದಿಂದ ಬಂದಿರುವ ಮತ್ತು ರಾಜ್ಯ ಸರ್ಕಾರ ನೇರವಾಗಿ ಖರೀದಿಸಿರುವ ಕೊರೋನಾ ಲಸಿಕೆಗಳನ್ನು 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮಾತ್ರ ನೀಡಲು ನಿರ್ಧರಿಸಲಾಗಿದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *